ಕೃಷಿ ಅಧಿಕಾರಿಗಳ ನೇಮಕಾತಿ ಪರೀಕ್ಷೆ ರದ್ದುಗೊಳಿಸಿದ ಕೆಪಿಎಸ್‌ಸಿ! ಎಸ್ಸಿ ಒಳಮೀಸಲಾತಿಯಿಂದಾಗಿ ಹೊಸ ಅಧಿಸೂಚನೆ!

Published : Sep 05, 2025, 07:56 PM IST
Karnataka Agriculture Officer Recruitment Cancel

ಸಾರಾಂಶ

ಕೆಪಿಎಸ್‌ಸಿ ಕೃಷಿ ಇಲಾಖೆಯ ಅಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಗಳನ್ನು ರದ್ದುಗೊಳಿಸಿದೆ. ಪರಿಶಿಷ್ಟ ಜಾತಿ ಒಳಮೀಸಲಾತಿ ಅಳವಡಿಕೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಹೊಸ ಅಧಿಸೂಚನೆಗಾಗಿ ಅಭ್ಯರ್ಥಿಗಳು ಕಾಯಬೇಕಿದೆ.

ಬೆಂಗಳೂರು (ಸೆ.05): ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಕೃಷಿ ಇಲಾಖೆಯಲ್ಲಿನ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಸೆ.6-7 ಹಾಗೂ ಅ.4ರಂದು ನಿಗದಿಪಡಿಸಿದ್ದ ಎಲ್ಲ ಪರೀಕ್ಷೆಗಳನ್ನು ರದ್ದುಗೊಳಿಸಿದೆ. ರಾಜ್ಯ ಸರ್ಕಾರವು ಇತ್ತೀಚೆಗೆ ಹೊರಡಿಸಿದ ಸುತ್ತೋಲೆಯ ಅನ್ವಯ, ಪರಿಶಿಷ್ಟಜಾತಿ ಒಳಮೀಸಲಾತಿಯನ್ನು ಅಳವಡಿಸಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಲೋಕಸೇವಾ ಆಯೋಗದ ಅಧಿಸೂಚನೆ ಸಂಖ್ಯೆ ಪಿಎಸ್‌ಸಿ 1 ಆರ್‌ಟಿಬಿ-4/2024 ದಿನಾಂಕ 20-09-2024 ಮತ್ತು ತಿದ್ದುಪಡಿ ಅಧಿಸೂಚನೆ ದಿನಾಂಕ 31-12-2024ರನ್ವಯ ಹೈದರಾಬಾದ್-ಕರ್ನಾಟಕ (ಹೈ.ಕ) ವೃಂದದಡಿ ಕೃಷಿ ಇಲಾಖೆಯಲ್ಲಿನ 42 ಕೃಷಿ ಅಧಿಕಾರಿ ಹಾಗೂ 231 ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿತ್ತು. ಈ ಹುದ್ದೆಗಳಿಗೆ ಸೆಪ್ಟೆಂಬರ್ 6, 2025ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಸೆಪ್ಟೆಂಬರ್ 7 ಹಾಗೂ ಅಕ್ಟೋಬರ್ 4, 2025ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿಗದಿಪಡಿಸಲಾಗಿತ್ತು.

ಆದರೆ, ಸೆಪ್ಟೆಂಬರ್ 4, 2025ರಂದು ಹೊರಡಿಸಿದ ಸುತ್ತೋಲೆ ಸಂಖ್ಯೆ: ಸಿಆಸುಇ 388 ಸೆನೆನಿ 2024 ಭಾ-3 ರನ್ವಯ, ಅಕ್ಟೋಬರ್ 28, 2024ರ ನಂತರ ಯಾವುದೇ ತಿದ್ದುಪಡಿ ಅಧಿಸೂಚನೆಗಳನ್ನು ಹೊರಡಿಸಿರುವ ಎಲ್ಲಾ ನೇಮಕಾತಿ ಅಧಿಸೂಚನೆಗಳನ್ನು ರದ್ದುಪಡಿಸಿ, ಪರಿಶಿಷ್ಟಜಾತಿ ಒಳಮೀಸಲಾತಿಯನ್ನು ಅಳವಡಿಸಿಕೊಂಡು ಹೊಸದಾಗಿ ಅಧಿಸೂಚನೆಗಳನ್ನು ಹೊರಡಿಸಲು ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಮೇಲೆ ತಿಳಿಸಿದ ಎಲ್ಲ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಎಂದು ಆಯೋಗ ತಿಳಿಸಿದೆ.

ಅರ್ಜಿದಾರರು ಮುಂದಿನ ದಿನಗಳಲ್ಲಿ ಹೊಸ ನೇಮಕಾತಿ ಅಧಿಸೂಚನೆಗಾಗಿ ಕಾಯಬೇಕಾಗಿದೆ. ಈ ನಿರ್ಧಾರದಿಂದ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಸ್ವಲ್ಪ ಮಟ್ಟಿಗೆ ನಿರಾಸೆಯಾಗಿದೆ.

PREV
Read more Articles on
click me!

Recommended Stories

KSRPಯಲ್ಲಿ 25 ಅಂಕ ಪಡೆದಿದ್ದ ಅಭ್ಯರ್ಥಿ, VAO ಪರೀಕ್ಷೆಯಲ್ಲಿ 151 ಅಂಕ ಗಳಿಸಿದ್ದೇಗೆ? ತನಿಖೆಗೆ ಆದೇಶಿಸಿದ KEA!
ಕರ್ನಾಟಕ 15000 ಶಿಕ್ಷಕರ ನೇಮಕಾತಿ 2026: ಅರ್ಜಿ ದಿನಾಂಕ ವಿಸ್ತರಣೆ, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