ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್: ಕಲ್ಯಾಣ ಕರ್ನಾಟಕದ ಎಲ್ಲಾ ನೇಮಕಾತಿ ಭರ್ತಿಗೆ ತಡೆ

By Suvarna News  |  First Published Jul 6, 2020, 8:20 PM IST

ರಾಜ್ಯದಲ್ಲಿ ಕೋವಿಡ್-19 ನಿಂದ ಉಂಟಾದ ಪರಿಸ್ಥಿತಿಯನ್ನು ನಿಭಾಯಿಸಿ, ಆರ್ಥಿಕ ಸ್ಥಿತಿಯನ್ನು ಸುಸ್ಥಿತಿಗೆ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್ ಕೊಟ್ಟಿದೆ.
 


ಬೆಂಗಳೂರು, (ಜುಲೈ.06): ಕಲ್ಯಾಣ ಕರ್ನಾಟಕ ಭಾಗದ ವಿವಿಧ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ತಡೆ ಹಿಡಿದೆ. ಈ ಮೂಲಕ ರಾಜ್ಯ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್ ಕೊಟ್ಟಿದೆ.

 2020-21ನೇ ಸಾಲಿನ ಆರ್ಥಿಕ ವರ್ಷದಲ್ಲಿ ಕಲ್ಯಾಣ ಕರ್ನಾಟಕ ವೃಂದದ (ಹೈದರಾಬಾದ್ ಕರ್ನಾಟಕ) ಹುದ್ದೆಗಳು ಮತ್ತು ಬ್ಯಾಕ್ ಲಾಗ್ ಹುದ್ದೆಗಳೂ ಸೇರಿದಂತೆ ಎಲ್ಲಾ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವುದನ್ನು ಮುಂದಿನ ಆದೇಶದವರೆಗೆ ತಡೆ ಹಿಡಿದು ಇಂದು (ಸೋಮವಾರ) ಆದೇಶ ಹೊರಡಿಸಿದೆ. 

Tap to resize

Latest Videos

undefined

ಕೆಪಿಎಸ್‌ಸಿಯಲ್ಲಿ ಉದ್ಯೋಗಾವಕಾಶ: ಅರ್ಜಿ ಹಾಕಿ

ಈಗಾಗಲೇ ಆರ್ಥಿಕ ಇಲಾಖೆಯ ಅನುಮತಿ ಪಡೆದು ನೇಮಕಾತಿಯ ವಿವಿಧ ಹಂತದಲ್ಲಿರುವ ಹುದ್ದೆಗಳಿಗೂ ಸಹ ಇದೇ ಆದೇಶ ಅನ್ವಯವಾಗುತ್ತದೆ ಎಂದು ತಿಳಿಸಲಾಗಿದೆ.

ಆದೇಶ ಇಂತಿದೆ

ಈ ಕುರಿತಂತೆ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಐ ಎಸ್ ಎನ್ ಪ್ರಸಾದ್,  ರಾಜ್ಯದಲ್ಲಿ ಕೋವಿಡ್-19 ನಿಂದ ಉಂಟಾದ ಪರಿಸ್ಥಿತಿಯನ್ನು ನಿಭಾಯಿಸ ಆರ್ಥಿಕ ಸ್ಥಿತಿಯನ್ನು ಸುಸ್ಥಿತಿಗೆ ತರುವ ನಿಟ್ಟಿನಲ್ಲಿ ಸಂಪನ್ಮೂಲವನ್ನು ಕ್ರೂಢೀಕರಿಸುವುದು ಅಗತ್ಯವಾಗಿರುತ್ತದೆ. ಇದಕ್ಕಾಗಿ ಮಿತವ್ಯಯ ಪಾಲಿಸುವ ಅವಶ್ಯಕತೆ ಇದೆ.

ಜಾಬ್ಸ್‌ ನೇಮಕಾತಿ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ನಿಟ್ಟಿನಲ್ಲಿ 2020-21ನೇ ಸಾಲಿನ ಆರ್ಥಿಕ ವರ್ಷದಲ್ಲಿ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳು ಮತ್ತು ಬ್ಯಾಕ್ ಲಾಗ್ ಹುದ್ದೆಗಳೂ ಸೇರಿದಂತೆ ಎಲ್ಲಾ ನೇರ ನೇಮಕಾತಿ ಹುದ್ದೆ ಭರ್ತಿ ಮಾಡುವುದನ್ನು ಮುಂದಿನ ಆದೇಶದವರೆಗೆ ತಡೆ ಹಿಡಿಯಲಾಗಿದೆ. ಈಗಾಗಲೇ ಆರ್ಥಿಕ ಇಲಾಖೆಯ ಅನುಮತಿ ಪಡೆದು ನೇಮಕಾತಿಯ ವಿವಿಧ ಹಂತಗಳಲ್ಲಿರುವ ಹುದ್ದೆಗಳಿಗೂ ಸಹ ಈ ಆದೇಶ ಅನ್ವಯವಾಗುತ್ತದೆ ಎಂದು ತಿಳಿಸಲಾಗಿದೆ ಎಂಬುದಾಗಿ ಆದೇಶದಲ್ಲಿ ಸೂಚಿಸಿದ್ದಾರೆ.

click me!