2011ರ ಕೆಪಿಎಸ್‌ಸಿ ಅಭ್ಯರ್ಥಿ‌ಗಳ ನೇಮಕಾತಿ ಸೇರಿ ಹಲವು ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ!

By Suvarna News  |  First Published Feb 9, 2022, 8:52 PM IST

ಕೆಪಿಎಸ್‌ಸಿ 2011 ರ ಅಭ್ಯರ್ಥಿ ಆಯ್ಕೆ ಗೊಂದಲ  ವಿಚಾರವಾಗಿ ನೇಮಕಾತಿ ಸಂಬಂಧ ಮಸೂದೆ ಮಂಡನೆ ಮಾಡಲು ಸರ್ಕಾರ ತೀರ್ಮಾನ ಮಾಡಿದೆ ಎಂದು ಸಚಿವ ಮಾಧುಸ್ವಾಮಿ ಹೇಳಿಕೆ ನೀಡಿದ್ದಾರೆ. ಇದಲ್ಲದೆ ಹಲವು ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.


ಬೆಂಗಳೂರು(ಫೆ.9): ಕೆಪಿಎಸ್‌.ಸಿ (KPSC) 2011 ರ ಅಭ್ಯರ್ಥಿ ಆಯ್ಕೆ ಗೊಂದಲ ವಿಚಾರವಾಗಿ ನೇಮಕಾತಿ ಸಂಬಂಧ ಮಸೂದೆ ಮಂಡನೆ ಮಾಡಲು ಸರ್ಕಾರ ತೀರ್ಮಾನ ಮಾಡಿದೆ. ಕೆಪಿಎಸ್.ಸಿ ನೋಟಿಫೈ ಮಾಡಿದ್ದ ಪಟ್ಟಿಯನ್ನು ಒಪ್ಪಲು ಕ್ಯಾಬಿನೆಟ್ ತೀರ್ಮಾನಿದೆ ಎಂದು   ಸಚಿವ ಮಾಧುಸ್ವಾಮಿ (minister madhuswamy) ಹೇಳಿದ್ದಾರೆ. 2011ನೇ ಸಾಲಿನ ಕೆಪಿಎಸ್​​​ಸಿ ಗೆಜೆಟೆಡ್ ಅಧಿಕಾರಿಗಳ ನೇಮಕಾತಿಯ ಆಯ್ಕೆ ಪಟ್ಟಿಗೆ ಸಚಿವ ಸಂಪುಟ ಅಸ್ತು ನೀಡಿದೆ. ಒಟ್ಟು 362 ಗಜೆಟೆಡ್ ಅಧಿಕಾರಿಗಳ ಹುದ್ದೆ ನೇಮಕಾತಿಯನ್ನು ಸಿಂಧುಗೊಳಿಸುವ ನಿಟ್ಟಿನಲ್ಲಿ ಮಸೂದೆಯನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಲು ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ತಿಳಿಸಿದರು.

ಇದಲ್ಲದೆ ರೈತರ ಸಹಕಾರಿ ಸಕ್ಕರೆ ಕಾರ್ಖಾನೆ. ರನ್ನ ನಗರ, ಮುಧೋಳ ತಾಲ್ಲೂಕು, ಬಾಗಲಕೋಟೆ ಜಿಲ್ಲೆ-ಈ ಕಾರ್ಖಾನೆಯನ್ನು ಎಲ್.ಆರ್.ಓ.ಟಿ. ಆಧಾರದ ಮೇಲೆ ಗಿರಿಜಾರಮಣ ಇಂಪಕ್ ಪ್ರೈವೇಟ್ ಲಿ. ಬೆಂಗಳೂರು ಇವರಿಗೆ 40 ವರ್ಷಗಳ ಅವಧಿಗೆ 320 ಕೋಟಿಗೆ ಗುತ್ತಿಗೆ ನೀಡಿ ಆದೇಶ ಹೊರಡಿಸಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ ಎಂದು ಸಚಿವ ಮಾಧುಸ್ವಾಮಿ ಹೇಳಿದರು.

Tap to resize

Latest Videos

undefined

ಇಂದು ನಡೆದ ಸಂಪುಟ‌ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಬೆಳಗಾವಿ ಜಿಲ್ಲೆ, ಅಥಣಿ ತಾಲ್ಲೂಕಿನ ಝಂಜುರವಾಡ ಗ್ರಾಮದ ಹತ್ತಿರ ಕೃಷ್ಣಾ ನದಿಯಿಂದ ಏತ ನೀರಾವರಿ ಯೋಜನ ಮೂಲಕ ಯಲ್ಲಮ್ಮನವಾಡಿ ಕೆರೆಗೆ ನೀರು ತುಂಬಿಸುವ ಯೋಜನೆಯ ಮೊದಲನೇ ಹಂತದ ಕಾಮಗಾರಿಯನ್ನು ರೂ. 49.51 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು.

