40 ವರ್ಷ ವಯಸ್ಸಾದರೂ ಸಿಗುತ್ತೆ ರಾಜ್ಯ ಸರ್ಕಾರಿ ಕೆಲಸ!

Published : Jan 30, 2026, 10:32 AM IST
Karnataka Govt Jobs Age Limit relaxation

ಸಾರಾಂಶ

ಕರ್ನಾಟಕ ರಾಜ್ಯ ಸಿವಿಲ್‌ ಸೇವಾ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ, ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು 5 ವರ್ಷಗಳ ಕಾಲ ಸಡಿಲಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ಬೆಂಗಳೂರು (ಜ.30): ರಾಜ್ಯ ಸಿವಿಲ್‌ ಸೇವಾ ಹುದ್ದೆಗಳಿಗೆ ನೇರ ನೇಮಕಾತಿ ಅಡಿ ನೇಮಕಾತಿಗೆ ಸಂಬಂಧಿಸಿದಂತೆ 2027ರ ಡಿ.31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಒಂದು ಬಾರಿ ಮಾತ್ರ ಅನ್ವಯಿಸಿ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು 5 ವರ್ಷ ಸಡಿಲಗೊಳಿಸಲು ರಾಜ್ಯ ಸರ್ಕಾರ ಆದೇಶಿಸಿದೆ.

ಈ ಕ್ರಮದಿಂದಾಗಿ ಸಾಮಾನ್ಯ ವರ್ಗಕ್ಕೆ ಅರ್ಜಿ ಸಲ್ಲಿಸಲು ಈಗಿರುವ 35 ವರ್ಷಗಳ ಗರಿಷ್ಠ ವಯೋಮಿತಿ 40 ವರ್ಷಕ್ಕೆ, ಹಿಂದುಳಿದ ವರ್ಗಗಳಿಗೆ ಇರುವ 38 ವರ್ಷಗಳ ವಯೋಮಿತಿ 43 ವರ್ಷಗಳಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡಗಳಿಗೆ ಇರುವ 40 ವರ್ಷಗಳ ವಯೋಮಿತಿ 45 ವರ್ಷಗಳಿಗೆ ವಿಸ್ತರಣೆಯಾಗಲಿದೆ. ಅಲ್ಲದೆ. ಈ ವಯೋಮಿತಿ ಸಡಿಲಿಕೆಯು 2027ರ ಡಿ. 31ರವರೆಗೆ ಹೊರಡಿಸಲಾಗುವ ನೇಮಕಾತಿ ಅಧಿಸೂಚನೆಗೆ ಅನ್ವಯವಾಗಲಿದೆ.

ಒಳ ಮೀಸಲಾತಿ ಸೇರಿ ಇನ್ನಿತರ ಕಾರಣಗಳಿದ ಕೆಲ ಕೆಲ ವರ್ಷಗಳಿಂದ ನೇಮಕಾತಿ ವಿಳಂಬವಾಗಿದೆ. ಅದರಿಂದ ಉದ್ಯೋಗಾಕಾಂಕ್ಷಿಗಳ ವಯೋಮಿತಿ ಮೀರಿದ್ದು, ಅವರು ಸರ್ಕಾರಿ ಉದ್ಯೋಗದಿಂದ ವಂಚಿತರಾಗುವಂತಾಗಿದೆ. ಹೀಗಾಗಿ ವಯೋಮಿತಿಯನ್ನು ಸಡಿಲಗೊಳಿಸುವಂತೆ ಆಗ್ರಹಿಸಲಾಗುತ್ತಿತ್ತು. ಆ ಹಿನ್ನೆಲೆಯಲ್ಲಿ 2025ರ ಸೆ.29ರಂದು ವಯೋಮಿತಿಯನ್ನು 3 ವರ್ಷ ಸಡಿಲಿಕೆ ಮಾಡಿ ಆದೇಶಿಸಲಾಗಿತ್ತು.

ಸರ್ಕಾರದ ಮೇಲೆ ಭಾರೀ ಒತ್ತಡ

ಆದರೆ, ವಯೋಮಿತಿ ಸಡಿಲಿಕೆಯನ್ನು 5 ವರ್ಷಗಳಿಗೆ ಹೆಚ್ಚಿಸುವಂತೆ ಸರ್ಕಾರದ ಮೇಲೆ ಒತ್ತಡಗಳು ಬಂದಿದ್ದವು. ಅದನ್ನು ಮನಗಂಡು ಕಳೆದ ಸಚಿವ ಸಂಪುಟ ಸಭೆಯಲ್ಲಿ ಒಂದು ಬಾರಿ ಮಾತ್ರ ಅನ್ವಯಿಸಿ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು 5 ವರ್ಷಗಳಿಗೆ ಹೆಚ್ಚಳ ಮಾಡಲು ನಿರ್ಧರಿಸಲಾಗಿತ್ತು. ಇದೀಗ ಆ ನಿರ್ಧಾರದಂತೆ ಸರ್ಕಾರದಿಂದ ಗರಿಷ್ಠ ವಯೋಮಿತಿಯನ್ನು 5 ವರ್ಷಗಳಿಗೆ ಹೆಚ್ಚಿಸಿ ಆದೇಶಿಸಲಾಗಿದೆ.

 

PREV
Read more Articles on
click me!

Recommended Stories

ಖಾಕಿ ಪಡೆಗೆ ಭರ್ಜರಿ ಗಿಫ್ಟ್: ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ 'ಸಾಂದರ್ಭಿಕ ರಜೆ' ಕೊಡಿ - ಡಿಜಿ ಸಲೀಂ ಆದೇಶ
ಕನ್ನಡಿಗ IAS ಅಧಿಕಾರಿ ಮಹಾಂತೇಶ್ ಬೀಳಗಿ ಮಗಳಿಗೆ ಜಾಕ್‌ಪಾಟ್; ಅನುಕಂಪದಡಿ ₹92,500 ಸಂಬಳದ ನೌಕರಿ ಕೊಟ್ಟ ಸರ್ಕಾರ!