ಸರ್ಕಾರಿ ಕಚೇರಿಗಳ ಟೈಮಿಂಗ್ ಬದಲಾವಣೆ: ಯಾವ್ಯಾವ ಜಿಲ್ಲೆಯಲ್ಲಿ?

By Suvarna News  |  First Published Apr 11, 2021, 5:36 PM IST

ರಾಜ್ಯದಲ್ಲಿ ಈಗಾಗಲೇ ಬಿಸಿಲಿನ ಬೇಗೆ ತೀವ್ರಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ ಮಾಡಲಾಗಿದೆ. ಯಾವ್ಯಾವ ಜಿಲ್ಲೆಗೆ ಎಷ್ಟು ದಿನ ಅನ್ವಯ? ಇಲ್ಲಿದೆ ಮಾಹಿತಿ..


ಬೆಂಗಳೂರು, (ಏ.11): ರಾಜ್ಯದಲ್ಲಿ ಬಿಸಿಲಿನ ಬೇಗೆ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣೆ ಸಮಯವನ್ನು ಬದಲಾವಣೆ ಮಾಡಲಾಗಿದ್ದು, ನಾಳೆಯಿಂದಲೇ (ಏ.12) ಜಾರಿ ಆಗಲಿದೆ.

ಬಿಸಿಲಿನ ತಾಪಮಾನ ಗರಿಷ್ಠಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಬಿ ಎಸ್ ರವಿಕುಮಾರ್‌ರಿಂದ ಆದೇಶ ಹೊರಡಿಸಿದ್ದಾರೆ.

Tap to resize

Latest Videos

undefined

ಹುಷಾರ್‌: ಮುಂದಿನ ವಾರ ಇನ್ನಷ್ಟು ಹೆಚ್ಚಲಿದೆ ಬಿಸಿಲು..!

 ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ, ಕೊಪ್ಪಳ ಹಾಗೂ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ ಆಗಲಿದೆ.

ಈ ಮೇಲಿನ ಜಿಲ್ಲಾ ವ್ಯಾಪ್ತಿಗಳ ಸರ್ಕಾರಿ ಕಚೇರಿಗಳು ಏ.12ರಿಂದ ಮೇ 31ರ ವರೆಗೆ ಬದಲಾದ ವೇಳಾಪಟ್ಟಿ ಪ್ರಕಾರ ಕೆಲಸ ನಿರ್ವಹಿಸಲಿವೆ. ಅಂದರೆ ಇಲ್ಲಿನ ಸರ್ಕಾರಿ ಕಚೇರಿಗಳ ಕೆಲಸದ ಸಮಯ ಬೆಳಗ್ಗೆ 8ರಿಂದ ಮಧ್ಯಾನ 1.30ರ ವರೆಗೆ ಮಾತ್ರ ಇರಲಿವೆ. 

ಆದ್ರೆ, ಕೊರೋನಾ ತುರ್ತು ಸಂದರ್ಭಗಳಲ್ಲಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನಿರ್ದೇಶನದಂತೆ ಕೆಲಸ ನಿರ್ವಹಿಸಬೇಕು ಎಂದು ಬಿ.ಎಸ್. ರವಿಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ.

click me!