ವಿವಿಧ ಹುದ್ದೆಗಳ ಪೂರ್ವಭಾವಿ ಹಾಗೂ ಇಲಾಖಾ ಪರೀಕ್ಷೆಗಳ ದಿನಾಂಕಗಳನ್ನು ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ಘೋಷಣೆ ಮಾಡಿದೆ.
ಬೆಂಗಳೂರು, (ಆ.12): ಕರ್ನಾಟಕ ಲೋಕ ಸೇವಾ ಆಯೋಗವು ವಿವಿಧ ಇಲಾಖೆಯ ಹುದ್ದೆಗಳ ಪೂರ್ವಭಾವಿ ಹಾಗೂ ಇಲಾಖಾ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಿದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ.
undefined
ಇದೇ ತಿಂಗಳ 17ರಂದು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಮೂಹ 'ಎ' ವೃಂದದ ಸಹಾಯಕ ನಿಯಂತ್ರಕರ 54 ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ ನಡೆಯಲಿದೆ.
ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು ಕೇಂದ್ರ ಹಾಗೂ ಆಯೋಗದ ವಿಭಾಗೀಯ ಕೇಂದ್ರಗಳಾದ ಮೈಸೂರು, ಬೆಳಗಾವಿ, ಕಲಬುರಗಿ, ಶಿವಮೊಗ್ಗದಲ್ಲಿ ಪರೀಕ್ಷೆ ನಡೆಸಲಾಗುತ್ತದೆ.
ಇನ್ನು 2020ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳು ಇದೇ ತಿಂಗಳ 18ರಿಂದ ಸೆಪ್ಟಂಬರ್ 16ರವರೆಗೆ ನಡೆಯಲಿವೆ.
ಇದೇ 24ರಂದು ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ 'ಎ' ಮತ್ತು 'ಬಿ' ವೃಂದದ ಒಟ್ಟು 106 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಬೆಂಗಳೂರು ಕೇಂದ್ರ, ಬೆಳಗಾವಿ, ಬಳ್ಳಾರಿ, ದಾವಣಗೆರೆ, ಧಾರವಾಡ/ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ರಾಯಚೂರು ಮತ್ತು ಶಿವಮೊಗ್ಗದಲ್ಲಿ ನಡೆಯುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.