ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮತ್ತಷ್ಟು ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.
ಬೆಂಗಳೂರು, (ಆ. 21): ಕರ್ನಾಟಕ ಲೋಕಸೇವಾ ಆಯೋಗ ಲೋಕೋಪಯೋಗಿ ಇಲಾಖೆಯಲ್ಲಿನ ಗ್ರೂಪ್ 'ಸಿ' ತಾಂತ್ರಿಕೇತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.
ಈ ಬಗ್ಗೆ ಅಧಿಕೃತ ವೆಬ್ ತಾಣದಲ್ಲಿ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು 19/9/2020ರೊಳಗೆ ಸಲ್ಲಿಸಲು ಕೋರಲಾಗಿದೆ.
undefined
ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಶೈಕ್ಷಣಿಕ ವಿದ್ಯಾರ್ಹತೆ: ಮೆಟ್ರಿಕ್ಯುಲೇಷನ್/ ಎಸ್ಎಸ್ಎಲ್ ಸಿ ಅಥವಾ ತತ್ಸಮಾನ. ಪಿಯುಸಿ, ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ತೇರ್ಗಡೆಯಾಗಿರಬೇಕು.
ವಯೋಮಿತಿ: ಕನಿಷ್ಠ ವಯೋಮಿತಿ 18, ಗರಿಷ್ಠ ವಯೋಮಿತಿ 35 ವರ್ಷಗಳು. ಪ್ರವರ್ಗ -2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು. ಪ. ಜಾ., ಪ.ಪಂ, ಪ್ರವರ್ಗ -1ರ ಅಭ್ಯರ್ಥಿಗಳಿಗೆ 40 ವರ್ಷಗಳು.
ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳು 600 ರೂ. ಪ್ರವರ್ಗ (2)ಎ, (2)ಬಿ, 3(ಎ), 3(ಬಿ) ಅಭ್ಯರ್ಥಿಗಳಿಗೆ 300 ರೂ., ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ/ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿಗಳನ್ನು ಸಲ್ಲಿಸಿದ ನಂತರ ಅರ್ಜಿಯ ಪಕ್ಕದಲ್ಲಿ 'ಪೇ ನೌ' ಎಂಬ ಲಿಂಕ್ ಕಾಣಿಸುತ್ತದೆ. ಅಲ್ಲಿ ಕ್ಲಿಕ್ ಮಾಡುವ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 7406086807/6363754183.