ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಗ್ರೂಪ್ ಡಿ ಡಿವಿಜನ್ ನಲ್ಲಿ ಒಟ್ಟು 7 ದಲಾಯತ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಫ್ಲೈನ್ ಮೂಲಕ ಫೆಬ್ರವರಿ 25 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಬೆಂಗಳೂರು(ಫೆ.22): ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ( Karnataka State Administrative Tribunal - KSAT) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಗ್ರೂಪ್ ಡಿ ಡಿವಿಜನ್ ನಲ್ಲಿ ಒಟ್ಟು 7 ದಲಾಯತ್ (Dalayath) ಹುದ್ದೆಗಳ ಭರ್ತಿಗೆ ಇಲಾಖೆ ಮುಂದಾಗಿದೆ. ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ಲೈನ್ (Offline) ಮೂಲಕ ಫೆಬ್ರವರಿ 25 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಆಸಕ್ತರು ksat.karnataka.gov.in ಗೆ ಭೇಟಿ ನೀಡಲು ಕೋರಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕಡ್ಡಾಯವಾಗಿ 10ನೇ ತರಗತಿ ಉತ್ತೀರ್ಣರಾಗಿರಬೇಕು. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
undefined
ವಯೋಮಿತಿ: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಫೆಬ್ರವರಿ 25, 2022ಕ್ಕೆ ಅನ್ವಯವಾಗಿ ಕನಿಷ್ಠ 18 ಮತ್ತು ಗರಿಷ್ಠ 35 ವರ್ಷವಾಗಿರಬೇಕು. OBC ಅಭ್ಯರ್ಥಿಗಳಿಗೆ 3 ವರ್ಷ, SC/ ST/ Cat-I ಅಭ್ಯರ್ಥಿಗಳಿಗೆ 05 ವರ್ಷ ಮತ್ತು PH/ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
KSSRDI RECRUITMENT 2022: ರಾಜ್ಯ ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅರ್ಜಿ ಶುಲ್ಕ: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ SC/ ST/ Cat-I/ PH ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಮಿಕ್ಕ ಎಲ್ಲಾ ಅಭ್ಯರ್ಥಿಗಳಿಗೆ 150 ರೂ. ಅರ್ಜಿ ಶುಲ್ಕ ನಿಗದಿಯಾಗಿದೆ. ಅರ್ಜಿ ಶುಲ್ಕವನ್ನು ಡಿಡಿ/ಐಪಿಒ ಮೂಲಕವೇ ಸಲ್ಲಿಸಬೇಕು.
ಆಯ್ಕೆ ವಿಧಾನ: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮದಂತೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ ವಿವರ: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 17,000 ದಿಂದ 28,950 ರೂ ವರೆಗೆ ವೇತನ ದೊರೆಯಲಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿಯನ್ನು ಅಧಿಕೃತ ವೆಬ್‌ತಾಣಕ್ಕೆ ಭೇಟಿ ನೀಡಿ ಡೌನ್‌ಲೋಡ್ ಮಾಡಿಕೊಂಡು. ಅರ್ಜಿಯಲ್ಲಿ ಕೇಳಿರುವ ಮಾಹಿತಿಯನ್ನು ತುಂಬಬೇಕು. ಬಳಿಕ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಪೋಸ್ಟ್ ಮೂಲಕ ಅಥವಾ ಖುದ್ದಾಗಿ ತಲುಪಿಸಬಹುದು.
ಕರೆಸ್ಪಾಂಡೆಂಟ್
ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ
ಕಂದಾಯ ಭವನ
7ನೇ ಮಹಡಿ, ಕೆ.ಜಿ.ರಸ್ತೆ
ಬೆಂಗಳೂರು - 560009
Correspondent
Karnataka State Administrative Tribunal
Kandaya Bhavan
7th Floor, K.G Road
Bengaluru – 560009