* ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ
* ಕರ್ತವ್ಯಕ್ಕೆ ಹಾಜರಾತಿ ಬಗ್ಗೆ ಮಹತ್ವದ ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ
* ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಹೊರಡಿಸಿರುವ ಸುತ್ತೋಲೆ
ಬೆಂಗಳೂರು, (ಜೂನ್.19): ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ಕಡಿಮೆಯಾಗಿದ್ದು, ಹಂತ-ಹಂತವಾಗಿ ಲಾಕ್‌ಡೌನ್ ಸಡಿಲಿಕೆಗೆ ಸರ್ಕಾರ ಮುಂದಾಗಿದೆ. ಇದರ ಮಧ್ಯೆ ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿ ಹಾಜರಾತಿಗೆ ಮಹತ್ವದ ಸುತ್ತೋಲೆಯೊಂದು ಹೊರಬಿದ್ದಿದೆ.
ಹೌದು... ಸೋಂಕು ಕಡಿಮೆಯಾಗುತ್ತಿರುವುದರಿಂದ ಅನ್‌ಲಾಕ್ ಪ್ರಕ್ರಿಯೆ ಆರಂಭವಾಗಿದ್ದು, ಅನೇಕ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ. ಅದರಂತೆ ಸರ್ಕಾರಿ ಕಚೇರಿಗಳಲ್ಲಿ ಶೇ.50ರಷ್ಟು ರೊಟೇಷನ್ ಆಧಾರದ ಮೇಲೆ ಸಿಬ್ಬಂದಿ ಹಾಜರಾತಿಗೆ ಆದೇಶ ಹೊರಡಿಸಲಾಗಿದೆ.
undefined
3 ನೇ ಅಲೆ ತಡೆಗೆ 3 T + ವ್ಯಾಕ್ಸಿನ್ ಸೂತ್ರ ರಚಿಸಿದ ಕೇಂದ್ರ
ರಾಜ್ಯದಲ್ಲಿ ಅಗತ್ಯ ಸೇವೆ ಒದಗಿಸುವಂತ ಇಲಾಖೆಯ ಎಲ್ಲಾ ವರ್ಗದ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಬೇಕು. ಇದಲ್ಲದೇ ಗ್ರೂಪ್ -ಎ ವೃಂದದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು. ಗ್ರೂಪ್-ಬಿ, ಸಿ ಮತ್ತು ಡಿ ವೃಂದದ ಅಧಿಕಾರಿ, ಸಿಬ್ಬಂದಿಗಳು ಶೇ.50ರಷ್ಟು ರೊಟೇಷನ್ ಆಧಾರದ ಮೇಲೆ ಕರ್ತವ್ಯಕ್ಕೆ ಹಾಜರಾಗುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ಸುತ್ತೋಲೆ ಹೊರಡಿಸಿದ್ದು, ಲ್ಲಿ ಅತ್ಯಗತ್ಯ ಸೇವೆಗಳನ್ನು ಒದಗಿಸುತ್ತಿರುವ ಇಲಾಖೆಗಳಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಒಳಾಡಳಿತ ಇಲಾಖೆ, ಕಂದಾಯ ಇಲಾಖೆ, ಕಾರ್ಮಿಕ ಇಲಾಖೆ, ಗ್ರಾಮೀಣಾಭೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಲ್ಲಾ ಮಕ್ಕಳ ರಕ್ಷಣಾ ಸೇವೆಗಳನ್ನು ಒದಗಿಸುತ್ತಿರುವ ಮಕ್ಕಳ ರಕ್ಷಣಾ ನಿರ್ದೇಶನಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ವರ್ಗದ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗತಕ್ಕದ್ದು ಎಂದು ತಿಳಿಸಿದ್ದಾರೆ.
ಜೂನ್ 21ರಿಂದ ಕರುನಾಡು ಮತ್ತಷ್ಟು ಅನ್‌ಲಾಕ್..? ಯಾವುದಕ್ಕೆ ಸಿಗುತ್ತೆ ರಿಲೀಫ್?
ಮೇಲೆ ತಿಳಿಸಿದ ಇಲಾಖೆಗಳನ್ನು ಹೊರತುಪಡಿಸಿ, ಉಳಿದ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೂಪ್-ಎ ವೃಂದದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕಚೇರಿಗೆ ಹಾಜರಾಗತಕ್ಕದ್ದು ಮತ್ತು ಗ್ರೂಪ್ ಬಿ, ಸಿ ಮತ್ತು ಡಿ ವೃಂದದ ಅಧಿಕಾರಿ ಮತ್ತು ಸಿಬ್ಬಂದಿಗಳು ಶೇ.50ರಂತೆ ರೊಟೇಷನ್ ಆಧಾರದ ಮೇಲೆ ಕರ್ತವ್ಯಕ್ಕೆ ಹಾಜರಾಗಬೇಕೆಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಹಾಜರಾತಿಯಿಂದ ವಿನಾಯಿತಿ ನೀಡಲ್ಪಟ್ಟ ಗ್ರೂಪ್ ಬಿ, ಸಿ ಮತ್ತು ಡಿ ವೃಂದದ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕೇಂದ್ರ ಸ್ಥಾನದಲ್ಲಿ ಲಭ್ಯವಿರುವುದು ಹಾಗೂ ಕೋವಿಡ್-19 ಕರ್ತವ್ಯಕ್ಕಾಗಿ ನಿಯೋಜಿಸಿದ್ದಲ್ಲಿ ತಪ್ಪದೇ ಹಾಜರಾಗಿ ಕರ್ತವ್ಯ ನಿರ್ವಹಿಸತಕ್ಕದ್ದು. ದೃಷ್ಠಿಹೀನ ಹಾಗೂ ಇತರೆ ದೈಹಿಕ ಅಂಗವೈಕಲ್ಯ ಹೊಂದಿರುವ ಅಧಿಕಾರಿ, ಸಿಬ್ಬಂದಿಗಳು ಮತ್ತು ಗರ್ಭಿಣಿ ಮಹಿಳಾ ಸಿಬ್ಬಂದಿಗೆ ವಿನಾಯಿತಿ ನೀಡಲಾಗಿದೆ.