ಕರ್ನಾಟಕದಲ್ಲಿ 2021ರ ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮದ ಹಿನ್ನೆಲೆಯಲ್ಲಿ ಅದನ್ನು ರದ್ದುಗೊಳಿಸಿ ಡಿ.23ರಂದು ಮರು ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ಧರಿಸಿದೆ.
ಬೆಂಗಳೂರು (ನ.22): ಕರ್ನಾಟಕದಲ್ಲಿ 2021ರ ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮದ ಹಿನ್ನೆಲೆಯಲ್ಲಿ ಅದನ್ನು ರದ್ದುಗೊಳಿಸಿ ಡಿ.23ರಂದು ಮರು ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ಧರಿಸಿದೆ.
ಕಳೆದ ಮೂರು ವರ್ಷಗಳ ಹಿಂದೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ಪರೀಕ್ಷೆಯಲ್ಲಿ ನಡೆದ ಅಕ್ರಮದ ಹಿನ್ನೆಲೆಯನ್ನು ಅದನ್ನು ರದ್ದುಗೊಳಿಸಿದ ಹೈಕೋರ್ಟ್ ಮರು ಪರೀಕ್ಷೆಯನ್ನು ನಡೆಸಲು ಅವಕಾಶ ನೀಡಲಾಗಿತ್ತು. ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಡಿ.23ರಂದು ಪರೀಕ್ಷೆಯನ್ನು ನಡೆಸಲು ನಿರ್ಧಾರ ಕೈಗೊಂಡಿದ್ದು, ಬೆಂಗಳೂರಿನಲ್ಲಿ ಮಾತ್ರ ಪರೀಕ್ಷೆಯನ್ನು ನಡೆಸಲಾಗುತ್ತದೆ.
undefined
ರಾಜ್ಯದಲ್ಲಿ ಖಾಲಿ ಇರುವ 545 ಪಿಎಸ್‌ಐ ಹುದ್ದೆಗಳನ್ನು ಭರ್ತಿ ಮಾಡಲು ಹಿಂದಿನ ಬಿಜೆಪಿ ರಾಜ್ಯ ಸರ್ಕಾರವು ಅಕ್ಟೋಬರ್ 2021 ರಲ್ಲಿ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಿತು. ಫಲಿತಾಂಶಗಳನ್ನು ಜನವರಿ 2022 ರಲ್ಲಿ ಘೋಷಿಸಲಾಯಿತು . ನಂತರ ಹಲವಾರು ಅಕ್ರಮಗಳು ವರದಿಯಾಗಿವೆ ಮತ್ತು ಅದರ ಆಧಾರದ ಮೇಲೆ ಅನೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಅಂದಿನ ಬಿಜೆಪಿ ಸರಕಾರ ಒತ್ತಡಕ್ಕೆ ಮಣಿದು ಪ್ರಕರಣವನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವರ್ಗಾಯಿಸಲಾಗಿತ್ತು. ತನಿಖೆಯ ಸಮಯದಲ್ಲಿ, ಸಿಐಡಿ ನೇಮಕಾತಿಯ ಮುಖ್ಯಸ್ಥರಾಗಿದ್ದ ಅಂದಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮೃತ್ ಪಾಲ್ ಸೇರಿದಂತೆ 100 ಕ್ಕೂ ಹೆಚ್ಚು ಜನರನ್ನು ಬಂಧಿಸಿತು.
