Small Industries ಆರಂಭಕ್ಕೆ ರಾಜ್ಯ  ಸರ್ಕಾರ ಅನುಮೋದನೆ, 57,055 ಉದ್ಯೋಗಾವಕಾಶ

By Suvarna News  |  First Published May 26, 2022, 12:55 PM IST

577 ಕೋಟಿ ರೂ. ಬಂಡವಾಳ ಹೂಡಿಕೆಯ 1,250 ಸಣ್ಣ ಕೈಗಾರಿಕೆಗಳ ಆರಂಭಕ್ಕೆ ರಾಜ್ಯ  ಸರ್ಕಾರ ಅನುಮೋದನೆ ನೀಡಿದ್ದು, ಇದರಿಂದ 57,055 ಉದ್ಯೋಗಾವಕಾಶವನ್ನು ನಿರೀಕ್ಷಿಸಲಾಗಿದೆ ಎಂದು ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.


ಬೆಂಗಳೂರು (ಮೇ.26): ಜಿಲ್ಲಾ ಮಟ್ಟದ ಏಕ ಗವಾಕ್ಷಿ ಸಮಿತಿಗಳ ಮೂಲಕ 577 ಕೋಟಿ ರೂ. ಬಂಡವಾಳ (Investment) ಹೂಡಿಕೆಯ 1,250 ಸಣ್ಣ ಕೈಗಾರಿಕೆಗಳ (small industries) ಆರಂಭಕ್ಕೆ ರಾಜ್ಯ  ಸರ್ಕಾರ (Karnataka Government) ಅನುಮೋದನೆ ನೀಡಿದೆ. ಇದರಿಂದ 57,055 ಉದ್ಯೋಗಾವಕಾಶವನ್ನು (Jobs) ನಿರೀಕ್ಷಿಸಲಾಗಿದೆ ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜ್ (Minister MTB Nagaraj ) ಹೇಳಿದ್ದಾರೆ.

ಫ್ರಾಂಚೈಸ್ ಇಂಡಿಯಾ (Franchise India) ಬೆಂಗಳೂರಿನಲ್ಲಿ ಮೇ.24ರಿಂದ  ಎರಡು ದಿನ ಆಯೋಜಿಸಿರುವ 'ಭಾರತ ಬೃಹತ್ ವಾಣಿಜ್ಯ ಮೇಳ ಐಆರ್ ಇಸಿ-2022'ಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ಉದ್ಯೋಗ ಸೃಷ್ಟಿ ಮೂಲಕ ಆರ್ಥಿಕ ಪರಿಸ್ಥಿತಿ ಸುಧಾರಣೆ ಸರ್ಕಾರದ ಆದ್ಯತೆಯಾಗಿದೆ. ಅದಕ್ಕೆ ಅಗತ್ಯವಾದ ನೆರವು ನೀಡಲು ಸರ್ಕಾರ ಬದ್ಧವಾಗಿದೆ. ಕಳೆದ ಸಾಲಿನಲ್ಲಿ ಸಣ್ಣ ಕೈಗಾರಿಕಾ ವಲಯದಲ್ಲಿ ವಿವಿಧ ಯೋಜನೆಗಳಿಗೆ ರೂ.292 ಕೋಟಿ ಬಿಡುಗಡೆಯಾಗಿದ್ದು, ಇದರ ಪ್ರಯೋಜನವನ್ನು 3,209 ಮಂದಿ ಪಡೆದುಕೊಂಡಿದ್ದಾರೆ ಎಂದರು.

