Job Alert: ಉದ್ಯೋಗಾಂಕ್ಷಿಗಳಿಗೆ ಸಿಹಿ ಸುದ್ದಿ, 1500 ಶಿಕ್ಷಕರ ನೇಮಕಾತಿಗೆ ಸರ್ಕಾರ ಒಪ್ಪಿಗೆ

By Suvarna News  |  First Published Dec 11, 2021, 7:38 PM IST

* ಉದ್ಯೋಗಾಂಕ್ಷಿಗಳಿಗೆ ಸಿಹಿ ಸುದ್ದಿ 
* 1500 ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರ ಭರ್ತಿಗೆ ರಾಜ್ಯ ಸರ್ಕಾರ ಒಪ್ಪಿಗೆ
* ಅಧಿಕೃತಪಡಿಸಿದ ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್


ಬೆಂಗಳೂರು, (ಡಿ.11): ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು(Jobs) ಭರ್ತಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. 2021-22ರ ಶೈಕ್ಷಣಿಕ ವರ್ಷದಲ್ಲಿ ಒಟ್ಟು 15,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದ್ದು, ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ಹೇಳಿದ್ದಾರೆ.

ರಾಜ್ಯದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ತಾತ್ಕಾಲಿಕವಾಗಿ 23,078 ಅತಿಥಿ ಶಿಕ್ಷಕರ ನೇಮಕಕ್ಕೆ (Teacher Recruitment) ಈಗಾಗಲೇ ಆದೇಶ ಹೊರಡಿಸಲಾಗಿದೆ. ಇದರ ಜೊತೆಗೆ ಹೆಚ್ಚುವರಿ 4,000 ಅತಿಥಿ ಉಪನ್ಯಾಸಕರಿಂದ ಸೇವೆ ಪಡೆದುಕೊಳ್ಳಲು ನಿರ್ಧರಿಸಲಾಗಿದೆ. 2022ರ ಸಾಲಿನ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಅತಿಥಿ ಶಿಕ್ಷಕರ ಸೇವೆ ಪಡೆದುಕೊಳ್ಳಲಾಗುತ್ತದೆ.

Tap to resize

Latest Videos

Karnataka Civil Services : ಸಿವಿಲ್‌ ಸೇವೆ ಹುದ್ದೆ ಭರ್ತಿಗೆ ಹೊಸ ಮಾರ್ಗಸೂಚಿ

ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 18,000 ಅತಿಥಿ ಶಿಕ್ಷಕರು ಮತ್ತು ಪ್ರೌಢ ಶಾಲೆಗಳಿಗೆ 5,078 ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುತ್ತದೆ. ಈ ಸಂಬಂಧ ನವೆಂಬರ್ 4ರಂದು ಆದೇಶ ಹೊರಡಿಸಲಾಗಿದೆ ಎಂದು ಬಿ.ಸಿ. ನಾಗೇಶ್ ಟ್ವೀಟ್ ಮಾಡಿದ್ದಾರೆ.

 2021-22ರ ಶೈಕ್ಷಣಿಕ ವರ್ಷದಲ್ಲಿ ಒಟ್ಟು 15,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟ್ವೀಟ್ ಮಾಡಿದ್ದು, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಪದವೀಧರ ಪ್ರಾಥಮಿಕ ಶಾಲಾ (6 ರಿಂದ 8 ) ಶಿಕ್ಷಕರ 10 ಸಾವಿರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಲ್ಯಾಣ ಕರ್ನಾಟಕ ವೃಂದದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ 5 ಸಾವಿರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಕೆಲವೇ ದಿನಗಳಲ್ಲಿ ಶಿಕ್ಷಕರ ನೇಮಕಾತಿ ಬಗ್ಗೆ ಅಧಿಸೂಚನೆ ಹೊರಡಿಸಲಾಗುವುದು ಹೇಳಿದ್ದಾರೆ.

15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರದ ನಿರ್ಧಾರ. ಶೀಘ್ರದಲ್ಲೇ ಅಧಿಸೂಚನೆ. pic.twitter.com/Ln4xuyMJLj

— B.C Nagesh (@BCNagesh_bjp)

ಶಿಕ್ಷಣ ಸಚಿವರ ಪ್ರತಿಕ್ರಿಯೆ
ಟ್ವೀಟ್ ಮಾತ್ರವಲ್ಲದೇ ಇಂದು (ಡಿ.11) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ನಾಗೇಶ್, ಕೆಲವೇ ದಿನಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಕ್ಕೆ ಆದೇಶ ಹೊರಡಿಸಲಾಗುತ್ತದೆ. ಅನೇಕ ವರ್ಷಗಳಿಂದ ರಾಜ್ಯದಲ್ಲಿ ಶಿಕ್ಷಕರ ಕೊರತೆ ಇದೆ‌. 15 ಸಾವಿರ ಪೋಸ್ಟ್ ಪೂರ್ಣ ಮಾಡಲಾಗುತ್ತದೆ. ಕೆಲವೆ ದಿನಗಳ ನೋಟಿಫಿಕೇಷನ್ ಮಾಡಲಾಗುತ್ತದೆ. ಶಾಲಾ ಕೊಠಡಿಗಳ ಕೊರತೆ ಇದೆ, ಸರಿಪಡಿಸುತ್ತೇವೆ. ಮುಂದಿನ ವರ್ಷ ಅಕಾಡೆಮಿ ಕೇರ್ ಒಳಗಡೆ NET ಅನುಷ್ಟಾನಕ್ಕೆ ತರುವ ಕೆಲಸ ಮಾಡ್ತೇವೆ. ಯಾವುದೇ ಕಾರಣಕ್ಕೂ ಶಾಲೆಗಳನ್ನ ಮುಚ್ಚಲ್ಲ. ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಎಂದರು.

click me!