5000 ಹೆಚ್ಚುವರಿ ಅತಿಥಿ ಶಿಕ್ಷಕರ ನೇಮಕ, ಗೌರವ ಧನ ಹೆಚ್ಚಳಕ್ಕೆ ಸರಕಾರ ಆದೇಶ

By Suvarna News  |  First Published Jun 19, 2022, 11:36 AM IST

ಕಳೆದ ಆರು ವರ್ಷಗಳಿಂದ ಬಳಿಕ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರ ಮಾಸಿಕ ಗೌರವ ಸಂಭಾವನೆ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶಿಸಿದೆ.  ಜತೆಗೆ ಗೌರವ ಧನ ಹೆಚ್ಚಳಕ್ಕೆ ಆದೇಶಿಸಿದೆ.


ಬೆಂಗಳೂರು (ಜೂನ್ 19): ಅತಿಥಿ ಶಿಕ್ಷಕರಿಗೆ (  guest teachers ) ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ನೀಡಿದ್ದು ಸಂಭಾವನೆ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಕೊನೆಗೂ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಗೌರವ ಧನವನ್ನು 6 ವರ್ಷದ ಬಳಿಕ ಪರಿಷ್ಕೃತಗೊಳಿಸಿ ಶನಿವಾರ ಆದೇಶ ಹೊರಡಿಸಿದ್ದು ಅತಿಥಿ ಶಿಕ್ಷಕರಿಗೆ ಹೆಚ್ಚಳ ಆಗಿರುವ ಗೌರವ ಧನ ತಕ್ಷಣದಿಂದಲೇ ಜಾರಿಗೆ ಬರಲಿದೆ.

ಈ ಮೊದಲು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 7500 ರು. ಹಾಗೂ ಪ್ರೌಢ ಶಾಲೆಗಳಲ್ಲಿ ಪಾಠ ಮಾಡುವ ಅತಿಥಿ ಶಿಕ್ಷಕರಿಗೆ 8000 ರು, ಗೌರವ ಧನವನ್ನು ಸರ್ಕಾರ ನಿಗಧಿಗೊಳಿಸಿತ್ತು. ಆದರೆ ಅತಿಥಿ ಶಿಕ್ಷಕರಿಗೆ 6 ವರ್ಷದಿಂದ ಗೌರವ ಧನ ಹೆಚ್ಚಳ ಮಾಡದ ಬಗ್ಗೆ ಅತಿಥಿ ಶಿಕ್ಷಕರಲ್ಲಿ ತೀವ್ರ ಅಸಮಾಧಾನ ಇತ್ತು.

Tap to resize

Latest Videos

undefined

2nd PUC Result Toppers List; ದ‌ಕ‌ ಜಿಲ್ಲೆಯ ಐವರು ವಿದ್ಯಾರ್ಥಿಗಳು ಟಾಪರ್ಸ್, ಕಲಾ ವಿಭಾಗದಲ್ಲಿ

2500 ರು. ಗೌರವ ಧನ ಹೆಚ್ಚಳ:  ಶಿಕ್ಷಣ ಇಲಾಖೆ ಅಧಿಕಾರಿಗಳು ಅತಿಥಿ ಶಿಕ್ಷಕರ ಗೌರವ ಧನವನ್ನು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ತಲಾ 12000 ರು ಹಾಗೂ ಪ್ರೌಢ ಶಾಲಾ ಅತಿಥಿ ಶಿಕ್ಷಕರಿಗೆ 15,000 ರು, ಹೆಚ್ಚಳ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಸರ್ಕಾರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸದ್ಯ ನೀಡುತ್ತಿರುವ 7500 ರು, ಜೊತೆಗೆ 2,500 ರು, ಹೆಚ್ಚಳ ಮಾಡಿ ಒಟ್ಟು 10,000 ರು, ಹಾಗೂ ಪ್ರೌಢ ಶಾಲೆಗಳಿಗೆ ನೀಡುತ್ತಿರುವ 8000 ರು, ಜೊತೆಗೆ 2,500 ರು. ಹೆಚ್ಚಳ ಮಾಡಿ ಒಟ್ಟು 10,500 ರು, ಗೌರವ ಧನ ನೀಡಲು ಆದೇಶಿಸಿದೆ.

2nd PUC Result 2022 ; 32 ಜಿಲ್ಲೆಗಳ ಶೇಕಡಾವಾರು ಫಲಿತಾಂಶ ಮಾಹಿತಿ
 
5000 ಹೆಚ್ಚುವರಿ ಅತಿಥಿ ಶಿಕ್ಷಕರ ನೇಮಕ: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇನ್ನೂ 5 ಸಾವಿರ ಹೆಚ್ಚುವರಿ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲು ಶನಿವಾರ ಆದೇಶ ಮಾಡಿದೆ. ರಾಜ್ಯದ 48 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಲ್ಲಿ ಇರುವ 30 ಸಾವಿರ ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 22 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಇದೀಗ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳದ ಆದೇಶದ ಬೆನ್ನಲ್ಲೇ ಇನ್ನೂ 5 ಸಾವಿರ ಹೆಚ್ಚುವರಿ ಶಿಕ್ಷಕರ ನೇಮಕಕ್ಕೆ ಆದೇಶಿಸಲಾಗಿದೆ.

ಮೈಸೂರಿಗೆ ಮೋದಿ ಆಗಮನ: ಬಸ್ ಸಂಚಾರ ಹಾಗೂ ನಿಲ್ದಾಣಗಳಲ್ಲಿ ಬದಲಾವಣೆ!

ಜೂ.24ರಂದು ಶಿಕ್ಷಕರ ನೇಮಕಕ್ಕೆ ಕೌನ್ಸೆಲಿಂಗ್‌:  2021-22 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರ ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳ ಆಯ್ಕೆಗೆ ಮೆರಿಟ್‌ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಕೌನ್ಸೆಲಿಂಗ್‌ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಸಾಂಸ್ಕೃತಿಕ ನಗರಿಯಲ್ಲಿ ಪ್ರಧಾನಿ ಮೋದಿ ಯೋಗ ಕಾರ್ಯಕ್ರಮಕ್ಕೆ ಭಾರೀ ಸಿದ್ಧತೆ

ಈಗಾಗಲೇ ಲಿಖಿತ ಪರೀಕ್ಷೆ ನಡೆಸಿ ಮೊದಲ ಹಂತದ ಕೌನ್ಸೆಲಿಂಗ್‌ ಮುಗಿಸಲಾಗಿದೆ. ಆದರೆ ಬಹುತೇಕ ಜಿಲ್ಲೆಗಳಲ್ಲಿ ಹುದ್ದೆ ಖಾಲಿ ಉಳಿದಿದ್ದು ಶೈಕ್ಷಣಿಕ ವರ್ಷವು ಆರಂಭವಾಗಿರುವ ಹಿನ್ನೆಲೆಯಲ್ಲಿ ಉಳಿದ ಹುದ್ದೆಗಳನ್ನು ಭರ್ತಿ ಮಾಡಬೇಕಾಗಿದೆ. ಆದ್ದರಿಂದ ಜೂ.24 ರಂದು ಕೌನ್ಸೆಲಿಂಗ್‌ ನಡೆಯಲಿದೆ. ಹೆಚ್ಚಿನ ವಿವರಕ್ಕೆ https://www.schooleducation.kar.nic.in/ಗೆ ಭೇಟಿ ನೀಡಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

click me!