BDA Recruitment 2022: ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿದ ಬಿಡಿಎ

ಕಲಬುರಗಿ ಜಿಲ್ಲೆಯ ಅಫಜಲಪೂರ ತಾಲೂಕಿನ ಬಾದನಳ್ಳಿಯಿಂದ ಗೌಡಗಾಂವ ಜಿಲ್ಲಾ ಮುಖ್ಯ ರಸ್ತೆ 9.60 ಕಿ.ಮೀ ರಸ್ತೆ ಸುಧಾರಣೆ ಕಾಮಗಾರಿಯ ರೂ. 10.97 ಕೋಟಿಗಳ ಪರಿಷ್ಕೃತ ಅಂದಾಜಿಗೆ  KKRDB ಅನುದಾನ ಒದಗಿಸಲು ಆಡಳಿತಾತ್ಮಕ ಒಪ್ಪಿಗೆ ನೀಡಲಾಗಿದೆ ಎಂದರು.

ಕೋಲಾರ ಜಿಲ್ಲೆ, ಮಾಲೂರು ತಾಲ್ಲೂಕು, ಮಾಸ್ತಿ ಗ್ರಾಮದಲ್ಲಿ ಮಾಸ್ತಿ ವೆಂಕಟೇಶ ಅಯ್ಯಂಗಾರ್ ವಸತಿ ಶಾಲಾ (ಹಿಂದುಳಿದ ವರ್ಗ) ಕಟ್ಟಡ ನಿರ್ಮಾಣ ಕಾಮಗಾರಿಯ ರೂ. 17.00 ಕೋಟಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಭಿವೃದ್ಧಿಪಡಿಸುತ್ತಿರುವ ರೂ. 28.63 ಕೋಟಿಗಳ ಮೊತ್ತದ ಆರು ರಸ್ತೆ ಕಾಮಗಾರಿಗಳ ಸ್ಥಳಗಳನ್ನು ಬದಲಾವಣೆ ಮಾಡಲು ಅನುಮೋದನೆ ನೀಡಲಾಗಿದೆ ಎಂದರು.

ವಿಜಯಪುರ ಮಹಾನಗರಪಾಲಿಕೆಯಲ್ಲಿ ದೀರ್ಘಾವಧಿ ಗುತ್ತಿಗೆಗೆ ನೀಡಿರುವ ಆಸ್ತಿಗಳ ಪೈಕಿ ಉಳಿಕೆ 366 ಲೀಸ್ ಆಸ್ತಿಗಳನ್ನೂ ಸಹ ಸರ್ಕಾರ ಈಗಾಗಲೇ ನಿಗದಿಪಡಿಸಿರುವ ದರಕ್ಕೆ ಬಡ್ಡಿ ಮೊತ್ತ ಸೇರಿಸಿ ಖರೀದಿಗೆ ಮಂಜೂರಾತಿ ನೀಡಲಾಗಿದೆ.

ಬೆಂಗಳೂರು ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ: ಹಲವು ಮಾರ್ಪಾಡುಗಳೊಂದಿಗೆ ನಿರ್ಮಾಣ ಮಾಡುವ ಪ್ರಸ್ತಾವನೆಗೆ ಅನುಮೋದನೆ,  ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರ್ಮಿಸಲಾಗುವ ನೂತನ ಅನುಭವ ಮಂಟಪದ ನಿರ್ಮಾಣ ಕಾಮಗಾರಿಯ ಅಂದಾಜು ೫೬೦ ಕೋಟಿಗೆ ಆಡಳಿತಾತ್ಮಕ ಅನುಮೋದನೆ, ಉತ್ತರ ಕನ್ನಡ ಜಿಲ್ಲೆ, ಕುಮಟಾ ತಾಲ್ಲೂಕು, ಮಿನಿ ವಿಧಾನ ಸೌಧ ಕಟ್ಟಡದ ಕಾಮಗಾರಿಯ ರೂ. 16.28 ಕೋಟಿಗಳ ಪರಿಷ್ಕೃತ ಅಂದಾಜು ಪಟ್ಟಿಗೆ ಅನುಮೋದನೆ ನೀಡಿ ಆದೇಶ ಹೊರಡಿಸಿರುವ ಕ್ರಮಕ್ಕೆ ಘಟನೋತ್ತರ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು.

