1279 ದ್ವಿತೀಯ ದರ್ಜೆ ಹುದ್ದೆ ಭರ್ತಿಗೆ KPSC ಅಧಿಸೂಚನೆ ಪ್ರಕಟ

By Suvarna News  |  First Published Feb 29, 2020, 3:14 PM IST

ಕರ್ನಾಟಕ ಲೋಕಸೇವಾ ಅಯೋಗವು ಕಾಲಕಾಲಕ್ಕೆ ತಿದ್ದುಪಡಿಯಾದ ಕರ್ನಾಟಕ ನಾಗರೀಕ ಸೇವೆಗಳು 1978ರನ್ವಯ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಕಿರಿಯ ಸಹಾಯಕ/ದ್ವತೀಯ ದರ್ಜೆ ಸಹಾಯಕ ಹುದ್ದೆಗಳನ್ನ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನ ಆಹ್ವಾನಿಸಿದೆ. ಈ ಬಗ್ಗೆ ಇನ್ನಷ್ಟು ವಿವರ ಈ ಕೆಳಗಿನಂತಿದೆ.
 


ಬೆಂಗಳೂರು, (ಫೆ.29): 2019-20ನೇ ಸಾಲಿನ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಉಳಿಕೆ ಮೂಲ ವೃಂದದ ಮತ್ತು ಹೈದೆರಾಬಾದ್ ಕರ್ನಾಟಕ ವೃಂದದ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗವು ಫೆಬ್ರವರಿ 29 ರಂದು ಅಧಿಸೂಚನೆ ಹೊರಡಿಸಿದೆ. 

199 ಹೈದ್ರಾಬಾದ್ ಕರ್ನಾಟಕ ವೃಂದದ ಹುದ್ದೆಗಳು ಹಾಗೂ 1080 ಉಳಿಕೆ ಮೂಲ ವೃಂದ (Non-HK) ಒಟ್ಟು 1279 ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಿದೆ.

Latest Videos

4000 ಪೇದೆ, 592 PSI ಹುದ್ದೆ ನೇಮಕಾತಿಗೆ ಸರ್ಕಾರ ಗ್ರೀನ್‌ ಸಿಗ್ನಲ್

ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 635 ರೂ., ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 335 ರೂ. ಹಾಗೂ SC / ST / PWD / ಪ್ರವರ್ಗ-1 ಅಭ್ಯರ್ಥಿಗಳಿಗೆ 35ರೂ. ನಿಗದಿಪಡಿಲಸಾಗಿದೆ.

ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಾಸ್‌ ಮಾಡಿರಬೇಕು. ಅರ್ಜಿ ಸಲ್ಲಿಕೆ ವೇಳೆ ಈ ಬಗ್ಗೆ ಅಂಕಗಳು ಮತ್ತು ಅಂಕಪಟ್ಟಿಯನ್ನು ಅಪ್‌ಲೋಡ್‌ ಮಾಡಬೇಕು. ಕನ್ನಡ ಮಾಧ್ಯಮ ಅಭ್ಯರ್ಥಿ, ಗ್ರಾಮೀಣ ಮಾಧ್ಯಮ ಅಭ್ಯರ್ಥಿ ಮೀಸಲಾತಿಗಳು ಇದ್ದು, ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕು.

ವೇತನ ಶ್ರೇಣಿ: ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ 21400-42000 ರೂ. (ತಿಂಗಳಿಗೆ) ಅಷ್ಟೇ ಅಲ್ಲದೇ ಸರ್ಕಾರದ ಆದೇಶ ಸಂಖ್ಯೆ ಎಫ್‌ ಡಿ (ಎಸ್‌ ಪಿ ಎಲ್‌) 04 ಪಿಇಟಿ 2005, ದಿನಾಂಕ 31-03-2006 ಮತ್ತು ಅದರ ತಿದ್ದುಪಡಿಗಳ ಅನ್ವಯ ಪಿಂಚಣಿ ಸೌಲಭ್ಯ ಇದೆ.

ಪ್ರಮುಖ ದಿನಾಂಕಗಳು
* ಅರ್ಜಿ ಸಲ್ಲಿಕೆಗೆ ಪ್ರಾರಂಭಿಕ ದಿನಾಂಕ : 09-03-2020
* ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 09-04-2020
*ಶುಲ್ಕ ಪಾವತಿಸಲು ಕೊನೆ ದಿನಾಂಕ : 13-04-2020
*ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ದಿನಾಂಕ : 06-06-2020
*ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ : 07-06-2020

ಈ  ಬಗ್ಗೆ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
 

ಫೆಬ್ರವರಿ 29ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

click me!