ರಾಜ್ಯ ಸರ್ಕಾರದ 15,000 ಶಿಕ್ಷಕರ ನೇಮಕಾತಿ ಅಧಿಸೂಚನೆಗೆ ತಡೆ ನೀಡಲು ಹೈಕೋರ್ಟ್ ನಕಾರ

Sathish Kumar KH   | Kannada Prabha
Published : Aug 27, 2026, 11:46 AM IST
Karnataka teachers recruitment

ಸಾರಾಂಶ

ರಾಜ್ಯ ಸರ್ಕಾರದ 15 ಸಾವಿರ ಶಿಕ್ಷಕರ ನೇಮಕಾತಿ ಅಧಿಸೂಚನೆಗೆ ತಡೆ ನೀಡಲು ಹೈಕೋರ್ಟ್‌ ನಿರಾಕರಿಸಿದೆ. ಉರ್ದು ಮಾಧ್ಯಮ ಶಾಲೆಗಳನ್ನು ನೇಮಕಾತಿಯಿಂದ ಹೊರಗಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸಿದ್ದು, ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಬೆಂಗಳೂರು (ಆ.27): ರಾಜ್ಯ ಸರ್ಕಾರ ಸುಮಾರು 15 ಸಾವಿರ ಶಿಕ್ಷಕರ ನೇಮಕಾತಿಗೆ ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಲು ಹೈಕೋರ್ಟ್‌ ನಿರಾಕರಿಸಿದೆ.

ಆ.11ರಂದು ಸರ್ಕಾರ ಹೊರಡಿಸಿರುವ ನೇಮಕಾತಿ ಅಧಿಸೂಚನೆ ಪ್ರಶ್ನಿಸಿ ಹುಬ್ಬಳ್ಳಿಯ ಉರ್ದು ಭಾಷಾ ಶಿಕ್ಷಕಿ ಅಸ್ಮಾ ಘೋರಿ ಮತ್ತಿತರರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರ ಪೀಠ ಈ ನಿರ್ದೇಶನ ನೀಡಿದೆ.

ಕನ್ನಡ ಅಥವಾ ಇಂಗ್ಲಿಷ್‌ ಬೋಧನಾ ಮಾಧ್ಯಮವಾಗಿರುವ ಶಾಲೆಗಳಲ್ಲಿ ಕೆಲವು ಖಾಲಿ ಹುದ್ದೆಗಳಿವೆ ಎಂದು ತೋರುತ್ತದೆ. ಸರ್ಕಾರ ಆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪ್ರಯತ್ನಿಸುತ್ತಿದೆ. ಆದರೆ, ಉರ್ದು ಶಾಲೆಗಳಲ್ಲಿ ನೇಮಕಾತಿ ಏಕೆ ನಡೆಯುತ್ತಿಲ್ಲ ಎಂಬುದು ಕಾನೂನು ಬದ್ಧ ಪ್ರಶ್ನೆ ಹಾಗಾಗಿ, ಉರ್ದು ಮಾಧ್ಯಮ ಶಾಲೆಗಳು ಸೇರಿದಂತೆ ಭಾಷಾ ಅಲ್ಪಸಂಖ್ಯಾತ ಶಿಕ್ಷಕರ ಆಯ್ಕೆ ಪ್ರಕ್ರಿಯೆಯನ್ನು ಏಕೆ ಕೈಗೊಂಡಿಲ್ಲ ಎಂಬುದರ ಕುರಿತು ವಿವರಣೆ ನೀಡುವಂತೆ ಸರ್ಕಾರಕ್ಕೆ ಮೌಖಿಕವಾಗಿ ಸೂಚಿಸಿದ ಪೀಠ ವಿಚಾರಣೆಯನ್ನು ಸೆ.7ಕ್ಕೆ ಮುಂದೂಡಿದೆ.

ನೇಮಕಾತಿಯಿಂದ ಹೊರಗುಳಿದ ಉರ್ದು ಮಾಧ್ಯಮ ಶಾಲೆಗಳು

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಸರ್ಕಾರದ ನೇಮಕಾತಿ ಅಧಿಸೂಚನೆಯು ಉರ್ದು ಮಾಧ್ಯಮ ಶಾಲೆಗಳನ್ನು ಸಂಪೂರ್ಣವಾಗಿ ಹೊರಗಿಟ್ಟಿದೆ. ಇದು ಕರ್ನಾಟಕ ಶಿಕ್ಷ ಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷ ಣ ಇಲಾಖೆ) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2026 ಮತ್ತು 19, 21, 29(1) ಮತ್ತು 350ಅ ವಿಧಿಗಳ ಉಲ್ಲಂಘನೆ ಎಂದು ವಾದಿಸಿದರು. ಅರ್ಜಿದಾರರ ಈ ಮನವಿ ತಳ್ಳಿಹಾಕಿದ ನ್ಯಾಯಾಲಯ, ಈ ನಿರ್ದಿಷ್ಟ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗುವುದಿಲ್ಲ ಎಂದಿತು.

PREV
Read more Articles on
click me!

Recommended Stories

ಕೆಪಿಎಸ್‌ಸಿ ಹಗರಣ: ಇಡಿ ಅಧಿಕಾರಿಗಳು ಬರ್ತಿದ್ದಂತೆ ಮನೆಗೆ ಬೀಗ ಹಾಕಿ IAS ಜ್ಞಾನೇಂದ್ರ ಕುಮಾರ್ ಪರಾರಿ!
KEA: 141 ಓಎಂಆರ್‌ ನಾಪತ್ತೆಗೆ ಹೊಣೆ ಯಾರು? ಕೆಇಎನಾ ಅಥವಾ ವಿದ್ಯಾರ್ಥಿಗಳಾ? ಇಲ್ಲಿದೆ ಕಂಪ್ಲೀಟ್‌ ರಿಪೋರ್ಟ್