ಕರ್ನಾಟಕ ಸರ್ಕಾರದ ಹೊರ ಗುತ್ತಿಗೆ ನೌಕರಿಗೂ ಮೀಸಲಾತಿ ಅನ್ವಯ; ಮಹಿಳೆಯರಿಗೆ ಬಂಪರ್ ಆಫರ್

By Sathish Kumar KH  |  First Published May 20, 2024, 7:04 PM IST

ರಾಜ್ಯ ಸರ್ಕಾರದ ಎಲ್ಲ ಹೊರಗುತ್ತಿಗೆ ಉದ್ಯೋಗಗಳನ್ನು ಕಡ್ಡಾಯವಾಗಿ ಮೀಸಲಾತಿ  ಅನ್ವಯವೇ ನೇಮಕ ಮಾಡಿಕೊಳ್ಳಬೇಕು ಎಂದು ಆದೇಶ ಹೊರಡಿಸಲಾಗಿದೆ.


ಬೆಂಗಳೂರು (ಮೇ 20): ರಾಜ್ಯ ಸರ್ಕಾರದ ಕಛೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯ ನೀತಿಯಾಗಿರುತ್ತದೆ. ಆದರೆ, ಇನ್ನುಮುಂದೆ ಎಲ್ಲ ಹೊರಗುತ್ತಿಗೆ ನೇಮಕಾತಿಯಲ್ಲಿಯೂ ಮೀಸಲಾತಿಯನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಈಗಾಗಲೇ ರಾಜ್ಯ ಸರ್ಕಾರದಿಂದ 2023ರ ಡಿಸೆಂಬರ್ ತಿಂಗಳಲ್ಲಿ ಜರುಗಿದ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀತಿಯನ್ನು ಜಾರಿಗೊಳಿಸಲು ನಿರ್ಣಯಿಸಲಾಗಿದೆ. ಆದುದರಿಂದ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವ ಎಲ್ಲಾ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮವನ್ನು ಈ ಕೆಳಕಂಡ ಸೂಚನೆಗಳೊಂದಿಗೆ ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.

Latest Videos

undefined

ಗೃಹ ಸಚಿವರ ತವರಲ್ಲಿ ಕಳ್ಳರಿಗೆ ವಿಶೇಷ ನೌಕರಿ; ಕಳ್ಳತನ ಉದ್ಯೋಗಕ್ಕೆ ಮಾಸಿಕ 20 ಸಾವಿರ ರೂ. ಸಂಬಳ

  • 1. ಹೊರಗುತ್ತಿಗೆ ಮೀಸಲಾತಿಯು ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯಿಸುವುದಿಲ್ಲ.
  • 2. ಪ್ರತಿ ವರ್ಷವು ಹೊರ ಸಂಪನ್ಮೂಲ ಏಜೆನ್ಸಿಗಳಿಂದ ಕೆ.ಟಿ.ಪಿ.ಪಿ ಅಧಿನಿಯಮ 1999 ರಂತೆ ಟೆಂಡರ್ ಕರೆಯುವಾಗ ಕಡ್ಡಾಯವಾಗಿ ಮೀಸಲಾತಿಯಂತೆ ಸಿಬ್ಬಂದಿಗಳನ್ನು ಪಡೆಯಲು ಷರತ್ತುಗಳನ್ನು ನಮೂದಿಸುವುದು. 
  • 3. ಹೊರಗುತ್ತಿಗೆ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿದ ಮೀಸಲಾತಿ ಪ್ರಮಾಣದಲ್ಲಿ ಕನಿಷ್ಠ ಶೇಕಡ 33 ರಷ್ಟು ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳತಕ್ಕದ್ದು.
  • 4. ಟೆಂಡ‌ರ್ ಅಂಗೀಕರಿಸುವ ಪ್ರಾಧಿಕಾರವು ಕಡ್ಡಾಯವಾಗಿ ಹೊರ ಸಂಪನ್ಮೂಲ ಏಜೆನ್ಸಿಯು ಅಂತಿಮಗೊಳಿಸಿದ ಸಿಬ್ಬಂದಿಗಳ ಪಟ್ಟಿ ಮೀಸಲಾತಿಯಂತೆ ಇರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು. ಜಾತಿ ಪ್ರಮಾಣ ಪತ್ರ ಮತ್ತು ಇತರೆ ದಾಖಲೆಗಳನ್ನು ಹೊರ ಸಂಪನ್ಮೂಲ ಏಜೆನ್ಸಿಯು ಪಡೆದು ನಿರ್ವಹಿಸತಕ್ಕದ್ದು. ಟೆಂಡ‌ರ್ ಅಂಗೀಕರಿಸುವ ಪ್ರಾಧಿಕಾರವು ಈ ಬಗ್ಗೆ ಪರಿಶೀಲಿಸಿ ಕಾರ್ಯಾದೇಶವನ್ನು ನೀಡಲು ಕ್ರಮವಹಿಸುವುದು. (ಸಿಂಧುತ್ವ ಪ್ರಮಾಣ ಪತ್ರದ ಅಗತ್ಯವಿರುವುದಿಲ್ಲ)

ವಿರಾಟ್ ಕೊಹ್ಲಿಗೆ ರಕ್ತದಲ್ಲಿ ಬಿಡಿಸಿದ ಭಾವಚಿತ್ರ ಅರ್ಪಿಸಿದ ಚಿತ್ರಕಲಾ ಶಿಕ್ಷಕ

  • 5. ಒಂದು ವೇಳೆ ನೇಮಕಾತಿಗೊಂಡ ಅಭ್ಯರ್ಥಿಗಳು ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ / ಅರ್ಧದಲ್ಲಿ ಬಿಟ್ಟಿದಲ್ಲಿ ಅಂತಹ ಖಾಲಿ ಉಳಿಯುವ ಸ್ಥಾನವನ್ನು ಭರ್ತಿ ಮಾಡಲು ಅದೇ ಪ್ರವರ್ಗದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಅಭ್ಯರ್ಥಿಗಳನ್ನು ಒದಗಿಸುವ ಏಜೆನ್ಸಿಯು ಕ್ರಮ ಕೈಗೊಳ್ಳತಕ್ಕದ್ದು.
  • 6. ಯಾವುದೇ ಇಲಾಖೆಯಲ್ಲಿ ಕನಿಷ್ಠ 20 ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಮಾತ್ರ ಮೀಸಲಾತಿ ನೀತಿಯನ್ನು ಜಾರಿಗೊಳಿಸತಕ್ಕದ್ದು.
  • 7. ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಅಭ್ಯರ್ಥಿಯ ಕನಿಷ್ಠ ವಯೋಮಿತಿ 18 ವರ್ಷ ಮತ್ತು ಗರಿಷ್ಠ ವಯೋಮಿತಿ 60 ವರ್ಷಗಳಾಗಿರತಕ್ಕದ್ದು.
  • 8. ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶಗಳನ್ನು ಒದಗಿಸುವ ದೃಷ್ಟಿಯಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸುತ್ತಿರುವುದರಿಂದ ಯಾವುದೇ ಕಾರಣಕ್ಕಾಗಿ ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಲು ಪರಿಗಣಿಸತಕ್ಕದ್ದಲ್ಲ.
click me!