ರಾಜ್ಯದ ಎಲ್ಲ ಪೊಲೀಸರಿಗೆ ಬೆಳ್ಳಿ ಪದಕ ವಿತರಣೆ: ಸಿಎಂ ಸಿದ್ದರಾಮಯ್ಯ ಘೋಷಣೆ

By Sathish Kumar KH  |  First Published Jan 16, 2024, 4:11 PM IST

ಕರ್ನಾಟಕ ಏಕೀಕರಣದ ಸುವರ್ಣ ಮಹೋತ್ಸವದ ಅಂಗವಾಗಿ ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಲಾಗುವುದು.


ಬೆಂಗಳೂರು (ಜ.16): ಕರ್ನಾಟಕ ಏಕೀಕರಣದ ಸುವರ್ಣ ಮಹೋತ್ಸವದ ಅಂಗವಾಗಿ ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಲಾಗುವುದು. ರಾಜ್ಯದ ಎಲ್ಲಾ ಪೊಲೀಸರ ವೈದ್ಯಕೀಯ ವೆಚ್ಚ 1000 ದಿಂದ 1500 ಕ್ಕೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.

ಪೊಲೀಸ್ ಪ್ರಧಾನ ಕಚೇರಿಯಲ್ಲಿ ಮಂಗಳವಾರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ನಡೆಸಲಾದ ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕ ಏಕೀಕರಣದ ಸುವರ್ಣ ಮಹೋತ್ಸವದ ಅಂಗವಾಗಿ ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಲಾಗುವುದು. ರಾಜ್ಯದ ಎಲ್ಲಾ ಪೊಲೀಸರ ವೈದ್ಯಕೀಯ ವೆಚ್ಚ 1000 ದಿಂದ 1500 ಕ್ಕೆ ಹೆಚ್ಚಿಸಲಾಗುವುದು. CEN ಠಾಣಾಧಿಕಾರಿಗಳ ಹುದ್ದೆಯನ್ನು ACP ಮತ್ತು DCP ಮಟ್ಟಕ್ಕೆ ಉನ್ನತೀಕರಣ ಮಾಡಲಾಗುವುದು. ಬೆಂಗಳೂರು ನಗರದಲ್ಲಿ 8 ಅಡಿಷನಲ್ DCP ಹುದ್ದೆಗಳನ್ನು ಹೆಚ್ಚುವರಿಯಾಗಿ ಸೃಷ್ಟಿಸಲಾಗುವುದು. ರಾಜ್ಯವನ್ನು ಡ್ರಗ್ ಮುಕ್ತ ಗೊಳಿಸುವ ದಿಕ್ಕಿನಲ್ಲಿ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Tap to resize

Latest Videos

undefined

ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶ, ಸಿಎಂ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ ಭಾಗಿ

ರಾಜ್ಯದಲ್ಲಿ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ. ಮಹಿಳೆ ಮತ್ತು ಮಕ್ಕಳ ಮೇಲಿನ  ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು. ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಟ ಹೆಚ್ಚಾಗಬೇಕು. ವೈಜ್ಞಾನಿಕವಾಗಿ ಸಮರ್ಥ ಆರೋಪ ಪಟ್ಟಿ ಸಲ್ಲಿಕೆಯಾಗಬೇಕು. ಶಿಕ್ಷೆ ಪ್ರಮಾಣ ಹೆಚ್ಚಾಗಬೇಕು. ಇಲ್ಲದಿದ್ದರೆ ಡಿಸಿಪಿ ಗಳನ್ನೇ ಈ ವೈಫಲ್ಯಕ್ಕೆ ಹೊಣೆ ಮಾಡುವುದು ಅನಿವಾರ್ಯ ಎಂದು ಎಚ್ವರಿಕೆ ನೀಡಿದರು.

