Kodagu VA Recruitment 2022: ಗ್ರಾಮಲೆಕ್ಕಿಗರ ಹುದ್ದೆಗೆ ನೇಮಕಾತಿ

Published : Apr 21, 2022, 08:45 AM IST
Kodagu VA Recruitment 2022: ಗ್ರಾಮಲೆಕ್ಕಿಗರ ಹುದ್ದೆಗೆ ನೇಮಕಾತಿ

ಸಾರಾಂಶ

ಕೊಡಗು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ  ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 35 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 19 ಕೊನೆಯ ದಿನವಾಗಿದೆ. 

ಕೊಡಗು(ಏ.21): ಕೊಡಗು ಜಿಲ್ಲಾ ಕಂದಾಯ ಘಟಕದಲ್ಲಿ (Revenue Department Kodagu) ಖಾಲಿ ಇರುವ ಗ್ರಾಮ ಲೆಕ್ಕಿಗರ (Village Accountant ) ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 35 ಹುದ್ದೆಗಳು ಖಾಲಿ ಇದ್ದು, ನೇರ ನೇಮಕಾತಿ ಮೂಲಕ ಹುದ್ದೆಗಳನ್ನು ಭರ್ತಿ  ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 19 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಅಧಿಕೃತ ವೆಬ್‌ತಾಣ  https://kodagu-va.kar.nic.in/ ಗೆ ಭೇಟಿ ನೀಡಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಕೊಡಗು (Kodagu) ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಗುಣವಾಗಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಅಥವಾ ಸಿಬಿಎಸ್‌ಇ / ಐಸಿಎಸ್‌ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. 

AIATSL Recruitment 2022 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳ ಪಟ್ಟಿ ಇಂತಿದೆ
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 19, 2022
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ ಮೇ 19, 2022
ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ದಿನಾಂಕ ಮೇ 23, 2022
ತಾತ್ಕಾಲಿಕ ಆಯ್ಕೆಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕೊನೆ ದಿನಾಂಕ ಮೇ 31 , 2022
ಅಂತಿಮ ಆಯ್ಕೆಪಟ್ಟಿ ಬಿಡುಗಡೆ ದಿನಾಂಕ ಜೂನ್ 23, 2022

ವಯೋಮಿತಿ: ಕೊಡಗು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಎಸ್‌ಸಿ / ಎಸ್‌ಟಿ / ಪ್ರವರ್ಗ-1  ಅಭ್ಯರ್ಥಿಗಳು 40 ವರ್ಷ ಮೀರಿರಬಾರದು. ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 38 ವರ್ಷ ಮೀರಿರಬಾರದು ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳು 35 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ ವಿವರ: ಕೊಡಗು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳು ₹200, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳು ₹400 ಅರ್ಜಿ ಶುಲ್ಕ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ: ಕೊಡಗು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು  ಪಿಯುಸಿ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

SBI Recruitment 2022: ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ

ವೇತನ ವಿವರ: ಕೊಡಗು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾಸಿಕ ₹21400 ರಿಂದ ₹42000 ವೇತನ ದೊರೆಯಲಿದೆ.

ಅಭ್ಯರ್ಥಿಗಳಿಗಿರಬೇಕಾದ ಸಾಮಾನ್ಯ ಅರ್ಹತೆಗಳು

  • ಭಾರತೀಯ ನಾಗರಿಕನಾಗಿರಬೇಕು
  • ಶೈಕ್ಷಣಿಕ ವಿದ್ಯಾಭ್ಯಾಸವನ್ನು ಕರ್ನಾಟಕದಲ್ಲಿ ಪಡೆದಿರಬೇಕು.
  • ಮಾನಸಿಕವಾಗಿ, ದೈಹಿಕವಾಗಿ ಆರೋಗ್ಯವಂತರಾಗಿರಬೇಕು.
  • ಯಾವುದೇ ಸರ್ಕಾರದ ಸೇವೆಯಿಂದ ವಜಾಗೊಂಡಿರಬಾರದು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗಿನ ವಿಳಾಸ ಅಥವಾ ದೂರವಾಣಿ ಮೂಲಕ ಸಂಪರ್ಕಿಸಲು ಕೋರಲಾಗಿದೆ.
ಜಿಲ್ಲಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳ ಕಛೇರಿ
ಕೊಡಗು ಜಿಲ್ಲೆ, ಮಡಿಕೇರಿ -571201
ದೂರವಾಣಿ : 08272 - 225811
ಇ-ಮೇಲ್ : deo.kodagu@gmail.com

PREV
Read more Articles on
click me!

Recommended Stories

ಮಂಗಳೂರು: 'ಡಿಕೆಶಿ ಮುಂದಿನ ಸಿಎಂ’ ಘೋಷಣೆ ಕೂಗಿದ ಐವನ್, ಮಿಥುನ್‌ಗೆ ನೋಟಿಸ್?
ಸೋಶಿಯಲ್ ಮೀಡಿಯಾದಿಂದ ದೂರವಿದ್ದು 10 ಸರ್ಕಾರಿ ನೌಕರಿ ಪಡೆದು ಸ್ಫೂರ್ತಿಯಾದ ಸಾಧಕ!