ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ

By Suvarna News  |  First Published Sep 14, 2020, 4:37 PM IST

ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್ ನೀಡಿದೆ.


ಬೆಂಗಳೂರು, (ಸೆ.14): ರಾಜ್ಯದಲ್ಲಿ ಕೊರೋನಾ ತಾಂಡವವಾಡುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಾತ್ರವಲ್ಲದೇ ದೇಶವೇ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ.

 ಆದ್ದರಿಂದ ಪ್ರಸ್ತುತ ಕರ್ನಾಟಕ ರಾಜ್ಯ ಸರ್ಕಾರವು ಎಲ್ಲಾ ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆಗಳನ್ನ ತಡೆಹಿಡಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಕರ್ನಾಟಕ ಸರ್ಕಾರ ಸುತ್ತೋಲೆಯಲ್ಲಿ ಹೊರಡಿಸಿದೆ.

Tap to resize

Latest Videos

undefined

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್

ರಾಜ್ಯದಲ್ಲಿ ಕೋವಿಡ್-19 ನಿಂದ ಉಂಟಾದ ಪರಿಸ್ಥಿತಿಯನ್ನು ನಿಭಾಯಿಸಿ ಆರ್ಥಿಕ ಸ್ಥಿತಿಯನ್ನು ಸುಸ್ಥಿತಿಗೆ ತರುವ ನಿಟ್ಟಿನಲ್ಲಿ ಸಂಪನ್ಮೂಲವನ್ನು ಕ್ರೋಢೀಕರಿಸುವುದು ಅಗತ್ಯವಾಗಿರುತ್ತದೆ. ಇದಕ್ಕಾಗಿ, ಸರ್ಕಾರದ ವೆಚ್ಚದಲ್ಲಿ ಮಿತವ್ಯಯ ಪಾಲಿಸುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ 2020-21ನೇ ಸಾಲಿನ ಆರ್ಥಿಕ ವರ್ಷದಲ್ಲಿ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳು ಮತ್ತು ಬ್ಯಾಕ್‌ಲಾಗ್‌ ಹುದ್ದೆಗಳೂ ಸೇರಿದಂತೆ ಎಲ್ಲಾ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವುದನ್ನು ಮುಂದಿನ ಆದೇಶದ ವರೆಗೆ ತಡೆಹಿಡಿಯಲಾಗಿದೆ ಎಂದು ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಇನ್ನು ಅನುಕಂಪದ ಆಧಾರದ ನೇಮಕಾತಿ ಪ್ರಕರಣಗಳಲ್ಲಿ 2020-21ನೇ ಸಾಲಿನಲ್ಲಿ ಅರ್ಜಿಗಳನ್ನು ಸ್ವೀಕರಿಸಲು ಆರ್ಥಿಕ ಇಲಾಖೆಯು ಸಹಮತಿಸಿದ್ದು, ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಮುಂದಿನ ಆರ್ಥಿಕ ವರ್ಷದಲ್ಲಿ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್ ಕೊಟ್ಟಂತಾಗಿದೆ.

click me!