Tap to resize

Latest Videos

 

ಇಂದು ಶೆರ್ಟನ್ ಹೋಟೆಲ್‌ನಲ್ಲಿ ಇಂಡಿಯನ್ ರಿಟೈಲ್ ಮತ್ತು ಇ-ರಿಟೈಲ್ ಸಮಾವೇಶ (ಫ್ರಾಂಚೈಸ್ ಇಂಡಿಯಾ-IReC 2022 ಕಾರ್ಯಕ್ರಮ) ಮತ್ತು ಪ್ರಶಸ್ತಿ ಪ್ರಧಾನ 2022 ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಾಯಿತು. pic.twitter.com/LPKaT4jhIM

— N.Nagaraj (MTB) (@MtbNagaraju)

ಇ- ಕಾಮರ್ಸ್ (E-commerce),  ಡಿಜಿಟಲ್ ರಿಟೇಲ್ ನಂತಹ ಅವಕಾಶ ಅಳವಡಿಸಿಕೊಂಡು ಅಧಿಕ ಗ್ರಾಹಕರನ್ನು ಅದರಲ್ಲೂ ಯುವ ಜನತೆಯನ್ನು ತಲುಪುವುದರಿಂದ ಉದ್ಯಮಗಳು ಯಶಸ್ಸು ಸಾಧಿಸಲು ಸಾಧ್ಯ ಎಂದು ಎಂಟಿಬಿ ನಾಗರಾಜ್ ಹೇಳಿದರು.ದೇಶದ ವಿವಿಧೆಡೆಗಳಿಂದ ಆಗಮಿಸಿದ ಚಿಲ್ಲರೆ ಮತ್ತು ಇ-ಕಾಮರ್ಸ್ ಉದ್ಯಮದ 250ಕ್ಕೂ ಅಧಿಕ ಪ್ರಮುಖ ಉದ್ಯಮಿಗಳು ಎರಡು ದಿನಗಳ ವಾಣಿಜ್ಯ ಮೇಳದಲ್ಲಿ ಪಾಲ್ಗೊಂಡಿದ್ದಾರೆ.

ಶಿಕ್ಷಣ ಸಂಸ್ಥೆಗಳ ಉನ್ನತೀಕರಣಕ್ಕೆ ಕೈಜೋಡಿಸುವಂತೆ ಆಕ್ಸಿಸ್ ಬ್ಯಾಂಕ್‌ಗೆ BASAVARAJ BOMMAI ಮನವಿ 

ನಮ್ಮ ಮೆಟ್ರೋದಲ್ಲಿ  ಫೈರ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ (Bengaluru Metro Rail Corporation Limited- BMRCL) ಖಾಲಿ ಇರುವ ವಿವಿಧ  ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಫೈರ್ ಇನ್‌ಸ್ಪೆಕ್ಟರ್ (Fire Inspector)​ ಒಟ್ಟು 6 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೇ ದಿನ ಜೂನ್ 3 ಆಗಿದೆ.  ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ  ಅಧಿಕೃತ ವೆಬ್​ಸೈಟ್​ https://english.bmrc.co.in/ ಗೆ ಭೇಟಿ ನೀಡಬಹುದು.

ಶೈಕ್ಷಣಿಕ ವಿದ್ಯಾಭ್ಯಾಸ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಫೈರ್ ಇನ್‌ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ B.Sc, B.E ಅಥವಾ B.Tech ವಿದ್ಯಾರ್ಹತೆ ಪಡೆದಿರಬೇಕು.

ಆಯ್ಕೆ ಪ್ರಕ್ರಿಯೆ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಫೈರ್ ಇನ್‌ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳನ್ನು  ಮೊದಲು ಶಾರ್ಟ್ ಲಿಸ್ಟ್ ಮಾಡಲಾಗುವುದು. ಬಳಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. 

ವಯೋಮಿತಿ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಫೈರ್ ಇನ್‌ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 20 ರಿಂದ 35 ವರ್ಷದ ಒಳಗಿರಬೇಕು.

ವೇತನ ವಿವರ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಫೈರ್ ಇನ್‌ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳೀಗೆ ಮಾಸಿಕ ₹40000 ವೇತನ ದೊರೆಯಲಿದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಫೈರ್ ಇನ್‌ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಈ ಕೆಳಗಿನ ವಿಳಾಸಕ್ಕೆ ಜೂನ್ 3 ರೊಳಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು.
General Manager (HR),
Bangalore Metro Rail Corporation Limited,
III Floor, BMTC Complex, K.H. Road,
Shanthinagar, Bengaluru-560027
Email: helpdesk@bmrc.co.in

click me!