KEA Recruitment 2022: ಪಶುವೈದ್ಯ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನಿಸಿದ ಕೆಇಎ

By Gowthami KFirst Published Nov 14, 2022, 3:52 PM IST
Highlights

ಕೆಇಎ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳಿಗಾಗಿ ಪಶುವೈದ್ಯ ಸಹಾಯಕ ಹುದ್ದೆಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಒಟ್ಟು 250 ಹುದ್ದೆ ಇದ್ದು, ನವೆಂಬರ್ 26, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ ಹಾಗೂ ನವೆಂಬರ್ 28, 2022ರ ವರೆಗೆ ಶುಲ್ಕ ಪಾವತಿಸಲು ಕೊನೆಯ ದಿನವಾಗಿದೆ.

ಬೆಂಗಳೂರು (ನ.14): ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕರ್ನಾಟಕ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳಿಗಾಗಿ ಪಶುವೈದ್ಯ ಸಹಾಯಕ ಹುದ್ದೆಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಪಶುವೈದ್ಯಕೀಯ ಸಹಾಯಕರ ಹುದ್ದೆಗಳಿಗೆ ಒಟ್ಟು 250 ಹುದ್ದೆಗಳನ್ನು ಭರ್ತಿ ಮಾಡಬೇಕಿದೆ. ಕರ್ನಾಟಕ ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಅರ್ಹ  ಮತ್ತು ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ @www.kea.kar.nic.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. KEA ನೇಮಕಾತಿ ಆನ್‌ಲೈನ್ ನೋಂದಣಿ ಅಕ್ಟೋಬರ್ 5  ರಿಂದ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಇದ್ದ ಕೊನೆಯ ದಿನವನ್ನು ಅಭ್ಯರ್ಥಿಗಳಿಂದ ಬಂಂದ ಮನವಿ ಮೇರೆಗೆ  ವಿಸ್ತರಣೆ ಮಾಡಲಾಗಿದ್ದು, ಸದ್ಯ  ನವೆಂಬರ್ 26, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ ಹಾಗೂ ನವೆಂಬರ್ 28, 2022ರ ವರೆಗೆ ಶುಲ್ಕ ಪಾವತಿಸಲು ಕೊನೆಯ ದಿನವಾಗಿದೆ.

ಅಭ್ಯರ್ಥಿಗಳ ಆಯ್ಕೆಯು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷೆಯನ್ನು ಒಳಗೊಂಡಿರುತ್ತದೆ. ಆಯ್ಕೆ ವಿಧಾನ, ವಯಸ್ಸಿನ ನಿರ್ಬಂಧಗಳು ಮತ್ತು ಮೀಸಲಾತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ, ಅಭ್ಯರ್ಥಿಗಳು KEA ನೇಮಕಾತಿ 2022 ಅನ್ನು ಪರಿಶೀಲಿಸಬೇಕು. ಅರ್ಜಿದಾರರು ನಿಖರವಾದ ಮಾಹಿತಿಯೊಂದಿಗೆ ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕಾಗುತ್ತದೆ. ಹೆಚ್ಚಿನ ಸಂವಹನಗಳನ್ನು ವೆಬ್‌ಸೈಟ್ ಮೂಲಕ ತಿಳಿಸಲಾಗುತ್ತದೆ ಅಥವಾ ಇಮೇಲ್ / SMS ಮೂಲಕ ಕಳುಹಿಸಬಹುದು. ಆನ್‌ಲೈನ್ ಅರ್ಜಿ ನಮೂನೆಯನ್ನು ಸಲ್ಲಿಸುವ ಮೊದಲು, ಅಭ್ಯರ್ಥಿಗಳು ಮಾನ್ಯವಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಬೇಕು ಮತ್ತು ಸ್ಕ್ರೀನಿಂಗ್ ಪ್ರಕ್ರಿಯೆಯು ಮುಗಿಯುವವರೆಗೆ ಅವುಗಳನ್ನು ನಿರ್ವಹಿಸಬೇಕು.

ಶೈಕ್ಷಣಿಕ ವಿದ್ಯಾಭ್ಯಾಸ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕರ್ನಾಟಕ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳಿಗಾಗಿ ಪಶುವೈದ್ಯ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ BVSc, BVSc (AH), BSc ಹೊಂದಿರಬೇಕು.

ವಯೋಮಿತಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕರ್ನಾಟಕ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳಿಗಾಗಿ ಪಶುವೈದ್ಯ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 35 ವರ್ಷದ ಒಳಗಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಶುಲ್ಕ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕರ್ನಾಟಕ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳಿಗಾಗಿ ಪಶುವೈದ್ಯ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು General, 2A, 2B, 3A, 3B ಅಭ್ಯರ್ಥಿಗಳಿಗೆ 750 ರೂ. ಮತ್ತು SC/ST/Cat-I/ ಇತರ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ  ನಿಗದಿಪಡಿಸಲಾಗಿದೆ.

Karnataka CHO Recruitment 2022: ಆರೋಗ್ಯ ಇಲಾಖೆಯ 1,048 ಹುದ್ದೆಗಳ ಭರ್ತಿಗೆ ಅಧಿಸೂಚನೆ

ಆಯ್ಕೆ ಪ್ರಕ್ರಿಯೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕರ್ನಾಟಕ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳಿಗಾಗಿ ಪಶುವೈದ್ಯ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ತಾಣಕ್ಕೆ ಭೇಟಿ ನೀಡಬಹುದು. 

NBT RECRUITMENT 2022: ಬೆಂಗಳೂರಿನಲ್ಲಿರುವ ಬುಕ್ ಟ್ರಸ್ಟ್‌ನಲ್ಲಿ ಜಂಟಿ ನಿರ್ದೇಶಕರ ಹುದ್ದೆ

ವೇತನ ವಿವರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕರ್ನಾಟಕ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳಿಗಾಗಿ ಪಶುವೈದ್ಯ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರವಾಗಿ ಮಾಸಿಕ ರೂ. 21,400/- ರಿಂದ ರೂ. 78,200/- ವೇತನ ದೊರೆಯಲಿದೆ.

click me!