KSP Recruitment 2022: ಪೊಲೀಸ್ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೂ ಅವಕಾಶ ಕೊಟ್ಟ ಕರ್ನಾಟಕ, ಇಂದೇ ಅರ್ಜಿ ಸಲ್ಲಿಸಿ

By Suvarna News  |  First Published Dec 22, 2021, 1:22 PM IST
  • ಆಸಕ್ತ ಪುರುಷ, ಮಹಿಳಾ ಸದಸ್ಯರಲ್ಲದೆ ತೃತೀಯ ಲಿಂಗಿಗಳಿಗೂ ಅವಕಾಶ ನೀಡಿದ ರಾಜ್ಯ ಪೊಲೀಸ್ ಇಲಾಖೆ
  • ಇಲಾಖೆ ನಿರ್ಧಾರವನ್ನು ಸ್ವಾಗತಿಸಿದ ರಾಜ್ಯದ ಜನತೆ
  • 70 ಹುದ್ದೆಗಳಿಗೆ  ಅರ್ಜಿ ಸಲ್ಲಿಕೆಗೆ ಕೊನೆ ದಿನ ಜನವರಿ 18.

ಬೆಂಗಳೂರು(ಡಿ.12): ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ  ( Karnataka State Police  ) ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.  ಕೆಎಸ್‌ಆರ್‌ಪಿ (karnataka state reserve police) ಮತ್ತು ಭಾರತೀಯ ರಿಸರ್ವ್ ಬೆಟಾಲಿಯನ್ (Indian Reserve Battalion) ವಿಶೇಷ ಮೀಸಲು ಸಬ್‌ಇನ್‌ಸ್ಪೆಕ್ಟರ್ ಹುದ್ದೆಗೆ ಪುರುಷ, ಮಹಿಳೆಯರು ಮತ್ತು ತೃತೀಯ ಲಿಂಗಿಗಳಿಂದ (Transgenders) ಅರ್ಜಿಗಳನ್ನು ಆಹ್ವಾನಿಸಿದೆ.  ಒಟ್ಟು 70 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಲು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಪುರುಷ, ಮಹಿಳಾ ಸದಸ್ಯರಲ್ಲದೆ ತೃತೀಯ ಲಿಂಗದ ಅಭ್ಯರ್ಥಿಗಳಿಗೆ ಕೂಡ ಅರ್ಜಿ ಸಲ್ಲಿಸಲು ಕೋರಲಾಗಿರುವುದು ವಿಶೇಷ, ಈಗಾಗಲೇ ಡಿಸೆಂಬರ್ 20 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜನವರಿ 18,2022ರ ಬೆಳಿಗ್ಗೆ 6 ಗಂಟೆಯೊಳಗೆ ಅರ್ಜಿಯನ್ನು  ಸಲ್ಲಿಸಬಹುದಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗೆ https://ksp.karnataka.gov.in/ ಭೇಟಿ ನೀಡಬಹುದು. ಅಥವಾ http://rec21.ksp-online.in/ ಭೇಟಿ ನೀಡಿ.

ವಿದ್ಯಾರ್ಹತೆ: ವಿಶೇಷ ಮೀಸಲು ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಪದವಿ ವಿದ್ಯಾರ್ಹತೆಯನ್ನು ಪಡೆದಿರುವುದು ಖಡ್ಡಾಯವಾಗಿದೆ.

Latest Videos

undefined

ವಯೋಮಿತಿ : ಕೆಎಸ್‌ಪಿ ವಿಶೇಷ ಮೀಸಲು ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಜನವರಿ 18,2022ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 26 ವರ್ಷ ವಯೋಮಿತಿಯೊಳಗಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಗರಿಷ್ಟ 28 ವರ್ಷ ಆಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯಯನ್ನು ನೀಡಲಾಗಿದೆ.

KSP Recruitment 2022: ರಾಜ್ಯ ಪೊಲೀಸ್ ಇಲಾಖೆಯಲ್ಲಿನ ನ್ಯಾಯ ವಿಜ್ಞಾನ ಪ್ರಯೋಗಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅಹ್ವಾನ

 

Yes. You read it right! Karnataka State Police is an equal opportunity organisation. We are recruiting men, women and even transgenders. pic.twitter.com/HhM3RtxpQv

— DGP KARNATAKA (@DgpKarnataka)

ಆಯ್ಕೆ ಪ್ರಕ್ರಿಯೆ  ಮತ್ತು ವೇತನ: ಕೆಎಸ್‌ಪಿ ವಿಶೇಷ ಮೀಸಲು ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು  ದೇಹದಾರ್ಢ್ಯತೆ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸಿ  ಆಯ್ಕೆ ಮಾಡಲಾಗುತ್ತದೆ. ಮತ್ತು ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,900/- ರಿಂದ 70,850/-ರೂಗಳ ವರೆಗೆ ವೇತನ ಸಿಗಲಿದೆ.

