384 ಕೆಎಎಸ್ ಹುದ್ದೆಗಳಿಗೆ ಕೆಪಿಎಸ್‌ಸಿ ಅರ್ಜಿ ಆಹ್ವಾನ, ನೇರ ನೇಮಕಾತಿಗೆ ಮಾರ್ಚ್‌ 4ರಿಂದ ಅರ್ಜಿ ಸಲ್ಲಿಕೆ

By Suvarna NewsFirst Published Feb 27, 2024, 4:35 PM IST
Highlights

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 384 ಗೆಜೆಟೆಡ್‌ ಪ್ರೊಬೆಷನರ್‌ ಹುದ್ದೆಗಳಿಗೆ ನೇರ ನೇಮಕಾತಿ. ಮಾರ್ಚ್‌ 4ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಅವಕಾಶ. 

ಬೆಂಗಳೂರು (ಫೆ.27): ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಅಧಿಸೂಚನೆ ಹೊರಡಿಸಿದೆ. ಮಾ.4ರಿಂದ ಕೆಪಿಎಸ್‌ಸಿ ವೆಬ್‌ಸೈಟಿಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಸಹಾಯಕ ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು, ಖಜಾನೆ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರು, ತಹಸೀಲ್ದಾರ್, ಡಿವೈಎಸ್ಪಿ ಸೇರಿದಂತೆ 159 ‘ಗ್ರೂಪ್ ಎ’ ಹುದ್ದೆಗಳು ಮತ್ತು 225 ‘ಗ್ರೂಪ್ ಬಿ’ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಇದರಲ್ಲಿ ಕಲ್ಯಾಣ ಕರ್ನಾಟಕ ವೃಂದದ 77 ಹುದ್ದೆಗಳು ಸೇರಿವೆ.

ಬಿಟ್ಟಿ ಭಾಗ್ಯಗಳಿಗೆ ಸರಕಾರದ ಬಳಿ ಹಣವಿದೆ, ನರೇಗಾ ಕಾರ್ಮಿಕರ ವೇತನ ನೀಡಲು ನಯಾಪೈಸೆ ಇಲ್ಲ!

ಮಾರ್ಚ್ 4ರಿಂದ ಏಪ್ರಿಲ್ 4ರ ವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಮೇ 5ರಂದು ಪೂರ್ವಭಾವಿ ಪರೀಕ್ಷೆ ನಡೆಸಲು ತಾತ್ಕಾಲಿಕ ದಿನಾಂಕ ನಿಗದಿಪಡಿಸಲಾಗಿದೆ. ಭಾರತದಲ್ಲಿ ಕಾನೂನು ರೀತಿಯಲ್ಲಿ ಸ್ಥಾಪಿತವಾದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಕರ್ನಾಟಕ ಸರ್ಕಾರದಿಂದ ಮೊದಲ ಬೃಹತ್‌ ಉದ್ಯೋಗ ಮೇಳ: ಯುವಕರಿಗೆ 1 ಲಕ್ಷ ನೌಕರಿ ನೀಡುವ ಗುರಿ..!

ವಯೋಮಿತಿ 3 ವರ್ಷ ಸಡಿಲಿಕೆ: ಕೋವಿಡ್ ಸೇರಿದಂತೆ ವಿವಿಧ ಕಾರಣಗಳಿಂದ ಕಳೆದ ಐದಾರು ವರ್ಷಗಳಿಂದ ಕೆಎಎಸ್‌ ನೇಮಕಾತಿ ನಡೆಯದ ಕಾರಣ ಅಭ್ಯರ್ಥಿಗಳ ವಯೋಮಿತಿಯನ್ನು 3 ವರ್ಷ ಸಡಿಲಿಸಲಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 38 ವರ್ಷ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 41 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 43 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಒಳಾಡಳಿತ ಇಲಾಖೆಯ ಡಿವೈಎಸ್ಪಿ, ಅಬಕಾರಿ ಉಪಾಧೀಕ್ಷಕರು ಮತ್ತು ಕರ್ನಾಟಕ ಕಾರಾಗೃಹ ಸೇವೆಯ ಅಧಿಕಾರಿಗಳ ಹುದ್ದೆಗಳಿಗೆ ದೈಹಿಕ ಪರೀಕ್ಷೆ ನಿಗದಿಪಡಿಸಲಾಗಿದ್ದು, ಅದರಲ್ಲಿ ಅರ್ಹತೆ ಹೊಂದಿದವರನ್ನು ಮಾತ್ರ ಹುದ್ದೆಗಳಿಗೆ ಪರಿಗಣಿಸಲಾಗಿದೆ.

click me!