ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಗಲು ಸರ್ಕಾರದ ವತಿಯಿಂದಲೇ ಅಲ್ಪಸಂಖ್ಯಾತರಿಗೆ ತರಬೇತಿ!

Published : Jun 11, 2025, 07:28 PM IST
PSI

ಸಾರಾಂಶ

ರಾಜ್ಯ ಸರ್ಕಾರದ ಅಲ್ಪಸಂಖ್ಯಾತ ಇಲಾಖೆಯು ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವ ಅಲ್ಪಸಂಖ್ಯಾತರಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲಿದೆ. ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಮತ್ತು ಪಾರ್ಸಿ ಜನಾಂಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಬೆಂಗಳೂರು (ಜೂ.11): ಪೊಲೀಸ್‌ ಇಲಾಖೆಯಲ್ಲಿ ಸೇವೆ ಸಲ್ಲಿಸಬೇಕು ಎನ್ನುವ ಆಸೆ ಇರುವ ಅಲ್ಪ ಸಂಖ್ಯಾತರಿಗೆ ರಾಜ್ಯ ಸರ್ಕಾರದ ಅಲ್ಪಸಂಖ್ಯಾತ ಇಲಾಖೆ ವತಿಯಿಂದಲೇ ಪರೀಕ್ಷಾ ಪೂರ್ವ ತರಬೇತಿ ಸಿಗಲಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ವಸತಿ ಸಹಿತ ಪೊಲೀಸ್ ಸಬ್ ಇನ್ಸೆಕ್ಟರ್ (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಜನಾಂಗದ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳಿಗೆ 2024-25ನೇ ಸಾಲಿಗೆ ಮಂಜೂರಾದ ವಸತಿ ಸಹಿತ ಕರ್ನಾಟಕ ರಾಜ್ಯದ ಪೊಲೀಸ್ ಸಬ್ ಇನ್ಸೆಕ್ಟರ್ (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಸ್ಟೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆಯ ಪ್ರಾರಂಭದ ದಿನಾಂಕ: 10-05-2025
  • ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 15-06-2025 (Extended)

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು

ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಭ್ಯರ್ಥಿಯು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿರಬೇಕು. (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ). ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ.

ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ(Degree)ಪೂರ್ಣಗೊಳಿಸಿರಬೇಕು

ವಯೋಮಿತಿ: ದಿನಾಂಕ - 23-05-2025 ರಂತೆ ಕನಿಷ್ಠ 21 ವರ್ಷಗಳು, ಗರಿಷ್ಠ 30 ವರ್ಷಗಳು

ಆಯ್ಕೆ ವಿಧಾನ:

ಸದರಿ ಯೋಜನೆಯಡಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ

ಅದರೊಂದಿಗೆ PSI ನೇಮಕಾತಿಯ ಅರ್ಹತೆಗಳಾದ ಎತ್ತರ:- ಪುರುಷರಿಗೆ ಕನಿಷ್ಠ 168 ಸೆಂ.ಮೀ. ಮತ್ತು ಮಹಿಳೆಯರಿಗೆ ಕನಿಷ್ಠ 157 ಸೆಂ.ಮೀ.

ತೂಕ:-ಪುರುಷರಿಗೆ ಕನಿಷ್ಠ 50 ಕೆ.ಜಿ. ಮತ್ತು ಮಹಿಳೆಯರಿಗೆ ಕನಿಷ್ಠ 45 ಕೆ.ಜಿ. ಎದೆಯ ಸುತ್ತಳತೆ(ಪುರುಷರಿಗೆ): ಕನಿಷ್ಠ 76 ಸೆಂ.ಮೀ. ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ತರಬೇತಿ ಸ್ಥಳಗಳು

ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಳಗಾವಿ ಮತ್ತು ಮೈಸೂರು ಜಿಲ್ಲೆಯಲ್ಲಿ ತರಬೇತಿ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ

ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in/Sevasindhu/DepartmentServices 1 ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಜಿಲ್ಲಾ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ 8277799990 ಇವರನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

PREV
Read more Articles on
click me!

Recommended Stories

ಮಂಗಳೂರು: 'ಡಿಕೆಶಿ ಮುಂದಿನ ಸಿಎಂ’ ಘೋಷಣೆ ಕೂಗಿದ ಐವನ್, ಮಿಥುನ್‌ಗೆ ನೋಟಿಸ್?
ಸೋಶಿಯಲ್ ಮೀಡಿಯಾದಿಂದ ದೂರವಿದ್ದು 10 ಸರ್ಕಾರಿ ನೌಕರಿ ಪಡೆದು ಸ್ಫೂರ್ತಿಯಾದ ಸಾಧಕ!