ಬೆಂಗಳೂರಿನಲ್ಲಿ ಒಬ್ಬಂಟಿ ಮಹಿಳೆ ಕೊಂದ ಆರೋಪಿ ಸಿಗಲಿಲ್ಲವೆಂದು 'ಸಿ' ರಿಪೋರ್ಟ್ ಸಲ್ಲಿಸಿದ ಪೊಲೀಸರು
ಪಿಎಸ್ಐ ಹುದ್ದೆಗಳ ಪರೀಕ್ಷೆಯಲ್ಲಿ ಅಕ್ರಮವಾಗಿ ತೇರ್ಗಡೆಯಾಗಲು ಅಭ್ಯರ್ಥಿಗಳು ಮಧ್ಯವರ್ತಿಗಳಿಗೆ 30-85 ಲಕ್ಷ ರೂ. ಕೊಟ್ಟಿದ್ದ ಬಗ್ಗೆ ಸುಳಿವು ಸಿಕ್ಕಿತ್ತು. ಇನ್ನು ಕಲಬುರಗಿಯ ಪರೀಕ್ಷಾ ಕೇಂದ್ರವೊಂದರಲ್ಲಿ ಅಭ್ಯರ್ಥಿಗಳಿಗೆ ನಕಲು ಮಾಡಲು ಪರೀಕ್ಷಾ ಕೇಂದ್ರದ ಪರಿವೀಕ್ಷಕರು ಅವಕಾಶ ನೀಡಿದ್ದರು. ಕಾಂಗ್ರೆಸ್ ನೇತೃತ್ವದ ಸರ್ಕಾರವು ಪಿಎಸ್ಐ ನೇಮಕಾತಿ ಹಗರಣದ ತನಿಖೆ ನಡೆಸಲು ಹೈಕೋರ್ಟ್ ಮಾಜಿ ನ್ಯಾಯಾಧೀಶ ವೀರಪ್ಪ ನೇತೃತ್ವದ ಏಕಸದಸ್ಯ ನ್ಯಾಯಾಂಗ ಆಯೋಗಕ್ಕೆ ಆದೇಶ ನೀಡಿತು. ಈ ಆಯೋಗದ ವರದಿ ಆಧರಿಸಿ ರಾಜ್ಯ ಸರ್ಕಾರ ಪಿಎಸ್ ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ನಿರ್ಧರಿಸಿತ್ತು. ಆದರೆ, ಕೆಲವು ವಿದ್ಯಾರ್ಥಿಗಳು ಸರ್ಕಾರದ ಆದೇಶದ ವಿರುದ್ಧ ಹೈಕೋರ್ಟ್‌ನ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ನವೆಂಬರ್ 10 ರಂದು ಸರ್ಕಾರಿ ಆದೇಶವನ್ನು ಎತ್ತಿಹಿಡಿದಿತ್ತು. ಜೊತೆಗೆ, ಪೊಲೀಸ್ ಇಲಾಖೆಯ ಹೊರತಾಗಿ ಸ್ವತಂತ್ರ ಸಂಸ್ಥೆಯಿಮದ ಪಿಎಸ್‌ಐ ಮರು ಪರೀಕ್ಷೆ ನಡೆಸುವಂತೆ ರಾಜ್ಯಕ್ಕೆ ನಿರ್ದೇಶಿಸಿತ್ತು.
ಬಿಜೆಪಿ ಅವಧಿಯಲ್ಲಿನ ಟೆಂಡರ್ ರದ್ದುಗೊಳಿಸುತ್ತಿರುವ ಕಾಂಗ್ರೆಸ್ ಸರ್ಕಾರ: ಸಂಕಷ್ಟದಲ್ಲಿ ಎಸ್ಕಾಂ ಗುತ್ತಿಗೆದಾರರು
ಕರ್ನಾಟಕದಲ್ಲಿ ಉದ್ಯೋಗ ನೇಮಕಾತಿಗೆ ಇರುವ ಸ್ವತಂತ್ರ ಸಂಸ್ಥೆಯಿಂದ ಪರೀಕ್ಷೆಯನ್ನು ನಡೆಸಲು ಮುಂದಾಗಿತ್ತು. ಈಗ ರಾಜ್ಯದ ಸ್ವತಂತ್ರ ಉದ್ಯೋಗ ನೇಮಕಾತಿ ಸಂಸ್ಥೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಡಿಸೆಂಬರ್ 23 ರಂದು 545 ಪಿಎಸ್‌ಐ ಹುದ್ದೆಗಳಿಗೆ ಮರು ಪರೀಕ್ಷೆಯನ್ನು ನಡೆಸಲು ದಿನಾಂಕವನ್ನು ಘೋಷಣೆ ಮಾಡಿದೆ. ಇನ್ನು ಈ ಪರೀಕ್ಷೆಯಲ್ಲಿ ಹಿಂದೆ ಪರೀಕ್ಷೆ ಬರೆದ ಅಭ್ಯರ್ಥಿಗಳು ಪರೀಕ್ಷೆ ಬರೆಯಬಹುದು. ಒಟ್ಟು 50 ಸಾವಿರ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ, ಮುಖ್ಯವಾಗಿ ಪಿಎಸ್‌ಐ ಮರು ಪರೀಕ್ಷೆಯನ್ನು ಬೆಂಗಳೂರಿನ ಕೇಂದ್ರಗಳಲ್ಲಿ ಮಾತ್ರ ನಡೆಸಲು ನಿರ್ಧರಿಸಲಾಗಿದೆ.