KERC Recruitment 2022: ರಾಜ್ಯ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಲ್ಲಿ ಉದ್ಯೋಗವಕಾಶ, ಇಂದೇ ಅರ್ಜಿ ಸಲ್ಲಿಸಿ

Published : Feb 01, 2022, 10:36 PM IST
KERC Recruitment 2022: ರಾಜ್ಯ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಲ್ಲಿ ಉದ್ಯೋಗವಕಾಶ, ಇಂದೇ ಅರ್ಜಿ ಸಲ್ಲಿಸಿ

ಸಾರಾಂಶ

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಫ್‌ಲೈನ್ ಮೂಲಕ  ಮಾರ್ಚ್​ 7 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. 

ಬೆಂಗಳೂರು(ಫೆ.1): ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ(Karnataka Electricity Regulatory Commission - KERC) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.  ಚೇರ್​ಪರ್ಸನ್ (Chairperson) ಹುದ್ದೆಗಳು ಖಾಲಿ ಇದ್ದು, ಬೆಂಗಳೂರಿನಲ್ಲಿ (Bengaluru) ಉದ್ಯೋಗ ಮಾಡಲು ಇಚ್ಛಿಸುವ ಅರ್ಹ ಮತ್ತು ಆಸಕ್ತರು ಆಫ್‌ಲೈನ್ ಮೂಲಕ  ಮಾರ್ಚ್​ 7 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.  ಹೆಚ್ಚಿನ ಮಾಹಿತಿಗಾಗಿ https://kerc.karnataka.gov.in/ ಗೆ ಭೇಟಿ ನೀಡಬಹುದು. ಅಥವಾ ಈ ಲಿಂಕ್ ಕ್ಲಿಕ್ ಮಾಡಿ.

ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಲ್ಲಿ ಖಾಲಿ ಇರುವ ಚೇರ್​ಪರ್ಸನ್  ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಆಯೋಗದ ನೇಮಕಾತಿ ಅಧಿಸೂಚನೆ ಪ್ರಕಾರ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಅಭ್ಯರ್ಥಿಗಳ ಅನುಭವ: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಲ್ಲಿ ಖಾಲಿ ಇರುವ ಚೇರ್​ಪರ್ಸನ್  ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಎಂಜಿನಿಯರಿಂಗ್, ಆರ್ಥಿಕತೆ, ಅರ್ಥಶಾಸ್ತ್ರ, ವಾಣಿಜ್ಯ, ಕಾನೂನು ಅಥವಾ ಆಡಳಿತದಂತಹ ವಿಷಯಗಳಲ್ಲಿ ಸಂಪೂರ್ಣ ಜ್ಞಾನ ಮತ್ತು ಅನುಭವವನ್ನು ಹೊಂದಿರಬೇಕು. ಅಭ್ಯರ್ಥಿಯು ಭಾರತೀಯನಾಗಿರಬೇಕು ಮತ್ತು  ಕನ್ನಡ ಭಾಷೆಯ ಜ್ಞಾನವನ್ನು ಚೆನ್ನಾಗಿರಬೇಕು. ಮಾತ್ರವಲ್ಲ ಅಭ್ಯರ್ಥಿಯು ಕನಿಷ್ಠ 25 ವರ್ಷಗಳ ಅನುಭವವನ್ನು ಹೊಂದಿರಬೇಕು ಮತ್ತು  ಸಂಬಂಧಿತ ಕ್ಷೇತ್ರದಲ್ಲಿ ಹಿರಿಯ ಮಟ್ಟದ ಹುದ್ದೆಯಲ್ಲಿ ಕೆಲಸ ಮಾಡಿದ ಅನುಭವವಿರಬೇಕು.

BWSSB RECRUITMENT 2022: ಬೆಂಗಳೂರು ಜಲಮಂಡಳಿಯಲ್ಲಿ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ವಯೋಮಿತಿ:  ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಲ್ಲಿ ಖಾಲಿ ಇರುವ ಚೇರ್​ಪರ್ಸನ್  ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗೆ 65 ವರ್ಷ ಮೀರಿರಬಾರದು. ವರ್ಗಾನುಸಾರ ವಯೋಮಿತಿ ಸಡಿಲಿಕೆ ಇದೆ.

ವೇತನ ವಿವರ: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಲ್ಲಿ ಖಾಲಿ ಇರುವ ಚೇರ್​ಪರ್ಸನ್  ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗೆ ನಿಯಮಾನುಸಾರ ವೇತನ ಸಿಗಲಿದೆ.

