KPSC RDWSD Recruitment 2022 ಒಟ್ಟು 136  ಕಿರಿಯ ಇಂಜಿನಿಯರ್ ಹುದ್ದೆಗೆ ನೇಮಕಾತಿ

Published : Apr 13, 2022, 09:38 AM IST
KPSC  RDWSD Recruitment 2022 ಒಟ್ಟು 136  ಕಿರಿಯ ಇಂಜಿನಿಯರ್ ಹುದ್ದೆಗೆ ನೇಮಕಾತಿ

ಸಾರಾಂಶ

ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಬಿ ವೃಂದದ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಏಪ್ರಿಲ್ 27  ಅರ್ಜಿ ಸಲ್ಲಿಕೆಗೆ  ಕೊನೆಯ ದಿನವಾಗಿದೆ. 

ಬೆಂಗಳೂರು(ಏ.13): ಕರ್ನಾಟಕ ಲೋಕಸೇವಾ ಆಯೋಗವು (Karnataka Public Service Commission - KPSC) ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ (Rural Drinking Water and Sanitation Department - RDWSD) ಖಾಲಿ ಇರುವ ಗ್ರೂಪ್ ಬಿ ವೃಂದದ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಇಲಾಖೆಯಲ್ಲಿ ಒಟ್ಟು 136  ಕಿರಿಯ ಅಭಿಯಂತರರು  (junior Engineer) ಹುದ್ದೆಗಳು ಖಾಲಿ ಇದ್ದು,  ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ (online) ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ  ಏಪ್ರಿಲ್ 27 ಆಗಿದೆ. ಆಸಕ್ತರು ಇಲಾಖೆಯ ಅಧಿಕೃತ ವೆಬ್‌ತಾಣ http://kpsc.kar.nic.in/ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.

ಶೈಕ್ಷಣಿಕ ಅರ್ಹತೆ: 
ಕರ್ನಾಟಕ ರಾಜ್ಯ ಸರ್ಕಾರದಿಂದ ಗುರುತಿಸಲ್ಪಟ್ಟ ಸಂಸ್ಥೆಯಿಂದ ಪಡೆದ Diploma In Civil/ Environment/ PHE ವಿದ್ಯಾರ್ಹತೆ ಹೊಂದಿರಬೇಕು ಅಥವಾ ಕರ್ನಾಟಕ ರಾಜ್ಯ ಸರ್ಕಾರದಿಂದ ಗುರುತಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಪಡೆದ BE in Civil/ Environment ಪದವಿ ಪಡೆದಿರಬೇಕು.

EXIM BANK RECRUITMENT 2022 ವಿವಿಧ ವಿಭಾಗದ 30 ಹುದ್ದೆಗಳಿಗೆ ನೇಮಕಾತಿ

ವೇತನ: 
ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಬಿ ವೃಂದದ  ಕಿರಿಯ ಇಂಜಿನಿಯರ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾಸಿಕ ರೂ. 33,450 ರಿಂದ ರೂ. 62,600 ಶ್ರೇಣಿ ಪಡೆಯಲಿದ್ದಾರೆ.

ವಯೋಮಿತಿ: 
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ

ಆಯ್ಕೆ ವಿಧಾನ: 
ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಸಿ ನಂತರ ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

MGNREGA ನರೇಗಾ ಉದ್ಯೋಗದಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ತಾರತಮ್ಯ

ಅರ್ಜಿ ಸಲ್ಲಿಕೆ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು – ರೂ. 600
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50
ಎಸ್ಸಿ, ಎಸ್ಟಿ, ಪ್ರ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

ಶುಲ್ಕ ಪಾವತಿ ವಿಧಾನ: 
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 27, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಏಪ್ರಿಲ್ 28, 2021

PREV
Read more Articles on
click me!

Recommended Stories

ಮಂಗಳೂರು: 'ಡಿಕೆಶಿ ಮುಂದಿನ ಸಿಎಂ’ ಘೋಷಣೆ ಕೂಗಿದ ಐವನ್, ಮಿಥುನ್‌ಗೆ ನೋಟಿಸ್?
ಸೋಶಿಯಲ್ ಮೀಡಿಯಾದಿಂದ ದೂರವಿದ್ದು 10 ಸರ್ಕಾರಿ ನೌಕರಿ ಪಡೆದು ಸ್ಫೂರ್ತಿಯಾದ ಸಾಧಕ!