
ಬೆಂಗಳೂರು (ಆ.14): 2026ರ ಸ್ವಾತಂತ್ರ್ಯ ದಿನೋತ್ಸವದ ಸಂದರ್ಭದಲ್ಲಿ ದೇಶಸೇವೆಯಲ್ಲಿ ಗಣನೀಯ ಹಾಗೂ ವಿಶಿಷ್ಟ ಸೇವೆ ಸಲ್ಲಿಸಿದ ರಾಜ್ಯದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕೇಂದ್ರ ಗೃಹ ಸಚಿವಾಲಯವು ‘ರಾಷ್ಟ್ರಪತಿ ಪೊಲೀಸ್ ಪದಕ’ಗಳನ್ನು ಘೋಷಿಸಿದೆ. ಈ ಬಾರಿ ಕರ್ನಾಟಕ ಪೊಲೀಸ್ ಪಡೆಯ ಒಟ್ಟು 17 ಮಂದಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ಪ್ರತಿಷ್ಠಿತ ಗೌರವಕ್ಕೆ ಭಾಜನರಾಗುವ ಮೂಲಕ ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ.
ಅಪರಾಧ ತಡೆ, ಕಾನೂನು ಸುವ್ಯವಸ್ಥೆ ಪರಿಪಾಲನೆ ಹಾಗೂ ಸಾರ್ವಜನಿಕ ಸೇವೆಯಲ್ಲಿ ತೋರಿದ ನಿಷ್ಠೆಯನ್ನು ಗುರುತಿಸಿ ಈ ಪ್ರಶಸ್ತಿಗಳನ್ನು ನೀಡಲಾಗಿದೆ.
ಸಿಸಿಬಿ (CCB) ವಿಭಾಗದಲ್ಲಿ ಸಹಾಯಕ ಪೊಲೀಸ್ ಕಮಿಷನರ್ (ACP) ಆಗಿ ಕಾರ್ಯನಿರ್ವಹಿಸುತ್ತಿರುವ ಹೆಚ್.ಎನ್. ಧರ್ಮೇಂದ್ರ ಅವರಿಗೆ 2026ರ ಅತ್ಯುನ್ನತ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ ಘೋಷಣೆಯಾಗಿದೆ. ತಮ್ಮ ದೀರ್ಘಕಾಲದ ಸೇವೆಯಲ್ಲಿ ಹಲವು ಪ್ರಮುಖ ಹಾಗೂ ಸಂಕೀರ್ಣ ಅಪರಾಧ ಪ್ರಕರಣಗಳನ್ನು ಭೇದಿಸುವಲ್ಲಿ ಇವರು ವಹಿಸಿದ ಪ್ರಮುಖ ಪಾತ್ರವನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ.
ರಾಜ್ಯದ ವಿವಿಧ ವಿಭಾಗಗಳು, ಸಿಐಡಿ, ಸಶಸ್ತ್ರ ಪಡೆ ಹಾಗೂ ತರಬೇತಿ ಕೇಂದ್ರಗಳಲ್ಲಿ ಶ್ರಮಿಸಿದ 16 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಶ್ಲಾಘನೀಯ ಸೇವಾ ಪದಕ (Meritorious Service Medal) ಲಭಿಸಿದೆ. ಅವರ ವಿವರ ಇಲ್ಲಿದೆ:
ಕರ್ತವ್ಯ ನಿಷ್ಠೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಿ ರಾಷ್ಟ್ರಮಟ್ಟದಲ್ಲಿ ಗೌರವಕ್ಕೆ ಪಾತ್ರರಾದ ರಾಜ್ಯದ ಎಲ್ಲಾ 17 ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು (DGP) ಮತ್ತು ಹಿರಿಯ ಅಧಿಕಾರಿಗಳು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.