ಸಾರಿಗೆ ನಿಗಮಗಳ ನೌಕರರ ಬೇಡಿಕೆ ಬೇಗ ಈಡೇರಿಸಲು ಒತ್ತಾಯ

By Suvarna News  |  First Published Mar 4, 2024, 4:06 PM IST

ಸಾರಿಗೆ ಇಲಾಖೆಯ ನಾಲ್ಕೂ ನಿಗಮಗಳ ನೌಕರರ ಹಲವು ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಅಧಿಕಾರಿಗಳು ತಕ್ಷಣವೇ ಮುಂದಾಗಬೇಕು ಎಂದು ರಾಜ್ಯ ಸಾರಿಗೆ ನಿಗಮಗಳ ನೌಕರರ ಕೂಟದ ಕ್ಷೇಮಾಭಿವೃದ್ಧಿ ಸಂಘ  ಮನವಿ ಮಾಡಿದೆ.


ವರದಿ : ಪರಮೇಶ್ ಅಂಗಡಿ ಏಷ್ಯಾನೆಟ್ ಸುವರ್ಣ ನ್ಯೂಸ್

ಧಾರವಾಡ (ಮಾ.4): ಸಾರಿಗೆ ಇಲಾಖೆಯ ನಾಲ್ಕೂ ನಿಗಮಗಳ ನೌಕರರ ಹಲವು ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಅಧಿಕಾರಿಗಳು ತಕ್ಷಣವೇ ಮುಂದಾಗಬೇಕು ಎಂದು ರಾಜ್ಯ ಸಾರಿಗೆ ನಿಗಮಗಳ ನೌಕರರ ಕೂಟದ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷರಾದ ಹಾಗೂ ಕೆಪಿಸಿಸಿ ವಕ್ತಾರ ಪಿ.ಎಚ್. ನೀರಲಕೇರಿ ಅವರು ಮನವಿ ಮಾಡಿದ್ದಾರೆ.

Latest Videos

undefined

ಮಾರ್ಚ್ 1 ರಂದು ಸಾರಿಗೆ ನಿಗಮಗಳ ನೌಕರರಿಗೆ ಭವಿಷ್ಯ ನಿಧಿ ಬಡ್ಡಿಯ ದರವನ್ನ ನಿಗದಿಪಡಿಸುವ ಸಲುವಾಗಿ KSRTC ವ್ಯವಸ್ಥಾಪಕ ನಿರ್ದೇಶಕರಾದ ಅನ್ಬು ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಭವಿಷ್ಯ ನಿಧಿ ಸಭೆಯಲ್ಲಿ 8.15% ನಿಂದ 8.25% ಪರ್ಸೆಂಟ್ ಹೆಚ್ಚಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಆದರೆ, ಇದು ತೀರಾ ಕಡಿಮೆ ಇದೆ ಇದನ್ನು ಕನಿಷ್ಠ 9% ಗೆ ಹೆಚ್ಚಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಬೆಂಗಳೂರು ಮಹಿಳಾ ಸಬ್ ಇನ್ಸಪೆಕ್ಟರ್ ರಾಷ್ಟ್ರೀಯ ಶಟಲ್ ಬ್ಯಾಡ್ಮಿಂಟನ್ ಗೆ ಆಯ್ಕೆ

ಅಲ್ಲದೇ ಈ ಇಂದಿನ ಸರ್ಕಾರವು ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ ಪ್ರಣಾಳಿಕೆಯಲ್ಲಿ ಒಂದಾದ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಮತ್ತು ಸವಲತ್ತುಗಳನ್ನು ಸಾರಿಗೆ ನೌಕರರಿಗೂ ವಿಸ್ತರಿಸುವ ಭರವಸೆಯನ್ನು ಕಾಲ ವಿಳಂಬವಿಲ್ಲದೆ ಕೂಡಲೇ ಜಾರಿ ಮಾಡಬೇಕು‌ ಎಂದು ವಿನಂತಿಸಿದ್ದಾರೆ ಈ ಹಿಂದೆ ಡಿಸೆಂಬರ್ 2020 ಮತ್ತು ಏಪ್ರಿಲ್ 2021ರ ಮುಷ್ಕರಕ್ಕೆ ಸಂಬಂಧಿಸಿದಂತೆ ನೌಕರರ ವಿರುದ್ಧ ಕೈಗೊಂಡ ಎಲ್ಲ ಶಿಸ್ತಿನ ಕ್ರಮ ವಜಾ ಮತ್ತು ಪೊಲೀಸ್ ಪ್ರಕರಣಗಳನ್ನು ರದ್ದುಮಾಡಿ ಮುಷ್ಕರದ ಪೂರ್ವದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳಗಳಲ್ಲಿ ಕರ್ತವ್ಯಕ್ಕೆ ನಿಯೋಜಿಸಬೇಕು ಎಂದು ಮನವಿ ಮಾಡಿದ್ದಾರೆ.

Rameshwaram Cafe Blast ಆತುರದಲ್ಲಿ ಬಂದು 45 ಸೆಕೆಂಡ್‌ ನಲ್ಲಿ ಬಾಂಬರ್‌!

ಸಾರಿಗೆ ನೌಕರರಿಗೆ ಮತ್ತು ಅವಲಂಬಿತರಿಗೆ ಉಚಿತ ಆರೋಗ್ಯ ಭಾಗ್ಯ ಯೋಜನೆ ಜಾರಿ ಮಾಡಬೇಕು. ಸಾರಿಗೆ ಸಂಸ್ಥೆಯಲ್ಲಿ ವಿದ್ಯುತ್‌ ಚಾಲಿತ ವಾಹನಗಳಿಗೆ ಖಾಸಗಿ ಚಾಲಕರನ್ನು ಮತ್ತು ನಿರ್ವಾಹಣೆಯನ್ನು ಹಾಗೂ ಸಂಸ್ಥೆಯ ವಾಹನಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಚಾಲನಾ, ತಾಂತ್ರಿಕ ಮತ್ತು ಭದ್ರತಾ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುತ್ತಿರುವ ಪದ್ಧತಿಯನ್ನು ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.

ಇದೇ ಬೇಡಿಕೆಗಳನ್ನು ಇಟ್ಟುಕೊಂಡು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿರುವ ನಾಲ್ಕೂ ಸಾರಿಗೆ ನಿಗಮಗಳ ಸಮಾನ ಮನಷ್ಕರರ ವೇದಿಕೆಯ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

click me!