ಕರ್ನಾಟಕ ಲೋಕಸೇವಾ ಆಯೋಗದ 384 ಹುದ್ದೆಗೆ 1.95 ಲಕ್ಷ ಅರ್ಜಿ ಸಲ್ಲಿಕೆ!

By Suvarna News  |  First Published Apr 17, 2024, 6:21 PM IST

ಕರ್ನಾಟಕ ಲೋಕಸೇವಾ ಆಯೋಗಸ ಗೆಜೆಟೆಡ್ ಪ್ರೊಬೆಷನರ್  ಹುದ್ದೆಗಳ ನೇಮಕಾತಿಗೆ ಆಕಾಂಕ್ಷಿಗಳಿಂದ ಭರ್ಜರಿ ಸ್ಪಂದನೆ  384 ಹುದ್ದೆಗಳಿಗೆ 1.95 ಲಕ್ಷ ಅರ್ಜಿಗಳು ಸಲ್ಲಿಕೆ. 


ಬೆಂಗಳೂರು (ಏ.17): ಕರ್ನಾಟಕ ಲೋಕಸೇವಾ ಆಯೋಗದಿಂದ ನಾಲ್ಕೈದು ವರ್ಷಗಳ ಬಳಿಕ ನಡೆಯುತ್ತಿರುವ ಗೆಜೆಟೆಡ್ ಪ್ರೊಬೆಷನರ್ (ಕೆಎಎಸ್) ಹುದ್ದೆಗಳ ನೇಮಕಾತಿಗೆ ಆಕಾಂಕ್ಷಿಗಳಿಂದ ಭರ್ಜರಿ ಸ್ಪಂದನೆ ವ್ಯಕ್ತವಾಗಿದ್ದು, 384 ಹುದ್ದೆಗಳಿಗೆ 1.95 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ತಿಳಿದುಬಂದಿದೆ. 

ಕರ್ನಾಟಕ ಲೋಕಸೇವಾ ಆಯೋಗವು 384 ಕೆಎಎಸ್‌ - ಗೆಜೆಟೆಡ್‌ ಪ್ರೊಬೇಷನರಿ ಗ್ರೂಪ್‌ ಎ ಮತ್ತು ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಕಳೆದ ಫೆಬ್ರುವರಿ ತಿಂಗಳಲ್ಲಿ ಅಧಿಸೂಚನೆ ಹೊರಡಿಸಿತ್ತು.

Latest Videos

undefined

AAI Recruitment 2024 ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಉದ್ಯೋಗ ನೇಮಕಾತಿ

ಉಳಿಕೆ ಮೂಲ ವೃಂದದಲ್ಲಿ 310 ಹುದ್ದೆಗಳು ಹಾಗೂ ಕಲ್ಯಾಣ ಕರ್ನಾಟಕಕ್ಕೆ 74 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಸುಮಾರು ಒಂದೂವರೆ ತಿಂಗಳು ಕಾಲಾವಕಾಶ ನೀಡಲಾಗಿತ್ತು. ಅರ್ಜಿ ಸಲ್ಲಿಸಲು ಏ.15 ಕಡೆ ದಿನವಾಗಿತ್ತು. ಈ ಅವಧಿಯಲ್ಲಿ 1.95 ಲಕ್ಷ ಅರ್ಜಿ ಸಲ್ಲಿಕೆಯಾಗಿವೆ ಎಂದು ಕೆಪಿಎಸ್‌ಸಿ ಮೂಲಗಳು ತಿಳಿಸಿವೆ.

ಕೆಪಿಎಸ್‌ಸಿಯಿಂದ ಹೈದ್ರಾಬಾದ್‌ ಕರ್ನಾಟಕದ ವೃಂದದ ಗ್ರೂಪ್‌ ಸಿ ಹುದ್ದೆಗಳ ನೇಮಕಾತಿ

ಈ ಲೆಕ್ಕಾಚಾರದಲ್ಲಿ ಒಂದು ಹುದ್ದೆಗೆ ಸರಾಸರಿ 508 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದಂತಾಗುತ್ತದೆ. ಮೇ 5ರಂದು ನಡೆಸಲು ಉದ್ದೇಶಿಸಿದ್ದ ಪೂರ್ವಭಾವಿ ಪರೀಕ್ಷೆಯನ್ನು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಎಸ್‌ಸಿ ಜು.7ಕ್ಕೆ ಮುಂದೂಡಿಕೆ ಮಾಡಲಾಗಿದೆ.

click me!