State Government Jobs: ಹೈಕೋರ್ಟ್‌ನ 150 ಟೈಪಿಸ್ಟ್ ಹುದ್ದೆ, ನ.27 ಅರ್ಜಿ ಸಲ್ಲಿಸಲು ಕೊನೆ ದಿನ

By Suvarna News  |  First Published Nov 24, 2021, 5:19 PM IST

ಕರ್ನಾಟಕ ಹೈಕೋರ್ಟ್‌(Karnataka  High court) ನಲ್ಲಿ ಖಾಲಿ ಇರುವ 150 ಟೈಪಿಸ್ಟ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದು, ಅರ್ಜಿ ಸಲ್ಲಿಸಲು ನವೆಂಬರ್ 27 ಕೊನೆಯ ದಿನವಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಡ ಮಾಡದೇ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.


ಕರ್ನಾಟಕ ಹೈಕೋರ್ಟ್ (Karnataka High Court) ನಲ್ಲಿ ನೌಕರಿ ಗಿಟ್ಟಿಸಿಕೊಳ್ಳಲು ಕಾಯುತ್ತಿರುವವರಿಗೆ ಬಂಪರ್ ಅವಕಾಶವೊಂದು ಅರಸಿ ಬಂದಿದೆ. ಡಿಗ್ರಿ ಅಥವಾ ಪದವಿ ಮುಗಿಸಿ ಹೈಕೋರ್ಟ್ ನಲ್ಲಿ ಜಾಬ್ ಮಾಡುವ ಆಸೆ ನಿಮಗಿದ್ದರೆ, ಕೂಡಲೇ ಅರ್ಜಿ ಸಲ್ಲಿಸಬಹುದು. ಯಾಕಂದ್ರೆ ಹೆಚ್ಚು ಸಮಯಾವಕಾಶವಿಲ್ಲ.. ಅರ್ಜಿ ಸಲ್ಲಿಕೆಗೆ ಬಾಕಿ ಇರೋದು ಇನ್ನು ಮೂರೇ ದಿನ ಅಷ್ಟೆ. ಕರ್ನಾಟಕ ಹೈಕೋರ್ಟ್ ನಲ್ಲಿ ಒಟ್ಟು 150 ಟೈಪಿಸ್ಟ್ ಹುದ್ದೆ (Typist Posts)ಗಳು ಖಾಲಿ ಇವೆ. ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ಕಳೆದ ತಿಂಗಳು ಅಕ್ಟೋಬರ್ 27ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ನವೆಂಬರ್ 27ರವರೆಗೆ ಅರ್ಜಿ ಸಲ್ಲಿಕೆಗೆ ಡೆಡ್ ಲೈನ್ ಇದೆ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬಹುದು. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಹೈಕೋರ್ಟ್‌ನ ಅಧಿಕೃತ ವೆಬ್‌ಸೈಟ್ karnatakajudiciary.kar.nic.in ನಲ್ಲಿ ಅಧಿಸೂಚನೆಯನ್ನು ಪರಿಶೀಲಿಸಬಹುದು. ಅಧಿಸೂಚನೆಯ  ಬಗ್ಗೆ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ ಮಾಡೆ. 

ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಇನ್ನು ಟೈಪಿಸ್ಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕ ಹೈಕೋರ್ಟ್ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುವುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

Tap to resize

Latest Videos

undefined

Wipro Recruitment: ಎಂಜಿನಿಯರ್ ಪದವೀಧರರಿಗೆ ಉದ್ಯೋಗಾವಕಾಶ

 ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವಯಸ್ಸಾಗಿರಬೇಕು. ಗರಿಷ್ಠ 35/ 38/ 40 ವರ್ಷ (ವಿವಿಧ ವರ್ಗಗಳಿಗೆ ಅನುಸಾರ)  ಮೀರಿರಬಾರರು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡ ಅಥವಾ ಇತರ ಹಿಂದುಳಿದ ವರ್ಗದ ವರ್ಗ- I ಗೆ ಸೇರಿದವರಿಗೆ 40 ವರ್ಷಗಳು ಆಗಿರುತ್ತವೆ. ವರ್ಗ II - A ಅಥವಾ II - B ಅಥವಾ ವರ್ಗ III - A ಅಥವಾ III ಗೆ ಸೇರಿದ ವ್ಯಕ್ತಿಗೆ 38 ವರ್ಷ ಮೀರಿರಬಾರದು. ಇತರೆ ಹಿಂದುಳಿದ ವರ್ಗಗಳ ಬಿ (OBC) ಮತ್ತು ಸಾಮಾನ್ಯ ಮೆರಿಟ್ ಅಭ್ಯರ್ಥಿಗಳಿಗೆ 35 ವರ್ಷ ಆಗಿರುತ್ತದೆ.

ಟೈಪಿಸ್ಟ್ ಹುದ್ದೆ (Typist Posts) ಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ ₹ 25,200 ರಿಂದ 81,100 ರೂ.  ವೇತನ ನೀಡಲಾಗುತ್ತದೆ. ಸೋ‌ ಮತ್ಯಾಕೆ ತಡ, ಸರ್ಕಾರಿ ಉದ್ಯೋಗ (Government Jobs) ಅರಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಆದಷ್ಟು ಬೇಗ ಅರ್ಜಿ ಹಾಕಿ ನಿಮ್ಮ ಕನಸು ನನಸಾಗಿಸಿಕೊಳ್ಳಿ. ಅಭ್ಯರ್ಥಿಯ ದಾಖಲೆಗಳನ್ನು ಪರಿಶೀಲಿಸಿದ ನಂತರ  ವೈಯಕ್ತಿಕ ಸಂದರ್ಶನಕ್ಕೆ ಕರೆಯಲಾಗುವುದು.

ಸಾಮಾನ್ಯ ಅರ್ಹತೆ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ₹ 350 ಪಾವತಿಸಬೇಕು. ಹಾಗೇ ಪರಿಶಿಷ್ಟ ಜಾತಿ/ ಪರಿಶಿಷ್ಟ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ₹200 ಇರುತ್ತದೆ.  ಬುಡಕಟ್ಟು/ ಪ್ರವರ್ಗ–I / ಮಾನದಂಡದ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳು (ದೈಹಿಕವಾಗಿ ಸವಾಲು ಹೊಂದಿರುವವರು). ಅಭ್ಯರ್ಥಿಗಳು ಆನ್‌ಲೈನ್ ಮೋಡ್ ಮತ್ತು ಚಲನ್ ಮೋಡ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದು. 

ECIL Recruitment: ತಾಂತ್ರಿಕ ಅಧಿಕಾರಿಗಳ ನೇಮಕ್ಕೆ ಅರ್ಜಿ ಆಹ್ವಾನ    

ಕರ್ನಾಟಕದ ಹೈಕೋರ್ಟ್‌ನಲ್ಲಿ ಖಾಲಿ ಇರುವ ಈ ಟೈಪಿಸ್ಟ್ ಹುದ್ದೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್ 27 ಕೊನೆಯ ದಿನವಾಗಿದೆ. ಹಾಗಾಗಿ, ತಡ ಮಾಡದೇ ಅರ್ಜಿ ಸಲ್ಲಿಸಿ.

click me!