* 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನ
* ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ಸರ್ಕಾರ
* ಈ ಬಗ್ಗೆ ಮಾಹಿತಿ ನೀಡಿದ ಉನ್ನತ ಶಿಕ್ಷಣ ಸಚಿವ ಡಾ ಅಶ್ವತ್ಥನಾರಾಯಣ
ಬೆಂಗಳೂರು, (ಅ.01): ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ (Assistant Professor) ಹುದ್ದೆಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಒಟ್ಟು 1242 ಹುದ್ದೆ (Jobs) ಅರ್ಜಿ ಆಹ್ವಾನಿಸಲಾಗಿದ್ದು, ಈ ಪೈಕಿ 1021 Non-HK ಹುದ್ದೆಗಳು, 221 HK ಹುದ್ದೆಗಳಿಗೆ ಮೀಸಲಾತಿ ಕಲ್ಪಿಸಲಾಗಿದೆ.
ಇನ್ನಷ್ಟು ಜಾಬ್ಸ್ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಕಾನೂನು, ಸಮಾಜ ಕಾರ್ಯ, ಭೂಗೋಳ ಶಾಸ್ತ್ರ, ಭೂಗರ್ಭ ಶಾಸ್ತ್ರ, ವಾಣಿಜ್ಯ ಶಾಸ್ತ್ರ, ನಿರ್ವಹಣಾ ಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೈವಿಕ ರಸಾಯನ ಶಾಸ್ತ್ರ, ಗಣಿತಶಾಸ್ತ್ರ, ಸೂಕ್ಷ್ಮ ಜೀವಶಾಸ್ತ್ರ, ಪ್ರಾಣಿಶಾಸ್ತ್ರ, ಸಸ್ಯಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕವಿಜ್ಞಾನ, ಸಂಖ್ಯಾ ಶಾಸ್ತ್ರ, ಫ್ಯಾಶನ್ ಟೆಕ್ನಾಲಜಿ ವಿಷಯಗಳಿಗೆ ನೇಮಕಾತಿ ನಡೆಸಲಾಗುತ್ತದೆ.
07-10-2021ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, 06-11-2021 ರ ರಾತ್ರಿ 11-59 ಗಂಟೆವರೆಗೆ ಅರ್ಜಿ ಸಲ್ಲಿಸಲು ಕೊನೆ ದಿನವಾಗಿರುತ್ತದೆ.
- ನಾಗರಿಕರ ಗಮನಕ್ಕೆ -
ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಒಟ್ಟು 1242 ಹುದ್ದೆಗಳು ಖಾಲಿಯಿದ್ದು, ಪಾರದರ್ಶಕವಾಗಿ ಮೆರಿಟ್ ಆಧಾರಿತ ಪರೀಕ್ಷೆ ಪ್ರಕ್ರಿಯೆ KEA ಮೂಲಕ ನಡೆಯಲಿದೆ. pic.twitter.com/ZqwEzDnG7W
ವಿದ್ಯಾರ್ಹತೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಖು ಸ್ನಾತಕೋತ್ತರ ಪದವಿ ಜತೆಗೆ ಎನ್‌ಇಟಿ, ಕೆಎಸ್‌ಇಟಿ, ಪಿಹೆಚ್‌ಡಿ ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ: ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಯುಜಿಸಿ ವೇತನ ಶ್ರೇಣಿ ರೂ.57700-182,400 ವರೆಗೆ ಇರುತ್ತದೆ.
ನೇಮಕಾತಿ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ, ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಈ ಬಗ್ಗೆ ಇನ್ನುಷ್ಟು ಮಾಹಿತಿ ಬೇಕಿದ್ದಲ್ಲಿ ಇಲ್ಲಿ ಕ್ಲಿಕ್ ಮಾಡಿ
ಇನ್ನು ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಮಾಹಿತಿ ನೀಡಿದ್ದು, ಒಟ್ಟು 1242 ಹುದ್ದೆಗಳು ಖಾಲಿಯಿದ್ದು, ಪಾರದರ್ಶಕವಾಗಿ ಮೆರಿಟ್ ಆಧಾರಿತ ಪರೀಕ್ಷೆ ಪ್ರಕ್ರಿಯೆ KEA ಮೂಲಕ ನಡೆಯಲಿದೆ ಎಂದು ತಿಳಿಸಿದ್ದಾರೆ.