ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ನಿಯಮಗಳು 1978, ಕರ್ನಾಟಕ ರಾಜ್ಯ ಪೊಲೀಸ್ ಮಿನಿಸ್ಟೀರಿಯಲ್ ಸರ್ವಿಸಸ್ ನೇಮಕಾತಿ ತಿದ್ದುಪಡಿ ನಿಯಮಗಳು 2020 ರ ಅಡಿಯಲ್ಲಿ ರಾಜ್ಯದಲ್ಲಿ 36,261 ನಾಗರಿಕ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ
ಬೆಂಗಳೂರು, (ಜೂನ್.22): 36,261 ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ.
ಸದ್ಯಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು, ನಂತರ ನೇಮಕಾತಿಗೆ ಅಂತಿಮ ಅಧಿಸೂಚನೆ ಪ್ರಕಟವಾಗುತ್ತದೆ.
undefined
ಕರ್ನಾಟಕ ಅಗ್ನಿಶಾಮಕ ದಳದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ನಿಯಮಗಳು 1978, ಕರ್ನಾಟಕ ರಾಜ್ಯ ಪೊಲೀಸ್ ಮಿನಿಸ್ಟೀರಿಯಲ್ ಸರ್ವೀಸಸ್ ನೇಮಕಾತಿ ತಿದ್ದುಪಡಿ ನಿಯಮಗಳು 2020ರ ಅಡಿಯಲ್ಲಿ ಈ ಪೊಲೀಸ್ ಕಾನ್ಸ್‌ಟೇಬಲ್ಗಳ ನೇಮಕಾತಿ ನಡೆಯುತ್ತಿದ್ದು, ಒಟ್ಟು 36,361 ಹುದ್ದೆಗಳ ಭರ್ತಿಗೆ ಕರಡು ಅಧಿಸೂಚನೆ ಪ್ರಕಟವಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದವರಿಗೆ 23,500ದಿಂದ 47,650ರೂ. ವರೆಗೆ ವೇತನವನ್ನೂ ನಿಗದಿ ಮಾಡಲಾಗಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಬ್ಬರಿಗೂ ಅವಕಾಶವಿದೆ.
ಈ ಅಧಿಸೂಚನೆಯ ಕುರಿತು ಯಾರಿಗಾದರೂ ಆಕ್ಷೇಪಣೆಗಳು ಇದ್ದಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ, ವಿಧಾನಸೌಧ, ಬೆಂಗಳೂರು 560001 ಈ ವಿಳಾಸಕ್ಕೆ ಅಧಿಸೂಚನೆ ಪ್ರಕಟವಾದ ಹದಿನೈದು ದಿನಗಳಲ್ಲಿ ಸಲ್ಲಿಸಬಹುದು.