'ಕರ್ನಾಟಕ ಮುದ್ರಾಂಕ (ತಿದ್ದುಪಡಿ) ವಿಧೇಯಕ, 2022' ಅನುಮೋದನೆ, ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ನಿಡುಗುರ್ತಿ ಮತ್ತು ಇತರೆ 60 ಜನವಸತಿಗಳಿಗೆ ಜಲ ಜೀವನ ಮಿಷನ್‌ಡಿ ಬಹುಗ್ರಾಮ ಕುಡಿಯುವ ನೀರು ಸರಬರಾಜಿನ ರೂ. 131.21 ಕೋಟಿಗಳ ಅಂದಾಜು ಮೊತ್ತದ, ಯೋಜನೆಯನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ, ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆವಿನಹಳ್ಳಿ ಮತ್ತು ಇತರೆ 336 ಜನವಸತಿಗಳನ್ನೊಳಗೊಂಡ 122 ಗ್ರಾಮಗಳಿಗೆ ಜಲ ಮಿಷನ್‌ನಡಿ ಬಹುಗ್ರಾಮ ಕುಡಿಯುವ ಜೀವನ ಸರಬರಾಜಿನ ರೂ. 88 ಕೋಟಿಗಳ ಅಂದಾಜು ಮೊತ್ತದ ಯೋಜನೆಯನ್ನು  ಅನುಷ್ಠಾನಗೊಳಿಸಲು ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

IISC Recruitment 2022: ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ತಾಂತ್ರಿಕ ಹುದ್ದೆಗಳಿಗೆ ಅರ್ಜಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಅಮಾನಿ ಬೈರಸಾಗರ ಕೆರೆಯ ಸುತ್ತಮುತ್ತಲಿನ 28 ಜನವಸತಿಗಳಿಗೆ ಜೀವನ್ ಮಿಷನ್‌ನಡಿ ಬಹುಗ್ರಾಮ ಕುಡಿಯುವ ನೀರು ಸರಬರಾಜಿನ 15 ಕೋಟಿಗಳ ಅಂದಾಜು ಮೊತ್ತದ ಯೋಜನೆಯನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ತಾಲ್ಲೂಕಿನ ಗೋವಿಂದಪುರ ಹಾಗೂ ಇತರೆ | ಜನವಸತಿಗಳು ಮತ್ತು ಗೋಪಿಶೆಟ್ಟಿಕೊಪ್ಪದ | ನಗರ ಪ್ರದೇಶಕ್ಕೆ ಜಲ ಜೀವನ್ ಮಿಷನ್ ಅಡಿ ಬಹುಗ್ರಾಮ ಕುಡಿಯುವ ನೀರು ಸರಬರಾಜಿನ ರೂ. 16.73 ಕೋಟಿಗಳ ಅಂದಾಜು ಮೊತ್ತದ ಯೋಜನೆಯನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ವಾಸರಕುದ್ರಿಗೆ ಮತ್ತು ಇತರೆ 5 ಗ್ರಾಮಗಳಿಗೆ (23 ಜನವಸತಿಗಳು) ಜಲ ಜೀವನ್ ಮಿಷನ್‌ ಅಡಿ ಬಹುಗ್ರಾಮ ಕುಡಿಯುವ ನೀರು ಸರಬರಾಜಿನ ರೂ. 30.27 ಕೋಟಿಗಳ ಅಂದಾಜು ಮೊತ್ತದ ಯೋಜನೆಯನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ 22 ಗ್ರಾಮಗಳ (43 ಜನವಸತಿಗಳು) ಜಲ ಜೀವನ್ ಮಿಷನ್ ಅಡಿ ಹಾಗೂ ಕೆರವಾಡಿ ಮತ್ತು ಇತರೆ 17 ಗ್ರಾಮಗಳ (42 ಜನವಸತಿಗಳು) ಸಂಯೋಜಿತ ಬಹುಗ್ರಾಮ ಕುಡಿಯುವ ನೀರು ಸರಬರಾಜಿನ ರೂ. 88.50 ಕೋಟಿಗಳ ಮೊತ್ತದ ಯೋಜನೆಯನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ 9200 ಕೋಟಿ ರೂ 45:55 ಶೇರಿಂಗ್ ನಲ್ಲಿ 4500 ಕೋಟಿ ರೂ ಸಾಲ ಪಡೆಯಲು ಸರ್ಕಾರದ ತೀರ್ಮಾನವಾಗಿದೆ ಎಂದು ತಿಳಿಸಿದರು.

click me!