Jobs Recruitment ಕರ್ನಾಟಕದಲ್ಲಿ ಪಶು ವೈದ್ಯಾಧಿಕಾರಿ ಹುದ್ದೆಗಳ ಭರ್ತಿಗೆ ಸಂಪುಟ ಅನುಮೋದನೆ

By Suvarna News  |  First Published Jan 27, 2022, 11:13 PM IST

* ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ‌ಗೆ ಚಾಲನೆ..
* ಹಲವು ವರ್ಷಗಳಿಂದ ಖಾಲಿ ಇದ್ದ  ಹುದ್ದೆಗಳ ಭರ್ತಿಗೆ ಸಂಪುಟ ಅನುಮೋದನೆ..
 * ಅಭಿನಂದನೆ ಹೇಳಿದ ಸಚಿವ ಪ್ರಭು ಚೌವ್ಹಾಣ್


ಬೆಂಗಳೂರು, (ಜ.27): ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ( Veterinary Doctor Recruitment ) ಕರ್ನಾಟಕ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಬಗ್ಗೆ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ (Prabhu Chauhan) ಮಾಹಿತಿ ನೀಡಿದ್ದಾರೆ.

ಹಲವು ವರ್ಷಗಳಿಂದ ಖಾಲಿ ಇದ್ದ ಹುದ್ದೆಗಳಿಗೆ  ಇಂದು(ಗುರುವಾರ) ನಡೆದ ಸಚಿವ ಸಂಪುಟ ಸಭೆಯಲ್ಲಿ(Cabine Meeting)  ಅನುಮೋದನೆ ಸಿಕ್ಕಿದ್ದು, 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಒಪ್ಪಿಗೆ ನೀಡಲಾಗಿದೆ. ಇದರಿಂದ  ಪ್ರಭು ಚವ್ಹಾಣ್ ಹರ್ಷ ವ್ಯಕ್ತಪಡಿಸಿದ್ದಾರೆ.

Tap to resize

Latest Videos

undefined

Government Employees ರಾಜ್ಯ ಸರ್ಕಾರಿ ನೌಕರರ ವಾರಕ್ಕೆ 5 ದಿನ ಕೆಲಸ ಆದೇಶ ವಾಪಸ್

ಹಲವಾರು ವರ್ಷಗಳಿಂದ ಪಶುಸಂಗೋಪನೆ ಇಲಾಖೆಯಲ್ಲಿ ಪಶುವೈದ್ಯಾಧಿಕಾರಿಗಳು ಸೇರಿದಂತೆ ಸಾವಿರಾರು ಹುದ್ದೆಗಳು ಖಾಲಿಯಿದ್ದು ಯಾವ ಸಚಿವರು ನೇಮಕಾತಿಗೆ ಆಸಕ್ತಿ ತೋರಿರಲಿಲ್ಲ. ಅಧಿಕಾರವಹಿಸಿಕೊಂಡ ದಿನದಿಂದ ಇಲಾಖೆಯ ಹುದ್ದೆಗಳ ಭರ್ತಿಗೆ ಹೆಚ್ಚಿನ ಒತ್ತು ನೀಡಿ ನಿರಂತರ ಮುಖ್ಯಮಂತ್ರಿಗಳೊಂದಿಗೆ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಖಾಲಿ ಹುದ್ದೆ ಭರ್ತಿಗೆ ಕ್ರಮ ವಹಿಸಿದ್ದೆ ಎಂದು ಹೇಳಿದರು.

"

ಗೋಪಾಲಕರಿಗೆ ವೈದ್ಯಕೀಯ ಹುದ್ದೆಗಳನ್ನು ಮಂಜೂರು ಮಾಡುವುದರ ಮೂಲಕ ಪಶುಪಾಲಕ ರೈತರ ಬೇಡಿಕೆಗಳಿಗೆ ಸಿಎಂ  ಸ್ಪಂದಿಸಿದ್ದಾರೆ. ಒಟ್ಟು ಖಾಲಿ ಇರುವ 900ಕ್ಕೂ ಹೆಚ್ಚು ಹುದ್ದೆಗಳ ಪೈಕಿ 400  ಹುದ್ದೆಗಳ ಭರ್ತಿಗೆ ಅನುಮೋದನೆ ದೊರೆತಿದೆ. ಆರ್ಥಿಕ ಇಲಾಖೆಯ ಮೂಲಕ ಪ್ರಸ್ತಾವನೆಗೆ ಸಹಮತಿ ಪಡೆಯಲಾಗಿತ್ತು.  ಈಗ ಅದಕ್ಕೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದ್ದು, ತಕ್ಷಣ ಅಧಿಸೂಚನೆ ಹೊರಡಿಸಲು ಕ್ರಮ ವಹಿಸಲಾಗುವುದು ಎಂದರು.

ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ‌ ವಿಳಂಭವಾದ್ದರಿಂದ ಕಳೆದ ಹಲವು ವರ್ಷಗಳಿಂದ ಹುದ್ದೆಗಳು ಖಾಲಿ ಇದ್ದು ಸಮರ್ಪಕವಾಗಿ ರೋಗ ನಿಯಂತ್ರಣ, ಪಶು ಆರೋಗ್ಯ ಸೇವೆ, ಕೃತಕ ಗರ್ಭಧಾರಣೆ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ತೊಂದರೆಯಾಗುತ್ತಿತ್ತು ಎಂದರು.

ಗೋಹತ್ಯೆ ನಿಷೇಧ, ಜಿಲ್ಲೆಗೊಂದು ಗೋಶಾಲೆ ಸ್ಥಾಪನೆ ಮತ್ತು ನಿರ್ವಹಣೆ, ಪ್ರಾಣಿ ಕಲ್ಯಾಣ ಸಹಾಯವಾಣಿ, ಪಶು ಸಂಜೀವಿನಿ ಅಂಬ್ಯುಲೆನ್ಸ್ ಮತ್ತು ಪಾಲಿ ಕ್ಲಿನಿಕ್ ಸೇವೆಗಳಿಗೆ ಹಿನ್ನಡೆಯಾಗುತ್ತಿತ್ತು. ಪ್ರತೀ ಬಾರಿ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಇಲಾಖಾ ಅಧಿಕಾರಿಗಳು ಸಿಬ್ಬಂದಿ ಕೊರತೆ ನೀಗಿಸಲು ಮನವಿ ಮಾಡಿಕೊಳ್ಳುತ್ತಿದ್ದರು. ಹೊಸ ನೇಮಕಾತಿಯಿಂದ ಪಶುಪಾಲಕರಿಗೆ ರೈತರಿಗೆ ಉತ್ತಮ ಸೇವೆ ನೀಡಲು ಸಹಕಾರಿಯಾಗಲಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದರು.

ಹಲವು ವರ್ಷಗಳಿಂದ ಖಾಲಿ ಇದ್ದ ಹುದ್ದೆ ವೈದ್ಯಾಧಿಕಾ ನೇಮಕಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದರಿಂದ ಪ್ರಭು ಚವ್ಹಾಣ್, ಮಾಜಿ ಸಿಎಂ  ಬಿ.ಎಸ್.ಯಡಿಯೂರಪ್ಪ, ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಂಪುಟ ಸಹೋದ್ಯೋಗಿ ಸಚಿವರುಗಳಿಗೆ ಅಭಿನಂದನೆ ತಿಳಿಸಿದ್ದಾರೆ.

ಸಂಪುಟ ಸಭೆಯ ಇತರೆ ತೀರ್ಮಾನಗಳು
* ಮೈಸೂರು ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಕಾಮಗಾರಿಗಳ ಪರಿಷ್ಕೃತ ಅಂದಾಜು ರೂ. 92.81 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆ

* ಬೆಂಗಳೂರು ಜಿಲ್ಲೆಯ ದಕ್ಷಿಣ ತಾಲ್ಲೂಕಿನ ಬೇಗೂರು ಹೋಬಳಿಯ ಹುಳಿಮಾವು ಗ್ರಾಮದಲ್ಲಿ 4 ಎಕರೆ 19 ಗುಂಟೆ ಸರ್ಕಾರಿ ಜಮೀನನ್ನು ರಾಜ್ಯ ಗುಪ್ತವಾರ್ತೆ ಘಟಕದ ತರಬೇತಿ ಅಕಾಡೆಮಿಯನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಒಳಾಡಳಿತ ಇಲಾಖೆಗೆ ಉಚಿತವಾಗಿ ಮಂಜೂರು 

