ಕೊರೋನಾ ಆರ್ಭಟದ ನಡುವೆ ರಾಜ್ಯ ಸರ್ಕಾರಿ ನೌಕರರರಿಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಸರ್ಕಾರ ಸಿಹಿಸುದ್ದಿ ನೀಡಿದೆ.
ಬೆಂಗಳೂರು, (ಜೂನ್.27) : ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಇನ್ಮುಂದೆ ವಾರದಲ್ಲಿ 5 ದಿನ ಮಾತ್ರ ಕೆಲಸ ಮಾಡಬಹುದು.
ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಪ್ರತಿ ಶನಿವಾರ ಹಾಗೂ ಭಾನುವಾರ ರಾಜ್ಯ ಸರ್ಕಾರಿ ನೌಕರರಿಗೆ ರಜೆ ಭಾಗ್ಯ ಸಿಗಲಿದೆ.
undefined
ವಾರದಲ್ಲಿ 1 ದಿನ ಮದ್ಯ ಸಿಗಲ್ಲ, ಆ ಒನ್ ಡೇ ಕುಡುಕರು ಶಾಂತತೆಯಿಂದ ಇರ್ಬೇಕು..!
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಕೇಸ್ ಹೆಚ್ಚಾಗುತ್ತಿರುವುದರಿಂದ ಜುಲೈ 5ರಿಂದ ಪ್ರತಿ ಭಾನುವಾರ ಲಾಕ್‌ಡೌನ್ ಮಾಡಲು ಸರ್ಕಾರ ತೀರ್ಮಾನಿಸಿದೆ. ಸದ್ಯದಲ್ಲೇ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳಲಿದೆ.
ಅಲ್ಲದೇ ಪ್ರತಿ ಶನಿವಾರ ಹಾಗೂ ಭಾನುವಾರ ರಾಜ್ಯ ಸರ್ಕಾರಿ ನೌಕರರಿಗೆ ರಜೆ ನೀಡಿದ್ದು, ಇದರಿಂದ ನೌಕರರಿಗೆ ರಿಲೀಫ್ ಸಿಕ್ಕಂತಾಗಿದೆ.