ಮಡಿಕೇರಿ, ಕೋಲಾರ, ಚಾಮರಾಜನಗರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

By Suvarna News  |  First Published Jun 23, 2022, 12:54 PM IST

ಕೊಡಗು ಕಿಮ್ಸ್ ಆಸ್ಪತ್ರೆಯಲ್ಲಿ , ಕೋಲಾರದಲ್ಲಿ ಶೀಘ್ರಲಿಪಿಗಾರರ, ಚಾಮರಾಜನಗರದಲ್ಲಿ ಫಿಸಿಯೋತೆರೆಪಿಸ್ಟ್‌ ಗ್ರೇಡ್‌ 2 ಮತ್ತು ಸ್ಪೋರ್ಟ್ ಮಸ್ಸಸರ್‌ ಹುದ್ದೆಗೆ ಮತ್ತು ಐಟಿಐ ಅತಿಥಿ ಬೋಧಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಹೆಚ್ಚಿನ ಮಾಹಿತಿ ಇಲ್ಲಿದೆ. 


ಮಡಿಕೇರಿ (ಜೂನ್ 22) : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ (Kodagu Institute of Medical Sciences) ಇದರ ಅಧೀನ ಬೋಧಕ ಅಸ್ಪತ್ರೆಗಳಲ್ಲಿ ಖಾಲಿ ಇರುವ 35 ಶುಶ್ರೂಷಕರ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಕರ್ತವ್ಯ ನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.

ನಿಗದಿತ ಅರ್ಜಿ ನಮೂನೆಗಳನ್ನು ಈ ಸಂಸ್ಥೆಯ ಅಂತರ್ಜಾಲದಲ್ಲಿ https://kimskodagu.karnataka.gov.in/english ಪಡೆಯಬಹುದು. ಈ ಹುದ್ದೆಗಳನ್ನು 11 ತಿಂಗಳ ಅವಧಿಗೆ ಅಥವಾ ಖಾಯಂ ಶುಶ್ರೂಷಕರ ನೇಮಕಾತಿ ಆಗುವವರೆಗೆ ಅಥವಾ ಮುಂದಿನ ಸರ್ಕಾರಿ ಆದೇಶದವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ಗುತ್ತಿಗೆ ಆಧಾರದ ಮೇಲೆ ಮೆರಿಟ್‌ ಕಂ ರೋಸ್ರ್ಟ ನಿಯಮ ಪಾಲಿಸಿ ಮೂಲ ದಾಖಲೆಗಳ ಪರಿಶೀಲನೆಗೆ ಆಹ್ವಾನಿಸಿ ಆಯ್ಕೆ ಮಾಡಲಾಗುವುದು. ಅರ್ಜಿಯನ್ನು ಜುಲೈ, 02 ರ ಸಂಜೆ 5 ಗಂಟೆಯ ಒಳಗೆ ಅರ್ಜಿ ಶುಲ್ಕದೊಂದಿಗೆ ನಿರ್ದೇಶಕರು ಹಾಗೂ ಡೀನ್‌ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ಇವರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್‌ ಡಾ. ಕಾರ್ಯಪ್ಪ ಅವರು ತಿಳಿಸಿದ್ದಾರೆ.

Tap to resize

Latest Videos

ಕೆಎಸ್‌ಆರ್‌ಟಿಸಿಯಲ್ಲಿ ಭಾರಿ ವಾಹನ ತರಬೇತಿಗೆ ಅರ್ಜಿ ಆಹ್ವಾನ

ಕೋಲಾರದಲ್ಲಿ ಶೀಘ್ರಲಿಪಿಗಾರರ ಹುದ್ದೆಗೆ ಅರ್ಜಿ ಆಹ್ವಾನ: ಕೋಲಾರ ಜಿಲ್ಲಾ ನ್ಯಾಯಾಲಯ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕ 27-06-2022 ಮತ್ತು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕಡೆಯ ದಿನಾಂಕ 26-07-2022 ರಾತ್ರಿ 11-59 ಗಂಟೆಯ ವರೆಗೆ ಮಾತ್ರ ಹಾಗೂ ಬ್ಯಾಂಕ್‌ ಮುಖಾಂತರ ಶುಲ್ಕ ಪಾವತಿಸಲು 28-07-2022 ಕೊನೆಯ ದಿನಾಂಕವಾಗಿದೆ. ವಿದ್ಯಾರ್ಹತೆ, ವಯೋಮಿತಿ, ಹುದ್ದೆಗಳ ವರ್ಗೀಕರಣ ಹಾಗೂ ಹೆಚ್ಚಿನ ವಿವರಗಳಿಗೆ ಕೋಲಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವೆಬ್‌ಸೈಟ್‌ ವಿಳಾಸದ ಮೂಲಕ ತಿಳಿದುಕೊಳ್ಳಬಹುದು ಎಂದು ಕೋಲಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ತಿಳಿಸಿದ್ದಾರೆ.

