ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕೆ.ಎಸ್.ಆರ್.ಪಿ (ಪುರುಷ) ಹಾಗೂ ಸೇವಾನಿರತ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಈ ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
ಬೆಂಗಳೂರು, (ಆ.10): ಪೊಲೀಸ್ ಇಲಾಖೆಯಲ್ಲಿ 40 KSRP ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಆಗಸ್ಟ್ 28,2019ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.ಪ್ರಸ್ತುತ ಸೇವ ನಿರತ ಪೊಲೀಸ್ ಪೇದೆಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗಗಳ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ
undefined
ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಓಬಿಸಿ (2ಎ,2ಬಿ,3ಎ ಮತ್ತು 3ಬಿ) ಅಭ್ಯರ್ಥಿಗಳಿಗೆ 250 ರು. ಮತ್ತು ಪರಿಶಿಷ್ಟ ಜಾತಿ ,ಪರಿಶಿಷ್ಟ ಪಂಗಡ,ಪ್ರವರ್ಗ-1ರ ಅಭ್ಯರ್ಥಿಗಳು 100 ರು. ಅರ್ಜಿ ಶುಲ್ಕವನ್ನು ನಿಗದಿ ಪಡಿಸಲಾಗಿದೆ. ನಿಗದಿತ ಶುಲ್ಕವನ್ನು ನಗದು ರೂಪದಲ್ಲಿ ಸ್ಥಳೀಯ ಅಂಚೆ ಕಚೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಿತಕ್ಕದ್ದು.
ವಯೋಮಿತಿ: ಆಗಸ್ಟ್ 28,2019ರ ಅನ್ವಯ ಅಭ್ಯರ್ಥಿಗೆ ಕನಿಷ್ಟ 21 ವರ್ಷ ಆಗಿರಬೇಕು. ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ 28 ವರ್ಷದೊಳಗಿನ ಅಭ್ಯರ್ಥಿಗಳು ಮತ್ತು 26 ವರ್ಷ ವಯೋಮಿತಿಯೊಳಗಿನ ಇತರೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಕರ್ನಾಟಕ ಅಂಚೆ ಇಲಾಖೆಯಲ್ಲಿ 2637 ಹುದ್ದೆ, ಅರ್ಜಿ ಹಾಕಿ
ವಿದ್ಯಾರ್ಹತೆ: ಈ ಹುದ್ದೆಗಳಿಗೆ UPSCಯಿಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಸೇವಾ ನಿರತರು: ಸೇವಾ ನಿರತ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿ ಜೊತೆಯಲ್ಲಿ ಪೊಲೀಸ್ ಇಲಾಖೆಯ ಯಾವುದೇ ವೃಂದದಲ್ಲಿ 5 ವರ್ಷಗಳ ಕನಿಷ್ಟ ಸೇವೆಯನ್ನು ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ /ಹೆಡ್ ಕಾನ್ಸ್‌ಟೇಬಲ್ / ಪೊಲೀಸ್ ಕಾನ್ಸ್‌ಟೇಬಲ್ ಆಗಿ ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,900 ರಿಂದ 70,850 ರು. ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಹಿಷ್ಣುತೆ ಪರೀಕ್ಷೆ , ದೇಹದಾರ್ಢ್ಯತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