4014 ಸಿವಿಲ್‌, ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ ನೇಮಕ; ಅರ್ಜಿ ಸಲ್ಲಿಕೆ ಆರಂಭ

By Suvarna News  |  First Published May 20, 2020, 7:33 PM IST

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಮತ್ತು ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳ ನೇಮಕಾತಿಗೆ ಅರ್ಜಿಸಲ್ಲಿಕೆ ಆರಂಭವಾಗಿದೆ.


ಬೆಂಗಳೂರು, (ಮೇ, 20): ಕರ್ನಾಟಕ ಪೊಲೀಸ್ ಇಲಾಖೆ ಖಾಲಿ ಇರುವ 4104 ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇಂದಿನಿಂದ ಅರ್ಜಿ ಸಲ್ಲಿಸಬಹುದು.

ಆನ್‌ಲೈನ್‌ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : ಇಂದಿನಿಂದ (20-05-2020) ರಿಂದ 22-06-2020ರ ವರೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇದೆ.

Tap to resize

Latest Videos

undefined

ಕರ್ನಾಟಕ ಪೊಲೀಸ್ ಇಲಾಖೆಯ ಖಾಲಿ ಹುದ್ದೆಗೆ ಅರ್ಜಿ ಆಹ್ವಾನ; ಆಸಕ್ತರಿಗೆ ಸುವರ್ಣವಕಾಶ!

ಹುದ್ದೆಗಳ ವಿವರ
* ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್(Non-HK)-2007
* ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್(HK) - 558
* ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ (Non-HK) - 1005
* ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ (HK) - 444

ಪೊಲೀಸ್ ಕಾನ್ಸ್‌ಟೇಬಲ್(ನಾಗರಿಕ) ಹುದ್ದೆಗಳಿಗೆ ವಯೋಮಿತಿ: ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 19 ವರ್ಷ ವಯಸ್ಸಾಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 25 ವರ್ಷ, ಎಸ್‌ಸಿ / ಎಸ್‌ಟಿ / ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 27 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್‌/ಡಿಎಆರ್‌) ಹುದ್ದೆಗಳಿಗೆ ವಯೋಮಿತಿ: ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 25 ವರ್ಷ, ಎಸ್‌ಸಿ / ಎಸ್‌ಟಿ / ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 27 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ: ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ  250 ರೂ. ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ 100 ರೂ. ನಿಗದಿಪಡಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ http://cpcnhk20.ksp-online.in/ ಗೆ ಭೇಟಿ ನೀಡಿ.

click me!