KSISF Recruitment 2022: ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ರಾಜ್ಯ ಪೊಲೀಸ್

By Suvarna News  |  First Published Feb 11, 2022, 9:02 PM IST

ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ರಾಜ್ಯ ಪೊಲೀಸ್ ಅಧಿಸೂಚನೆ ಹೊರಡಿಸಿದ್ದು, ಮಾರ್ಚ್‌ 03 ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಬೆಂಗಳೂರು(ಫೆ.11): ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯಲ್ಲಿ (Karnataka State Industrial Security Force - KSISF) ಖಾಲಿ ಇರುವ ಹುದ್ದೆಗಳ ಭರ್ತಿಗೆ ಕರ್ನಾಟಕ ರಾಜ್ಯ ಪೊಲೀಸ್ (Karnataka State police - KSP) ಅಧಿಸೂಚನೆ ಹೊರಡಿಸಿದೆ. ಒಟ್ಟು 63 ಸಬ್ ಇನ್ಸ್ ಪೆಕ್ಟರ್ (Sub-Inspector) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮಾರ್ಚ್‌ 03, 2022 ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ತಾಣ  http://ksisfsi21.ksponline.co.in/  ಗೆ ಭೇಟಿ ನೀಡಿ. ಪುರುಷ, ಮಹಿಳಾ ಮತ್ತು ತೃತೀಯ ಲಿಂಗ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ  ಸಬ್ ಇನ್ಸ್ ಪೆಕ್ಟರ್  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಯಾವುದೇ ಪದವಿ ಪಡೆದಿರಬಹುದು.

Latest Videos

undefined

ವಯೋಮಿತಿ: ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ   ಸಬ್ ಇನ್ಸ್ ಪೆಕ್ಟರ್  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗೆ ಕನಿಷ್ಠ 21 ವರ್ಷ ಆಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 26 ವರ್ಷ, ಇತರೆ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 28 ವರ್ಷ ಗರಿಷ್ಠ ವಯಸ್ಸು ನಿಗದಿಪಡಿಸಲಾಗಿದೆ.

MANGALORE UNIVERSITY RECRUITMENT 2022: ನ್ಯಾಯವಾದಿ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

ಆಯ್ಕೆ ಪ್ರಕ್ರಿಯೆ: ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ   ಸಬ್ ಇನ್ಸ್ ಪೆಕ್ಟರ್  ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಹಿಷ್ಣುತಾ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ: ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ   ಸಬ್ ಇನ್ಸ್ ಪೆಕ್ಟರ್  ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದವರಿಗೆ  ಮಾಸಿಕ 37900 ರೂ ನಿಂದ  70850 ರೂ. ವರೆಗೆ ವೇತನ ದೊರೆಯಲಿದೆ.

ಅರ್ಜಿ ಶುಲ್ಕ: ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ   ಸಬ್ ಇನ್ಸ್ ಪೆಕ್ಟರ್  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ  ಸಾಮಾನ್ಯ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ.500, ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.250 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

India Unemployed people: 2020ರ ಲಾಕ್‌ಡೌನ್ ಮೊದಲ 3 ತಿಂಗಳಲ್ಲಿ ಉದ್ಯೋಗ ಕಳೆದುಕೊಂಡವರು 23 ಲಕ್ಷ ಮಂದಿ!

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಮಾರ್ಚ್ 03, 2022
ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ ಮಾರ್ಚ್ 05, 2022
ಅರ್ಜಿ ಶುಲ್ಕವನ್ನು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಅಥವಾ ಅಂಚೆ ಕಚೇರಿಯಲ್ಲಿ ಮಾತ್ರ ಪಾವತಿಸಬೇಕು. ಅರ್ಜಿಯನ್ನು ಪೂರ್ಣ ಭರ್ತಿ ಮಾಡಿದ ನಂತರ ಚಲನ್‌ ಅನ್ನು ಸೃಜಿಸಿ ಬ್ಯಾಂಕ್ ಅಥವಾ ಅಂಚೆ ಕಛೇರಿಯಲ್ಲಿ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಕೆ ಹೇಗೆ?
- ರಾಜ್ಯ ಪೊಲೀಸ್‌ ಇಲಾಖೆಯ ಅಧಿಕೃತ ವೆಬ್‌ಸೈಟ್‌ http://ksisfsi21.ksponline.co.in/ ವಿಳಾಸಕ್ಕೆ ಭೇಟಿ ನೀಡಿ.
- ಓಪನ್ ಆದ ಹೋಮ್‌ಪೇಜ್‌ನಲ್ಲಿ 'NEW APPLICATION' ಎಂಬಲ್ಲಿ ಕ್ಲಿಕ್ ಮಾಡಿ.
- ನಂತರ ಸೂಚನೆಗಳನ್ನು ಓದಿಕೊಂಡು ಅಗತ್ಯ ಮಾಹಿತಿಗಳನ್ನು ನೀಡುವ ಮೂಲಕ ಅಪ್ಲಿಕೇಶನ್‌ ಪೂರ್ಣಗೊಳಿಸಬೇಕು.
- ಅರ್ಜಿ ಪೂರ್ಣಗೊಳಿಸಿದ ನಂತರ ಪ್ರಿಂಟ್‌ ತೆಗೆದಿಟ್ಟುಕೊಳ್ಳಿ.

click me!