ಅನಗತ್ಯ ಖರ್ಚಿಗೆ ಬೊಮ್ಮಾಯಿ ಬ್ರೇಕ್: ಕಾರ್ಯಕ್ರಮಗಳಲ್ಲಿ ಹಾರ, ತುರಾಯಿ ಎಲ್ಲವೂ ಬಂದ್!

Published : Aug 10, 2021, 02:04 PM ISTUpdated : Aug 10, 2021, 02:10 PM IST
ಅನಗತ್ಯ ಖರ್ಚಿಗೆ ಬೊಮ್ಮಾಯಿ ಬ್ರೇಕ್: ಕಾರ್ಯಕ್ರಮಗಳಲ್ಲಿ ಹಾರ, ತುರಾಯಿ ಎಲ್ಲವೂ ಬಂದ್!

ಸಾರಾಂಶ

* ಇನ್ನು ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ ತುರಾಯಿ ಹಾಕದಂತೆ ಸಿಎಂ ಸೂಚನೆ... * ಅನಗತ್ಯ ಖರ್ಚು ವೆಚ್ಚ ಮಾಡಂದತೆ ಸೂಚನೆ. * ಇನ್ನು ಮುಂದೆ ಯಾವುದೇ ಕಾರ್ಯಕ್ರಮದಲ್ಲಿ ಹಾರ ತುರಾಯಿ, ಪೇಟ ಶಾಲು ಹಾಕದಂತೆ ತಾಕೀತು

ಬೆಂಗಳೂರು(ಆ.10): ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಾಮಾನ್ಯವಾಗಿ ಅನಗತ್ಯ ಖರ್ಚು ಹೆಚ್ಚಾಗಿ ನಡೆಯುತ್ತದೆ. ಅದೆಷ್ಟೇ ಸರಳ ಕಾರ್ಯಕ್ರಮವಾದರೂ ಹೂವು, ಹಣ್ಣು ಹಂಪಲು, ತುರಾಯಿ ಎಂದು ಹಣ ವ್ಯಯಿಸಲಾಗುತ್ತದೆ. ಆದರೀಗ ಈ ವಿಧಿ ವಿಧಾನಗಳಿಗೆ ಬ್ರೇಕ್ ಹಾಕಿರುವ ಕರ್ನಾಟಕ ಸಿಎಂ ಬೊಮ್ಮಾಯಿ ಎಲ್ಲಾ ಖರ್ಚುಗಳಿಗೆ ತಡೆ ಹಾಕಿದ್ದಾರೆ.

ಬೊಮ್ಮಾಯಿಗೆ ಒಬಿಸಿ ಮೀಸಲು ಅಗ್ನಿಪರೀಕ್ಷೆ

ಹೌದು ಮುಖ್ಯಮಂತ್ರಿಗಳ ಕಚೇರಿಯಿಂದ ಈ ಬಗ್ಗೆ ಪ್ರಕಟನೆಯೊಂದನ್ನು ಹೊರಡಿಸಲಾಗಿದ್ದು, ಇದರಲ್ಲಿ ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡಬಾರದೆಂದು ಈ ಮೂಲಕ ನಿರ್ದೇಶಿಸಿದೆ. ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡಬಹುದು ಎಂದು ಹೇಳಲಾಗಿದೆ.

ಅಲ್ಲದೇ ಈ ನಿರ್ದೇಶನವನ್ನು ಚಾಚೂ ತಪ್ಪದೇ ಅನುಷ್ಟಾನಗೊಳಿಸಲು ಸಂಬಂಧಪಟ್ಟ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ರಾಜ್ಯ ಸರ್ಕಾರದ ಸ್ವಾಮ್ಯಕ್ಕೊಳಪಡುವ ಎಲ್ಲಾ ಸಂಸ್ಥೆಗಳು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಅಧಿಕಾರಿಗಳಿಗೆ ಸೂಚಿಸುವಂತೆ ತಿಳಿಸಿದೆ ಎಂದೂ ಇಲ್ಲಿ ಉಲ್ಲೇಖಿಸಲಾಗಿದೆ.

ನಿಲ್ಲದ ಬಿಜೆಪಿ ಭಿನ್ನಮತ: ಸಂಪುಟ ಸಂಕಟ ಈಗ ದಿಲ್ಲಿಗೆ!

ಬಸವರಾಜ ಬೊಮ್ಮಾಯಿ ಕರ್ನಾಟಕ ಸಿಎಂ ಆಗಿ ಅಧಿಕಾರ ಸ್ವೀಕರಿಸಿದಾಗಿನಿಂದ ಅನೇಕ ಮಹತ್ವದ ಕ್ರಮಗಳನ್ನು ಕೈಗೊಂಡಿದ್ದು, ಸದ್ಯ ಸರ್ಕಾರಿ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ತೆಗೆದುಕೊಂಡ ಈ ನಿರ್ಧಾರ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. 

PREV
click me!

Recommended Stories

ಮಂಗಳೂರು: 'ಡಿಕೆಶಿ ಮುಂದಿನ ಸಿಎಂ’ ಘೋಷಣೆ ಕೂಗಿದ ಐವನ್, ಮಿಥುನ್‌ಗೆ ನೋಟಿಸ್?
ಸೋಶಿಯಲ್ ಮೀಡಿಯಾದಿಂದ ದೂರವಿದ್ದು 10 ಸರ್ಕಾರಿ ನೌಕರಿ ಪಡೆದು ಸ್ಫೂರ್ತಿಯಾದ ಸಾಧಕ!