ಕರ್ನಾಟಕ ಸರ್ಕಾರದಿಂದ ಬೃಹತ್ ಉದ್ಯೋಗ ಮೇಳ ಆಯೋಜನೆ: ವಿದೇಶದಲ್ಲಿ ಕೆಲಸ ಗಿಟ್ಟಿಸಲು ಅವಕಾಶ!

By Sathish Kumar KH  |  First Published Dec 29, 2023, 11:20 PM IST

ಸರ್ಕಾರದಿಂದ ಜನವರಿ ತಿಂಗಳಲ್ಲಿ ರಾಜ್ಯಮಟ್ಟದ ಉದ್ಯೋಗ ಮೇಳ ಆಯೋಜನೆ ಮಾಡಲಾಗುತ್ತಿದ್ದು, ರಾಜ್ಯ, ದೇಶ ಹಾಗೂ ವಿದೇಶದಲ್ಲಿರುವ ಉದ್ಯೋಗಾವಕಾಶಗಳನ್ನು ಒದಗಿಸುವಂತೆ ಸಿಎಂ ಸಿದ್ದರಾಮಯ್ಯ ತಿಳಿಸಿದರು.


ಬೆಂಗಳೂರು (ಡಿ.29): ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಲಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ಆಯೋಜಿಸಲೂ ಸಚಿವರ ತಂಡವನ್ನು ರಚಿಸಲಾಗುವುದು. ಈ ಸಚಿವರು ರಾಜ್ಯ, ದೇಶ ಮತ್ತು ವಿದೇಶಗಳ ಉದ್ಯೋಗಾವಕಾಶಗಳನ್ನು ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯಮಟ್ಟದ ಉದ್ಯೋಗ ಮೇಳ ಆಯೋಜಿಸುವ ಕುರಿತು ಪೂರ್ವಭಾವಿ ಸಭೆ ನಡೆಸಿದರು. ಈ ವೇಳೆ ರಾಜ್ಯದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಐಟಿ, ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ, ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌, ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರನ್ನೊಳಗೊಂಡ ಸಚಿವರ ತಂಡವನ್ನು ರಚಿಸುವಂತೆ ತಿಳಿಸಿದರು. ಸಚಿವರ ಈ ತಂಡವು ಉದ್ಯೋಗದಾತರೊಂದಿಗೆ ಸಭೆ ನಡೆಸಿ ಈ ಕುರಿತು ಚರ್ಚಿಸಿ ಅವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

Tap to resize

Latest Videos

undefined

ಶಿಕ್ಷಣ ಸಚಿವ ಮಧು ಬಂಗಾರಪ್ಪ ಚೆಕ್‌ಬೌನ್ಸ್‌ ಕೇಸ್: 6.96 ಕೋಟಿ ರೂ. ದಂಡ ಅಥವಾ 6 ತಿಂಗಳು ಜೈಲು ವಿಧಿಸಿದ ಕೋರ್ಟ್

ವಿದೇಶದಲ್ಲಿನ ಉದ್ಯೋಗವಕಾಶಗಳನ್ನೂ ಒದಗಿಸಿ: ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಉದ್ಯೋಗ ಮೇಳ ಆಯೋಜಿಸಲಾಗುವುದು. ಕೈಗಾರಿಕೆಗಳೊಂದಿಗೆ ಚರ್ಚಿಸಿ, ಉದ್ಯೋಗಾಕಾಂಕ್ಷಿಗಳ ಕೌಶಲ್ಯ ಹಾಗೂ ಕೈಗಾರಿಕೆಗಳ ಅಗತ್ಯತೆಯ ನಡುವಿನ ಅಂತರ ಸರಿಪಡಿಸುವ ಬಗ್ಗೆ ದೂರಗಾಮಿ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆಯೂ ಶಿಫಾರಸುಗಳನ್ನು ಮಾಡುವಂತೆ ಸಚಿವರ ತಂಡಕ್ಕೆ ಸೂಚಿಸಿದರು. ವಿದೇಶದಲ್ಲಿರುವ ಉದ್ಯೋಗಾವಕಾಶಗಳ ಕುರಿತೂ ಸಹ ಪರಿಶೀಲಿಸಲು ಮುಖ್ಯಮಂತ್ರಿಗಳು ಸೂಚಿಸಿದರು. ಇದಲ್ಲದೆ ರಾಜ್ಯದ ಯುವಕರಿಗೆ ಉದ್ಯೋಗಾವಕಾಶಗಳನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಉದ್ಯೋಗ ನೀತಿಯನ್ನು ಹೊಂದುವ ಅಗತ್ಯವಿದೆ. ಈ ನೀತಿಯನ್ನು ರೂಪಿಸಲು ಸಿದ್ಧತೆ ನಡೆಸಬೇಕು ಎಂದು ತಿಳಿಸಿದರು.

ರೆಬೆಲ್‌ ಶಾಸಕರಿಗೆ ಹೊಸ ಹುದ್ದೆಕೊಟ್ಟ ಸರ್ಕಾರ : ರಾಯರೆಡ್ಡಿ, ಬಿ.ಆರ್. ಪಾಟೀಲ್, ದೇಶಪಾಂಡೆಗೆ ಸಂಪುಟ ಸ್ಥಾನಮಾನ

ಈ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಗೃಹ ಸಚಿವ ಡಾ. ಜಿ. ಪರಮೇಶ್ವರ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಐಟಿ, ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

click me!