2064 ಪೌರ ಕಾರ್ಮಿಕರ ನೇರ ನೇಮಕಾತಿಗೆ ಸರಕಾರ ಗ್ರೀನ್ ಸಿಗ್ನಲ್

ಅರ್ಜಿ ಶುಲ್ಕ ವಿವರ: ಕೆಎಸ್‌ಪಿ ವಿಶೇಷ ಮೀಸಲು ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, ಪ್ರವರ್ಗ-2ಎ, ಪ್ರವರ್ಗ-2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ನಗದು/ಆನ್‌ಲೈನ್ ರೂಪದಲ್ಲಿ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್‌ಡಿಎಫ್‌ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಬಹುದು. ಅರ್ಜಿ ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಅಂಚೆ ಕಚೇರಿಗಳಲ್ಲಿ ಪಾವತಿಸಲು ಜನವರಿ 20,2022 ಕೊನೆಯ ದಿನವಾಗಿರುತ್ತದೆ.

ಕಳೆದ ವರ್ಷ ನಗರದ ಎನ್‌ಜಿಒ ಮತ್ತು ಹಕ್ಕುಗಳ ಸಂಘ - ಸಂಗಮ ಹಾಗೂ ಸಾಮಾಜಿಕ ಕಾರ್ಯಕರ್ತೆ ನಿಶಾ ಗೂಳೂರ್ ಪರ ಹಿರಿಯ ವಕೀಲ ಬಿಟಿ ವೆಂಕಟೇಶ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯ ವಿಚಾರಣೆ ನಡೆಸಿದ್ದ ಹೈಕೋರ್ಟ್, "ಜುಲೈ 2021 ರಲ್ಲಿ ಎಲ್ಲಾ ವರ್ಗಗಳ ನೇಮಕಾತಿಯಲ್ಲಿ ಟ್ರಾನ್ಸ್‌ಜೆಂಡರ್‌ಗಳಿಗೆ ಶೇಕಡಾ ಒಂದರಷ್ಟು ಸಮತಲ ಮೀಸಲಾತಿ ನೀಡಬೇಕು ಎಂದು ಆದೇಶಿಸಿತ್ತು" ಎಂದು ವೆಂಕಟೇಶ್ ಅವರು ತಿಳಿಸಿದ್ದಾರೆ.

“ಕರ್ನಾಟಕ ಸರ್ಕಾರ ಪೊಲೀಸ್ ನೇಮಕಾತಿಯಲ್ಲಿ ಟ್ರಾನ್ಸ್‌ಜೆಂಡರ್‌ಗಳಿಗೆ ಸಮಾನ ಸ್ಥಾನಮಾನ ಘೋಷಿಸಿದೆ, ಇದು ದೇಶದಲ್ಲಿಯೇ ಮೊದಲ  ಹೆಜ್ಜೆಯಾಗಿದೆ ಮತ್ತು ತೃತೀಯ ಲಿಂಗಿಗಳಿಗೆ ಮೀಸಲಾತಿ ನೀಡುವಂತೆ ನ್ಯಾಯಾಲಯ ನೀಡಿರುವ ನಿರ್ದೇಶನ ಶ್ಲಾಘನೀಯ’ ಎಂದು ವೆಂಕಟೇಶ್ ಹೇಳಿದ್ದಾರೆ.

ತೃತೀಯಲಿಂಗಿ ಸಮುದಾಯದಿಂದ ಅರ್ಜಿಗಳನ್ನು ಆಹ್ವಾನಿಸಿದ ಕೆಎಸ್ ಪಿಯ ನಿರ್ಧಾರವನ್ನು ಸಂಗಮ ಸಂಘ ಸ್ವಾಗತಿಸಿದೆ ಮತ್ತು ಒಂದು ಸಂಘಟನೆಯಾಗಿ ಈ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಕ್ಕಾಗಿ ನಾವು ರಾಜ್ಯ ಪೊಲೀಸರಿಗೆ ಧನ್ಯವಾದ ಹೇಳುತ್ತೇವೆ ಎಂದು ತಿಳಿಸಿದೆ.

click me!