PSI Recruitment Scam ತನಿಖೆಯಲ್ಲಿ ಸರ್ಕಾರ ಮೂಗು ತೂರಿಸಲ್ಲ: Minister Araga

ಚಾಮರಾಜನಗರದಲ್ಲಿ ಫಿಸಿಯೋತೆರೆಪಿಸ್ಟ್‌ ಗ್ರೇಡ್‌ 2 ಮತ್ತು ಸ್ಪೋರ್ಟ್ ಮಸ್ಸಸರ್‌ ಹುದ್ದೆಗೆ ಅರ್ಜಿ ಆಹ್ವಾನ: 
ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿ ಇರುವ ಬೆಂಗಳೂರಿನ ವಿದ್ಯಾನಗರದಲ್ಲಿರುವ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವಕೇಂದ್ರಕ್ಕೆ ಖೇಲೋ ಇಂಡಿಯ ನಿಯಮಗಳನುಸಾರ ಗುತ್ತಿಗೆ ಆಧಾರದ ಮೇಲೆ ಫಿಸಿಯೋತೆರೆಪಿಸ್ಟ್‌ (ಭೌತಚಿಕಿತ್ಸಕರು) ಗ್ರೇಡ್‌-2 ಮತ್ತು ಸ್ಪೋಟ್ಸ್‌ರ್‍ ಮಸ್ಸಸರ್‌ (ಮಸಾಜ್‌ ಮಾಡುವರು) ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಭೌತಚಿಕಿತ್ಸಗಾರರು ಗ್ರೇಡ್‌-2 ಹುದ್ದೆಗೆ ಅರ್ಜಿ ಸಲ್ಲಿಸುವವರು ಯಾವುದೇ ಮಾನ್ಯತೆ ಪಡೆದ ಭಾರತೀಯ ಅಥವಾ ವಿದೇಶಿ ವಿಶ್ವವಿದ್ಯಾಲಯದಿಂದ ಭೌತಚಿಕತ್ಸೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಭೌತಚಿಕಿತ್ಸೆಯಲ್ಲಿ 3 ವರ್ಷಗಳ ಸೇವಾನುಭವ ಹೊಂದಿರಬೇಕು. ಸ್ಪೋಟ್ಸ್‌ರ್‍ ಮಸ್ಸಸರ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ಮಂಡಳಿಯಿಂದ ಎಸ್‌.ಎಸ್‌.ಎಲ್‌.ಸಿ ಅಥವಾ ಪಿಯುಸಿ ಉತ್ತೀರ್ಣರಾಗಿರಬೇಕು. ಯಾವುದಾದರು ಅಂಗೀಕೃತ ಸಂಸ್ಥೆಯಿಂದ ಮಸ್ಸಸರ್‌, ಮಸಾಜ್‌ ಥೆರಪಿ, ಸ್ಪೋಟ್ಸ್‌ರ್‍ ಮಸ್ಸಿಯರ್‌ ಪ್ರಮಾಣ ಪತ್ರವನ್ನು ಪಡೆದಿರಬೇಕು. ಮೆಸ್ಸಸರ್‌ನಲ್ಲಿ 2 ವರ್ಷಗಳ ಸೇವಾನುಭವ ಹೊಂದಿರಬೇಕು.

ಜಿಲ್ಲೆಯ ಆಸಕ್ತಿ ಹೊಂದಿದ ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯನ್ನು ಕಚೇರಿಯಲ್ಲಿ ಪಡೆದು ವಿವರಗಳನ್ನು ಭರ್ತಿಮಾಡಿ ಸಂಬಂಧಿಸಿದ ದಾಖಲೆಗಳನ್ನು ನೋಟರಿ ಮಾಡಿಸಿ ಜೂನ್‌ 27 ಸಂಜೆ 5 ರೊಳಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಮೊದಲನೇ ಮಹಡಿಯ 118 ನೇ ಕೊಠಡಿ ಸಂಖ್ಯೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 9844160841 ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

IBPS Recruitment 2022; ಬರೋಬ್ಬರಿ 8106 ಹುದ್ದೆಗಳಿಗೆ ನೇಮಕಾತಿ

ಐಟಿಐ ಅತಿಥಿ ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ: ಗುಂಡ್ಲುಪೇಟೆಯ ಊಟಿ ರಸ್ತೆಯಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪಿ.ಪಿ.ಪಿ ಯೋಜನೆಯಡಿ ಎಲೆಕ್ಟ್ರೀಷಿಯನ್‌ ವೃತ್ತಿಯನ್ನು ಪ್ರಾರಂಭಿಸಲಾಗಿದ್ದು, 2022ನೇ ಸಾಲಿಗೆ ಎಲೆಕ್ಟ್ರೀಷಿಯನ್‌ ವೃತ್ತಿಯಲ್ಲಿ ತರಬೇತಿ ನೀಡಲು ಅತಿಥಿ ಬೋಧಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬಿ.ಇ, ಡಿಪೋ›ಮ, ಐ.ಟಿ.ಐ ಮತ್ತು ಅಪ್‌ರೆಂಟಿಶಿಪ್‌ (ಎಲೆಕ್ಟ್ರೀಕಲ್‌ ಬ್ರಾಂಚ್‌) ವಿದ್ಯಾರ್ಹತೆ ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಪ್ರಾಚಾರ್ಯರು ಮೊ.ಸಂ 9480190608, 9538778562 ಸಂಪರ್ಕಿಸುವಂತೆ ಸರ್ಕಾರಿ ಕೈಗಾರಿಕಾ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

click me!