ಕರ್ನಾಟಕ ಲೋಕಸೇವಾ ಆಯೋಗದಿಂದ 2019-20ನೇ ಸಾಲಿನಲ್ಲಿ ವಿವಿಧ ವೃದ್ಧದ ಹುದ್ದೆಗಳಿಗೆ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಬೆಂಗಳೂರು, (ಏ.24): ದೇಶದಲ್ಲಿ ಕರೋನಾ ಮಹಾಮಾರಿ ವಕ್ಕರಿಸಿಕೊಂಡಿರುವ ಪರಿಣಾಮ ಇದರ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಯಲ್ಲಿದೆ.
ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಈಗಾಗಲೇ ಪಿಯುಸಿ, ಎಸ್.ಎಸ್.ಎಲ್.ಸಿ. ಸೇರಿದಂತೆ ನಿಗದಿಯಾಗಿದ್ದ ಹಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ.
undefined
ಇದೀಗ ಕರ್ನಾಟಕ ಲೋಕ ಸೇವಾ ಆಯೋಗ (KPSC) ಮೇ, ಜೂನ್ ತಿಂಗಳಿನಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಿದೆ.
1279 ದ್ವಿತೀಯ ದರ್ಜೆ ಹುದ್ದೆ ಭರ್ತಿಗೆ KPSC ಅಧಿಸೂಚನೆ ಪ್ರಕಟ
ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಜಿ.ಸತ್ಯವತಿ, 2020ರ ಮೇ ಮತ್ತು ಜೂನ್ ತಿಂಗಳಿನಲ್ಲಿ ಪರೀಕ್ಷೆಗಳನ್ನು ನಡೆಸಲು ನಿಗಧಿಪಡಿಸಲಾಗಿತ್ತು. ಆದ್ರೆ, ಪ್ರಸ್ತುತ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸದರಿ ಅಧಿಸೂಚನೆಗಳಲ್ಲಿ ನಿಗದಿಪಡಿಸಲಾದ ಪರೀಕ್ಷಾ ದಿನಾಂಕಗಳನ್ನು ಮುಂದೂಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಲಾಕ್ ಡೌನ್ ಮುಗಿದ ನಂತರ ಪರೀಕ್ಷಾ ದಿನಾಂಕಗಳನ್ನು ನಿಗದಿಪಡಿಸಲು ಆಯೋಗವು ಕ್ರಮಕೈಗೊಂಡು, ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗುವುದೆಂದು ತಿಳಿಸಿದೆ.
ಮುಂದೂಡಲಾದ ಪರೀಕ್ಷೆಗಳು
* ರಾಜ್ಯದ ವಿವಿಧ ಇಲಾಖೆಗಳಲ್ಲಿನ ಸಹಾಯಕರು, ಪ್ರಥಮ ದರ್ಜೆ ಸಹಾಯಕರು ಹುದ್ದೆಗಳು - ಅಧಿಸೂಚನೆ ದಿನಾಂಕ -31-01-2020
* ಗೆಜೆಟೆಡ್ ಪ್ರೊಬೇಷನರನ್ಸ್ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು 106 ಹುದ್ದೆಗಳು - ಅಧಿಸೂಚನೆ - ದಿನಾಂಕ 31-01-2020
* ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯಲ್ಲಿನ ಸಮೂಹ ಎ ವೃಂದದ ಸಹಾಯಕ ನಿಯಂತ್ರಕರು-54 ಹುದ್ದೆಗಳು. ಅಧಿಸೂಚನೆ ದಿನಾಂಕ - 31-01-2020
* ರಾಜ್ಯದ ವಿವಿಧ ಇಲಾಖೆಗಳಲ್ಲಿ ಕಿರಿಯ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳು. ಅಧಿಸೂಚನೆ- ದಿನಾಂಕ 29-02-2020