ಪೊಲೀಸರಿಗೆ ನಮ್ಮ ಸರ್ಕಾರ ಸಂಪೂರ್ಣ ಫ್ರೀ ಹ್ಯಾಂಡ್ ಕೊಟ್ಟಿದೆ. ಪೊಲೀಸರ ಕೆಲಸದಲ್ಲಿ ಮೂಗು ತೂರಿಸಬಾರದು ಎನ್ನುವುದು ನನ್ನ ಬದ್ಧತೆ. ಆದರೆ, ನಾವು ಫ್ರೀ ಹ್ಯಾಂಡ್ ಕೊಟ್ಟಿದ್ದು ದುರುಪಯೋಗ ಆಗಬಾರದು. ಅದು ಜನರಿಗೆ ಅನುಕೂಲ ಆಗುವಂತಿರಬೇಕು. ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು. ನಮ್ಮದು ಜಾತ್ಯತೀತ ರಾಷ್ಟ್ರವಾಗಿದೆ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಸಾಧ್ಯವಿದೆ. ಕಳ್ಳತನ ಹೆಚ್ಚಾಗ್ತಾ ಇದೆ ಎಂದರೆ ಗಸ್ತು ವ್ಯವಸ್ಥೆ, ಹೋಯ್ಸಳ ಸಿಬ್ಬಂದಿ ಮತ್ತು ಠಾಣಾಧಿಕಾರಿಗಳು ವೈಫಲ್ಯರಾಗಿದ್ದಾರೆ ಎಂದೇ ಅರ್ಥ. ಇದೇ ಸ್ಥಿತಿ ಮುಂದುವರೆದರೆ ಡೆಪ್ಯೂಟಿ ಕಮಿಷನರ್ ಆಫ್ ಪೊಲೀಸ್ (DCP)ಗಳನ್ನು ಕರ್ತವ್ಯಲೋಪಕ್ಕೆ ಹೊಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ವಾರ್ನಿಂಗ್‌ ನೀಡಿದ್ದಾರೆ.

ಕನ್ನಡ ಸಿನಿಮಾ ಹಾಗೂ ಧಾರಾವಾಹಿಗಳ ನೈಸರ್ಗಿಕ ಶೂಟಿಂಗ್ ಸ್ಪಾಟ್ ಮಹದೇವಪುರದಲ್ಲಿ ಹುಲಿ ಪ್ರತ್ಯಕ್ಷ!

ಪೊಲೀಸ್ ಪ್ರಧಾನ ಕಚೇರಿಯಲ್ಲಿ ಮಂಗಳವಾರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ನಡೆಸಲಾದ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಸಾಧ್ಯವಿದೆ. ರಾಜ್ಯಾದ್ಯಂತ ಖಾಲಿ ಇರುವ ಪೊಲೀಸ್ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು. ಇನ್ನು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ನಗರ, ಪಟ್ಟಣ ಪ್ರದೇಶಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದರೆ ನೈಟ್‌ ಬೀಟ್ ಪೊಲೀಸರ ಗಸ್ತು ವ್ಯವಸ್ಥೆ, ಹೋಯ್ಸಳ ಸಿಬ್ಬಂದಿ ಕಾರ್ಯ ನಿರ್ವಹಣೆ ಮತ್ತು ಠಾಣಾಧಿಕಾರಿಗಳು ವೈಫಲ್ಯರಾಗಿದ್ದಾರೆ ಎಂದೇ ಅರ್ಥವಾಗುತ್ತದೆ. ಇದೇ ಸ್ಥಿತಿ ಮುಂದುವರೆದರೆ ಡೆಪ್ಯೂಟಿ ಕಮಿಷನರ್ ಆಫ್ ಪೊಲೀಸ್ (DCP) ಗಳನ್ನು ಕರ್ತವ್ಯಲೋಪಕ್ಕೆ ಹೊಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಭೆಯಲ್ಲಿ ಗೃಹ ಸಚಿವರಾದ ಜಿ.ಪರಮೇಶ್ವರ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ.ಕೆ.ವಿ. ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು‌ ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು.

click me!