* ರಾಜ್ಯದಲ್ಲಿ ಸ್ವಾಮಿತ್ವ ಯೋಜನೆಯಡಿ ಗ್ರಾಮೀಣ ವಸತಿ ಹಕ್ಕು ದಾಖಲೆಗಳನ್ನು ಹಾಗೂ ಕೃಷಿ ಭೂಮಿಯ ಹಕ್ಕು ದಾಖಲೆಗಳನ್ನು ಮತ್ತು ಪಟ್ಟಣ/ ನಗರ ಆಸ್ತಿಗಳ ದಾಖಲೆಗಳನ್ನು ಸಿದ್ಧಪಡಿಸುವುದಕ್ಕಾಗಿ ಕೆಟಿಪಿಪಿ ಕಾಯ್ದೆ ಅನುಸರಿಸಿ ಅರ್ಹ ಖಾಸಗಿ ಏಜೆನ್ಸಿಗಳಿಂದ ಡ್ರೋಣ್ ಸರ್ವೆ ಅಥವಾ ವೈಮಾನಿಕ ಸಮೀಕ್ಷೆಯನ್ನು ರೂ. 287 ಕೋಟಿಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ

* ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಪ್ರಸ್ತುತ ಚಾಲನೆಯಲ್ಲಿರುವ 131 ಗ್ರಾಮಗಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಚಾಮರಾಜನಗರ ಜಿಲ್ಲೆಯ 32 ಗ್ರಾಮಗಳಿಗೆ ವಿಸ್ತರಿಸುವ ರೂ. 22.00 ಕೋಟಿಗಳ ಅಂದಾಜು ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ 

* ಚಿತ್ರದುರ್ಗ ಜಿಲ್ಲೆಯ, ಚಿತ್ರದುರ್ಗ ಮತ್ತು ಹಿರಿಯೂರು ತಾಲ್ಲೂಕುಗಳಲ್ಲಿ ಬಾಕಿ ಇರುವ 300 ಜನವಸತಿಗಳಿಗೆ ಕುಡಿಯುವ ನೀರು ಒದಗಿಸುವ .392.08 ಕೋಟಿಗಳ ಅಂದಾಜು ಆಡಳಿತಾತ್ಮಕ ಅನುಮೋದನೆ.

( ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ಮಂಗಳೂರು ತಾಲ್ಲೂಕು, ಚೇಳ್ಯಾರು, ಪದವು ಮತ್ತು ಮಧ್ಯ ಗ್ರಾಮಗಳಲ್ಲಿ ಪ್ರಾಧಿಕಾರದ ವತಿಯಿಂದ 45.85 ಎಕರೆ/ ಸೆಂಟ್ಸ್ ಭೂಮಿಯಲ್ಲಿ ಉದ್ದೇಶಿಸಿರುವ ವಸತಿ ಬಡಾವಣೆ ಯೋಜನೆಯ ರೂ. 30.50 ಕೋಟಿಗಳ ವಿಸ್ತತ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ

* ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಅಮರಗೋಳ ಗ್ರಾಮದ ಬ್ಲಾಕ್ ನಂ.89ರಲ್ಲಿ ಸ್ಥಾಪಿಸಲಾದ ಆರ್ಯಭಟ ಐಟಿ ಪಾರ್ಕಿನಲ್ಲಿ ಬಾಕಿ ಉಳಿದ 3 ಎಕರೆ ಜಮೀನನ್ನು 3 ಐಟಿ/ಬಿಟಿ ಕಂಪನಿಗಳಿಗೆ ಹಂಚಿಕೆ/

* ಯಾದಗಿರಿ ಜಿಲ್ಲೆಯ ಗುರುಮಿಠಕಲ್ ಮತಕ್ಷೇತ್ರ ವ್ಯಾಪ್ತಿಯಲ್ಲಿ ಭೀಮಾ ಟಿಪ್ಪಣಿ ನದಿ ಪಾತ್ರದಿಂದ 20 ಕೆರೆಗಳಿಗೆ ನೀರು ತುಂಬಿಸುವ ರೂ. 165 ಕೋಟಿ ಲಗತ್ತಿಸಿದ ಅಂದಾಜು ಮೊತ್ತದ ಯೋಜನೆಗೆ ಅನುಮೋದನೆ

* ಬೆಳಗಾವಿ ಜಿಲ್ಲೆಯ   ತಾಲ್ಲೂಕಿನ ಕಲ್ಲೋಳ ಯಡೂರು ಟಿಪ್ಪಣಿ ರಸ್ತೆಯಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ಬಿಡ್-ಕಂ-ಬ್ಯಾರೇಜ್ ಮರು ಲಗತ್ತಿಸಿದೆ ನಿರ್ಮಾಣ ಕಾಮಗಾರಿಯ ರೂ. 35,00 ಕೋಟಿಗಳ ವಿವರವಾದ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ

click me!