Latest Videos

ರಾಜ್ಯದ 384 ಕೆಎಎಸ್ ಹುದ್ದೆಗಳ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ

By Sathish Kumar KHFirst Published Jul 4, 2024, 7:20 PM IST
Highlights

2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಗೆ ಕರ್ನಾಟಕ ಲೋಕಸೇವಾ ಆಯೋಗದಿಂದ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ.

ಬೆಂಗಳೂರು (ಫೆ.27): ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮಾರ್ಚ್‌ ತಿಂಗಳಲ್ಲಿ ಹೊರಡಿಸಿದ್ದ ಅಧಿಸೂಚನೆಗೆ, ಈಗಾಗಲೇ ಅರ್ಜಿ ಸಲ್ಲಿಕೆ ಮಾಡಿದ ಅಭ್ಯರ್ಥಿಗಳಿಗೆ ಆ.28ರಂದು ಪೂರ್ವಭಾವಿ ಪರೀಕ್ಷೆ ನಡೆಸಲು ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಸಹಾಯಕ ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು, ಖಜಾನೆ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರು, ತಹಸೀಲ್ದಾರ್, ಡಿವೈಎಸ್ಪಿ ಸೇರಿದಂತೆ 159 ‘ಗ್ರೂಪ್ ಎ’ ಹುದ್ದೆಗಳು ಮತ್ತು 225 ‘ಗ್ರೂಪ್ ಬಿ’ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಇದರಲ್ಲಿ ಕಲ್ಯಾಣ ಕರ್ನಾಟಕ ವೃಂದದ 77 ಹುದ್ದೆಗಳು ಸೇರಿ ಒಟ್ಟು 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಗೆ ಮಾರ್ಚ್ ತಿಂಗಳಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು.

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಮಾ.4ರಿಂದ ಏ.4ರ ವರೆಗೆ ಆನ್‌ಲೈನ್ ಮೂಲಕ ಅರ್ಜಿಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಈ ವೇಳೆ ಮೇ 5ರಂದು ಪೂರ್ವಭಾವಿ ಪರೀಕ್ಷೆ ನಡೆಸಲು ತಾತ್ಕಾಲಿಕ ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ, ಈ ಅವಧಿಯಲ್ಲಿ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಪರೀಕ್ಷೆಯನ್ನು ತಾತ್ಕಾಲಿಕ ಅವಧಿಗೆ ಮುಂದೂಡಿಕೆ ಮಾಡಲಾಗಿತ್ತು. ಆದರೆ, ಈಗ ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ ಸರ್ಕಾರ ಆ.28ರಂದು ಪೂರ್ವಭಾವಿ ಪರೀಕ್ಷೆ ನಡೆಸಲು ದಿನಾಂಕ ನಿಗದಿಪಡಿಸಿದೆ.

25-08-2024ರ ಭಾನುವಾರ ಬೆಳಗ್ಗೆ 10ರಿಂದ 12 ಗಂಟೆವೆರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 2 ಗಂಟೆಯಿಂದ 4 ಗಂಟೆವರೆಗೆ ಪತ್ರಿಕೆ-2ರ ಪೂರ್ವಭಾವಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಕರ್ನಾಟಕ ಲೋಕಸ ಸೇವಾ ಆಯೋಗದಿಂದ ಮಾಹಿತಿ ನೀಡಲಾಗಿದೆ.

120 ಹೆಚ್ಚುವರಿ ಸೇರಿಸಿ 504 ಹುದ್ದೆಗಳಿಗೆ ಕೆಎಎಸ್‌ ಪರೀಕ್ಷೆ?

ಇದೇ ಮೊದಲ ಬಾರಿಗೆ 3 ವರ್ಷ ವಯೋಮಿತಿ ಸಡಿಲಿಕೆ: ಭಾರತದಲ್ಲಿ ಕಾನೂನು ರೀತಿಯಲ್ಲಿ ಸ್ಥಾಪಿತವಾದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಪರೀಕ್ಷೆ ಬರೆಯಲು ಅರ್ಹರಾಗುದ್ದಾರೆ. ಇನ್ನು ಕೋವಿಡ್ ಸೇರಿದಂತೆ ವಿವಿಧ ಕಾರಣಗಳಿಂದ ಕಳೆದ 5-6 ವರ್ಷಗಳಿಂದ ಕೆಎಎಸ್‌ ನೇಮಕಾತಿ ನಡೆಯದ ಕಾರಣ ಅಭ್ಯರ್ಥಿಗಳ ವಯೋಮಿತಿಯನ್ನು 3 ವರ್ಷ ಸಡಿಲಿಸಲಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 38 ವರ್ಷ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 41 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 43 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಒಳಾಡಳಿತ ಇಲಾಖೆಯ ಡಿವೈಎಸ್ಪಿ, ಅಬಕಾರಿ ಉಪಾಧೀಕ್ಷಕರು ಮತ್ತು ಕರ್ನಾಟಕ ಕಾರಾಗೃಹ ಸೇವೆಯ ಅಧಿಕಾರಿಗಳ ಹುದ್ದೆಗಳಿಗೆ ದೈಹಿಕ ಪರೀಕ್ಷೆ ನಿಗದಿಪಡಿಸಲಾಗಿದ್ದು, ಅದರಲ್ಲಿ ಅರ್ಹತೆ ಹೊಂದಿದವರನ್ನು ಮಾತ್ರ ಹುದ್ದೆಗಳಿಗೆ ಪರಿಗಣಿಸಲಾಗುತ್ತದೆ.

click me!