ರಾಜ್ಯದ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಮರು ಪರೀಕ್ಷೆಯ ದಿನಾಂಕವನ್ನು ಸರ್ಕಾರದಿಂದ ಮುಂದೂಡಿಕೆ ಮಾಡಲಾಗಿದ್ದು, ಶೀಘ್ರವೇ ದಿನಾಂಕ ಪ್ರಕಟಿಸಲಾಗುವುದು.
ಬೆಳಗಾವಿ (ಡಿ.4): ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ರಾಜ್ಯದ 545 ಪಿಎಸ್‌ಐ ಹುದ್ದೆಗಳ ನೇಮಕಕ್ಕೆ ನಡೆಸಲಾಗುತ್ತಿರುವ ಮರು ಪರೀಕ್ಷೆಯ ದಿನಾಂಕವನ್ನು ಡಿ.23ರ ಬದಲಾಗಿ ಮುಂದೂಡಿಕೆ ಮಾಡಲಾಗಿದೆ. ಈ ಬಗ್ಗೆ ಶೀಘ್ರವೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ದಿನಾಂಕ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.
ಚಳಿಗಾಲದ ಅಧಿವೇಶನದಲ್ಲಿ ಮೊದಲ ದಿನ ವಿಪಕ್ಷ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗುತ್ತಿದೆ. ಎಲ್ಲಿಯವರೆಗೆ ಉತ್ತರ ಕರ್ನಾಟಕಕ್ಕೆ ನ್ಯಾಯ ಸಿಗೋದಿಲ್ವೋ ಅಲ್ಲಿಯತನಕ ನಾನು ಅಧಿವೇಶನದಲ್ಲಿ ಶುಭ ಕೊರುವುದಿಲ್ಲ. ಹಲವು ದಿನಗಳಿಂದ ಪಿಎಸ್‌ಐ ಪರೀಕ್ಷೆ ಮುಂದೂಡುವಂತೆ ಮನವಿ ಮಾಡಿದರೂ ಸರ್ಕಾರ ಮಣಿಯುತ್ತಿಲ್ಲ. ನನ್ನ ಹೋರಾಟಕ್ಕೆ ಎಲ್ಲರೂ ಮಣಿಯುತ್ತಾರೆ. ಆದರೆ, ಸ್ವಾಭಿಮಾನಿಯಾದ ನಮ್ಮ ಹೋರಾಟಕ್ಕೆ ಸರ್ಕಾರ ಮಣಿಯಲೇಬೇಕು ಎಂದು ಆಗ್ರಹಿಸಿದರು.
ಪಿಎಸ್‌ಐ ಪರೀಕ್ಷೆ ಮುಂದೂಡಿಕೆಗೆ ರಕ್ತದಲ್ಲಿ ಪತ್ರ ಬರೆದ ಅಭ್ಯರ್ಥಿಗಳು: ಮಸ್ಕಿ ಶಾಸಕರಿಂದಲೂ ಸಿಎಂಗೆ ಮನವಿ
ಇದಕ್ಕೆ ಉತ್ತರ ನೀಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು, ಸರ್ಕಾರದಿಂದ ನೇಮಕ ಮಾಡಿಕೊಳ್ಳಲಾಗುತ್ತಿರುವ 545 ಪಿಎಸ್‌ಐ (PSI) ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನ ಮುಂದೂಡಿಕೆ ಮಾಡಲಾಗಿದೆ. ಒಂದು ತಿಂಗಳು ಮುಂದೂಡಿಕೆ ಮಾಡಲಾಗಿದೆ. PSI ಪರೀಕ್ಷೆ ಮುಂದೂಡಿಕೆಗೆ ಅನೇಕರು ಮನವಿ ಮಾಡಿಕೊಂಡಿದ್ದರು. ಜೊತೆಗೆ ಸಾವಿರಾರು ಅಭ್ಯರ್ಥಿಗಳು ಕೂಡ ಸಮಯಾವಕಾಶ ಬೇಕು ಎಂದು ಮನವಿ ಮಾಡಿದ್ದರು. ಈಗ ಸದನದಲ್ಲಿ ಯತ್ನಾಳ್ ಈ ವಿಚಾರವನ್ನ ಪ್ರಸ್ತಾಪ ಮಾಡಿದ್ದಾರೆ. ಇನ್ನು ಅನೇಕ ಶಾಸಕರುಗಳು ಪಕ್ಷಾತೀತವಾಗಿ ಬೇಡಿಕೆಯನ್ನ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಪಿಎಸ್‌ಐ ಪರೀಕ್ಷೆ ನಡೆಸುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿ ಒಂದು ತಿಂಗಳ ಪರೀಕ್ಷೆಯನ್ನ ಮುಂದೂಡಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಸರ್ಕಾರದ ಪೊಲೀಸ್ ಇಲಾಖೆ ಬದಲಾಗಿ ಸ್ವತಂತ್ರ ಇಲಾಖೆಯಿಂದ ಪರೀಕ್ಷೆ ನಡೆಸಲು ಹೈಕೋರ್ಟ್ ಸೂಚನೆಯ ಹಿನ್ನೆಲೆಯಲ್ಲಿಉ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಆದ್ದರಿಂದ ಪಿಎಸ್‌ಐ ಪರೀಕ್ಷೆಯ ಮುಂದೂಡಲಾದ ದಿನಾಂಕವನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕ್ಯಾಲೆಂಡರ್ ನೋಡಿಕೊಂಡು ದಿನಾಂಕ ಪ್ರಕಟ ಮಾಡುತ್ತೇವೆ. ರಾಜ್ಯದ ಎಲ್ಲ 54 ಸಾವಿರ ಅಭ್ಯರ್ಥಿಗಳು ಪೂರ್ಣವಾಗಿ ಪರೀಕ್ಷೆ ತಯಾರಿ ಮಾಡಿಕೊಂಡು ಪರೀಕ್ಷೆಯನ್ನು ಬರೆಯಿರಿ ಎಂದು ಹೇಳಿದರು
ರಕ್ತದಲ್ಲಿ ಪತ್ರ ಬರೆದಿದ್ದ ಅಭ್ಯರ್ಥಿಗಳು: ರಾಜ್ಯ ಸರ್ಕಾರದಿಂದ ಈ ಹಿಂದೆ ನಡೆಸಲಾಗಿದ್ದ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) 545 ಹುದ್ದೆಗಳ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಸಾಬೀತಾದ ಹಿನ್ನೆಲೆಯಲ್ಲಿ, ಮರು ಪರೀಕ್ಷೆ ನಡೆಸಲು ಡಿ.23ರಂದು ದಿನಾಂಕ ನಿಗದಿ ಮಾಡಲಾಗಿದೆ. ಆದರೆ, ಪಿಎಸ್‌ಐ ಅಭ್ಯರ್ಥಿಗಳು ಈ ಪರೀಕ್ಷೆಯನ್ನು ಮುಂದೂಡಿಕೆ ಮಾಡುವಂತೆ ಸರ್ಕಾರಕ್ಕೆ ರಕ್ತದಲ್ಲಿ ಪತ್ರ ಬರೆದು ಮನವಿ ಮಾಡಿದ್ದಾರೆ. ಜೊತೆಗೆ, ರಾಯಚೂರು ಜಿಲ್ಲೆಯ ಮಸ್ಕಿ ಶಾಸಕರೂ ಕೂಡ ಪರೀಕ್ಷೆ ಮುಂದೂಡುವಂತೆ ಪತ್ರವನ್ನು ಬರೆದಿದ್ದರು.
ಬೆಂಗಳೂರು ತಡರಾತ್ರಿ ಹೋಟೆಲ್ ಮುಚ್ಚಿಸಲು ಬಂದ ಪಿಎಸ್‌ಐ ಮೇಲೆ 50,000 ರೂ. ಲಂಚದ ಕೇಸ್ ಹಾಕ್ತೀನೆಂದ ಮಾಲೀಕ
ಈ ಕುರಿತು ರಕ್ತದಲ್ಲಿ ಬರೆದ ಪತ್ರವೊಂದನ್ನು ಹಂಚಿಕೊಂಡಿರುವ ಅಭ್ಯರ್ಥಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಪರೀಕ್ಷೆ ಮುಂದೂಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಮಂತ್ರಿ ಜಿ. ಪರಮೇಶ್ವರ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಅಭ್ಯರ್ಥಿ ರಕ್ತದಿಂದ ಬರೆದ ಪತ್ರದಲ್ಲಿ PLEASE POSTPONE PSI 545 ಎಂದು ಬರೆದುಕೊಂಡಿದ್ದಾರೆ. ಈ ಪತ್ರವನ್ನು ರವಿಶಂಕರ್ ಮಾಲಿಪಾಟೀಲ್ ಎನ್ನುವವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿಕೊಂಡಿದ್ದು, 56,000 ಪಿಎಸ್‌ಐ ಪರೀಕ್ಷಾ ಅಭ್ಯರ್ಥಿಗಳ ಮನವಿ ಪರಿಗಣಿಸಬೇಕು ಎಂದು ಮನವಿ ಮಾಡಿದ್ದರು.