ಕೆಪಿಎಸ್‌ಸಿಯಲ್ಲಿ ಉದ್ಯೋಗಾವಕಾಶ: ಅರ್ಜಿ ಹಾಕಿ

By Suvarna News  |  First Published Jun 26, 2020, 2:18 PM IST

ಕರ್ನಾಟಕ ಲೋಕಸೇವಾ ಆಯೋಗ ಉಳಿಕೆ ಮೂಲ ವೃಂದ ಮತ್ತು ಹೈದರಾಬಾದ್ -ಕರ್ನಾಟಕ ವೃಂದದಲ್ಲಿನ ಗ್ರೂಪ್ "ಎ" ತಾಂತ್ರಿಕ ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.


ಬೆಂಗಳೂರು, (ಜೂನ್.26): ಕರ್ನಾಟಕ ಲೋಕಸೇವಾ ಆಯೋಗವು ಒಟ್ಟು 21 ಸಹಾಯಕ ನಿರ್ದೇಶಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.

 ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 10,2020 ರಿಂದ ಆಗಸ್ಟ್ 10,2020ರೊಳಗೆ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.

Latest Videos

undefined

ವಿದ್ಯಾರ್ಹತೆ:  ಸಿವಿಲ್ ಇಂಜಿನಿಯರಿಂಗ್ ಅಥವಾ ಆರ್ಕಿಟೆಕ್ಚರ್ ನಲ್ಲಿ ಪದವಿ ಪೂರ್ಣಗೊಳಿಸರಬೇಕು.

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಮತ್ತು ಗರಿಷ್ಟ 35 ವರ್ಷದೊಳಗಿನವರಾಗಿರಬೇಕು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ ಮತ್ತು ಪ.ಜಾ, ಪ.ಪಂ. ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನವರಾಗಿರಬೇಕು.   

ವೇತನ ಶ್ರೇಣಿ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 52,650  ರಿಂದ 97,100 ರೂ. ವೇತನವನ್ನು  ನಿಗದಿಪಡಿಸಲಾಗಿದೆ.

ನೇಮಕಾತಿ ಪ್ರಕ್ರಿಯೆ: ಅರ್ಜಿದಾರರನ್ನು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. 

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು ಸಾಮಾನ್ಯ ಅಭ್ಯರ್ಥಿಗಳು 600 ರೂ. ಪ್ರವರ್ಗ- 2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳು 300 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ ಅರ್ಜಿ ಶುಲ್ಕವನ್ನು ನಿಗದಿಪಡಿಲಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ನಂತರ ಯಾವುದೇ ಕಾಮನ್ ಸರ್ವೀಸ್ ಸೆಂಟರ್ ಗಳಲ್ಲಿ ಅಥವಾ ನೆಟ್ ಬ್ಯಾಂಕಿಂಗ್ /ಡೆಬಿಟ್ ಕಾರ್ಡ್ /ಕ್ರೆಡಿಟ್ ಕಾರ್ಡ್ ಮೂಲಕ ಅರ್ಜಿ ಶುಲ್ಕವನ್ನು ಆಗಸ್ಟ್ 11,2020ರೊಳಗೆ ಪಾವತಿಸಬೇಕಿರುತ್ತದೆ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

click me!