120 ಹೆಚ್ಚುವರಿ ಸೇರಿಸಿ 504 ಹುದ್ದೆಗಳಿಗೆ ಕೆಎಎಸ್‌ ಪರೀಕ್ಷೆ?

By Kannadaprabha News  |  First Published Jun 26, 2024, 1:04 PM IST

ಕೋವಿಡ್ ಸೇರಿದಂತೆ ಇನ್ನಿತರ ಕಾರಣಗಳಿಂದ ಕಳೆದ ಆರು ವರ್ಷಗಳಿಂದ ಕೆಎಎಸ್ ಹುದ್ದೆಗಳಿಗೆ ನೇಮಕಾತಿ ನಡೆದಿರಲಿಲ್ಲ. ಹೀಗಾಗಿ, ಕೊನೆಯ ಬಾರಿ ಅಂದರೆ 2017-18ರಲ್ಲಿ ಅರ್ಜಿ ಸಲ್ಲಿಸಿದವರಿಗೆ ವಯಸ್ಸಿನ ನಿರ್ಬಂಧ ಇಲ್ಲದೇ ಈ ಬಾರಿ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ ನೀಡಲು ಸರ್ಕಾರ ನಿರ್ಧರಿಸಿದೆ. 
 
ಬೆಂಗಳೂರು(ಜೂ.26):  ಕರ್ನಾಟಕ ಲೋಕಸೇವಾ ಆಯೋಗದಿಂದ 2023-24ನೇ ಸಾಲಿನಲ್ಲಿ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಹೆಚ್ಚುವರಿಯಾಗಿ 120 ಹುದ್ದೆಗಳನ್ನು ಸೇರಿಸಿ 504 ಹುದ್ದೆಗಳಿಗೆ ನೇಮಕಾತಿ ನಡೆಸುವ ಸಾಧ್ಯತೆ ಇದೆ.

ಕೋವಿಡ್ ಸೇರಿದಂತೆ ಇನ್ನಿತರ ಕಾರಣಗಳಿಂದ ಕಳೆದ ಆರು ವರ್ಷಗಳಿಂದ ಕೆಎಎಸ್ ಹುದ್ದೆಗಳಿಗೆ ನೇಮಕಾತಿ ನಡೆದಿರಲಿಲ್ಲ. ಹೀಗಾಗಿ, ಕೊನೆಯ ಬಾರಿ ಅಂದರೆ 2017-18ರಲ್ಲಿ ಅರ್ಜಿ ಸಲ್ಲಿಸಿದವರಿಗೆ ವಯಸ್ಸಿನ ನಿರ್ಬಂಧ ಇಲ್ಲದೇ ಈ ಬಾರಿ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ ನೀಡಲು ಸರ್ಕಾರ ನಿರ್ಧರಿಸಿದೆ. 

Tap to resize

Latest Videos

undefined

ನಾಪತ್ತೆಯಾಗಿದ್ದ ಕೆಪಿಎಸ್‌ಸಿ ಕಡತ ಕೊನೆಗೂ ಕಚೇರಿಯಲ್ಲೇ ಪತ್ತೆ..!

ಹಳಬರಿಗೆ ಅವಕಾಶ ನೀಡುತ್ತಿರುವ ಕಾರಣ ಹುದ್ದೆಗಳ ಸಂಖ್ಯೆಯನ್ನು ಕೂಡ ಹೆಚ್ಚಿಸಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ 120 ಹುದ್ದೆಗಳನ್ನು ಹೆಚ್ಚಿಸಲು ಮುಂದಾಗಿದೆ. 384 ಹುದ್ದೆಗಳಿಗೆ ಈಗಾಗಲೇ 1.95 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಹುದ್ದೆಗಳ ಹೆಚ್ಚಳ ಸಹಿತ ಪರಿಷ್ಕೃತ ವೇಳಾಪಟ್ಟಿಯನ್ನು ಕೆಪಿಎಸ್‌ಸಿ ಮುಂದಿನ ದಿನಗಳಲ್ಲಿ ಪ್ರಕಟಿಸಲಿದೆ ಎಂದು ತಿಳಿದು ಬಂದಿದೆ.

click me!