ಆಯ್ಕೆ ಪ್ರಕ್ರಿಯೆ: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಲ್ಲಿ ಖಾಲಿ ಇರುವ ಚೇರ್​ಪರ್ಸನ್  ಹುದ್ದೆಗೆ ಅಭ್ಯರ್ಥಿಗಳ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. 

ಅಗತ್ಯ ದಾಖಲೆಗಳೊಂದಿಗೆ ಅರ್ಜಿ  ಸಲ್ಲಿಸಬೇಕಾದ ವಿಳಾಸ:
ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ
ಇಂಧನ ಇಲಾಖೆ
ಕೊಠಡಿ ಸಂಖ್ಯೆ 236, 2ನೇ ಮಹಡಿ, ವಿಕಾಸಸೌಧ
ಡಾ.ಬಿ.ಆರ್. ಅಂಬೇಡ್ಕರ್ ವೀಧಿ
ಬೆಂಗಳೂರು - 560001

Bengaluru Anganwadi Recruitment 2022: ಬೆಂಗಳೂರಿನಲ್ಲಿ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಜಲಮಂಡಳಿಯಲ್ಲಿ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (Bangalore Water Supply and Sewerage Board) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಅಗತ್ಯ ಇರುವ ಕಾನೂನು ಅಧಿಕಾರಿ ಹುದ್ದೆಗೆ ಗುತ್ತಿಗೆ ಆಧಾರದ ಮೇರೆಗೆ ನೇಮಕ ಮಾಡಿಕೊಳ್ಳುತ್ತಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ  ಫೆಬ್ರವರಿ 15 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ https://bwssb.karnataka.gov.in/ ಗೆ ಭೇಟಿ ನೀಡಿ. 

ಅರ್ಹತೆ: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನ್ಯಾಯಾಂಗ ಇಲಾಖೆಯಲ್ಲಿ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತಿ / ಸ್ವಯಂ ನಿವೃತ್ತಿ ಹೊಂದಿರಬೇಕು. 70 ವರ್ಷಗಳ ವಯಸ್ಸಿನ ಒಳಗಿನವರಾಗಿರಬೇಕು ಮತ್ತು ಆರೋಗ್ಯವಾಗಿ ಸದೃಢರಾಗಿರಬೇಕು.

ಅರ್ಜಿ ಸಲ್ಲಿಸುವ ವಿಧಾನ: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವೈಯಕ್ತಿಕ ವಿವರ, ಸರ್ಕಾರಿ ಸೇವೆ ಸಲ್ಲಿಸಿರುವ ವಿವರ ಹಾಗೂ ಪಿಂಚಣಿ ಪುಸ್ತಕದ ನಕಲು ಪ್ರತಿಯ ವಿವರಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ : 'ಮುಖ್ಯ ಆಡಳಿತಾಧಿಕಾರಿ ಹಾಗೂ ಕಾರ್ಯದರ್ಶಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, 1ನೇ ಮಹಡಿ, ಕಾವೇರಿ ಭವನ, ಕೆ.ಜಿ ರಸ್ತೆ, ಬೆಂಗಳೂರು', ಇಲ್ಲಿಗೆ ಖುದ್ದಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಹುದ್ದೆಗೆ ಸಂಬಂಧಿಸಿದ ಇತರ ಮಾಹಿತಿ ಪಡೆಯಲು ಕಚೇರಿಯ ಕರ್ತವ್ಯದ ವೇಳೆ ಬೆಳಿಗ್ಗೆ 10-00 ಗಂಟೆಯಿಂದ ಸಂಜೆ 05-30 ಗಂಟೆಯೊಳಗೆ ಪಡೆಯಲು ಕೋರಲಾಗಿದೆ.

PREV
Read more Articles on
click me!

Recommended Stories

ಮಂಗಳೂರು: 'ಡಿಕೆಶಿ ಮುಂದಿನ ಸಿಎಂ’ ಘೋಷಣೆ ಕೂಗಿದ ಐವನ್, ಮಿಥುನ್‌ಗೆ ನೋಟಿಸ್?
ಸೋಶಿಯಲ್ ಮೀಡಿಯಾದಿಂದ ದೂರವಿದ್ದು 10 ಸರ್ಕಾರಿ ನೌಕರಿ ಪಡೆದು ಸ್ಫೂರ್ತಿಯಾದ ಸಾಧಕ!