ಕರ್ನಾಟಕ ಲೋಕಸೇವಾ ಆಯೋಗವು ಖಾಲಿ ಇರುವ ಒಟ್ಟು 16 ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಮಾರ್ಚ್ 30 ರಿಂದ ಎಪ್ರಿಲ್ 16ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಬೆಂಗಳೂರು(ಮಾ.26): ಕರ್ನಾಟಕ ಲೋಕಸೇವಾ ಆಯೋಗವು (Karnataka Public Service Commission) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 16 ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (Assistant Conservator of Forest) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮಾರ್ಚ್ 30 ರಿಂದ ಎಪ್ರಿಲ್ 16ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ https://kpsc.kar.nic.in/ ಗೆ ಭೇಟಿ ನೀಡಲು ಕೋರಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕಟಣೆ ಪ್ರಕಾರ ಖಾಲಿ ಇರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಅರಣ್ಯಶಾಸ್ತ್ರದಲ್ಲಿ B.Sc ಪದವಿ ಮಾಡಿರಬೇಕು.
ವಯೋಮಿತಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕಟಣೆ ಪ್ರಕಾರ ಖಾಲಿ ಇರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 35 ವರ್ಷದ ಒಳಗಿರಬೇಕು.
Vijaya Nagara Anganwadi Recruitment 2022: ವಿಜಯನಗರ ಜಿಲ್ಲೆ ಅಂಗನವಾಡಿ ನೇಮಕಾತಿ
ಅರ್ಜಿ ಶುಲ್ಕ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕಟಣೆ ಪ್ರಕಾರ ಖಾಲಿ ಇರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಎಲ್ಲಾ ವರ್ಗದ ಅಭ್ಯರ್ಥಿಗಳು ₹35 ಅರ್ಜಿ ಪ್ರಕ್ರಿಯೆ ಶುಲ್ಕ ಪಾವತಿಸಬೇಕು. ಜೊತೆಗೆ SC/ST/Cat-I/Ex-Servicemen ಅಭ್ಯರ್ಥಿಗಳು ₹300 ರೂ ಅರ್ಜಿ ಶುಲ್ಕ ಮತ್ತು ಇತರ ಎಲ್ಲಾ ಅಭ್ಯರ್ಥಿಗಳು ₹500 ರೂ ಅರ್ಜಿ ಶುಲ್ಕ ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕಟಣೆ ಪ್ರಕಾರ ಖಾಲಿ ಇರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ವ್ಯಕ್ತಿತ್ವ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ ವಿವರ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕಟಣೆ ಪ್ರಕಾರ ಖಾಲಿ ಇರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹21400 ರಿಂದ ₹62600 ವೇತನ ಇರಲಿದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಮಾರ್ಚ್ 30
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಎಪ್ರಿಲ್ 16
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ ಎಪ್ರಿಲ್ 18
ಮುಖ್ಯ ಪರೀಕ್ಷೆಯ ದಿನಾಂಕ: ಮೇ 5
Bagalkot District Court Recruitment 2022 ಒಟ್ಟು 54 ವಿವಿಧ ಹುದ್ದೆಗಳಿಗೆ ನೇಮಕಾತಿ
ಪ್ರಾಜೆಕ್ಟ್ ವಿಜ್ಞಾನಿ ಹುದ್ದೆಗೆ ನಿಮ್ಹಾನ್ಸ್ ಅರ್ಜಿ ಆಹ್ವಾನ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು (National Institute of Mental Health and Neuro Sciences) ಇಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 1 ಪ್ರಾಜೆಕ್ಟ್ ವಿಜ್ಞಾನಿ (Project Scientist) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 28 ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ನಿಮ್ಹಾನ್ಸ್ ನ ಅಧಿಕೃತ ವೆಬ್‌ತಾಣ nimhans.ac.in ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಪ್ರಾಜೆಕ್ಟ್ ವಿಜ್ಞಾನಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಸ್ನಾತಕೋತ್ತರ ಪದವಿ, ಪಿಎಚ್‌ಡಿ ಪೂರ್ಣಗೊಳಿಸಿರಬೇಕು.