KPSC Recruitment 2022: ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ

By Suvarna NewsFirst Published Feb 25, 2022, 7:16 PM IST
Highlights

ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಬಿ ವೃಂದದ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಫೆಬ್ರವರಿ  28 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಕೊನೆಯ ದಿನಾಂಕ ಮಾರ್ಚ್ 30 ಆಗಿದೆ. 

ಬೆಂಗಳೂರು(ಫೆ.25): ಕರ್ನಾಟಕ ಲೋಕಸೇವಾ ಆಯೋಗವು (Karnataka Public Service Commission - KPSC) ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಬಿ ವೃಂದದ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಇಲಾಖೆಯಲ್ಲಿ ಒಟ್ಟು 188  ಸಹಾಯಕ ಅಭಿಯಂತರರು ಗ್ರೇಡ್ 1 (Assistant Engineer) ಹುದ್ದೆಗಳು ಖಾಲಿ ಇದ್ದು,  ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ (online) ಮೂಲಕ ಫೆಬ್ರವರಿ  28 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಕೊನೆಯ ದಿನಾಂಕ ಮಾರ್ಚ್ 30 ಆಗಿದೆ. ಆಸಕ್ತರು ಇಲಾಖೆಯ ಅಧಿಕೃತ ವೆಬ್‌ತಾಣ http://kpsc.kar.nic.in/ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.

ಶೈಕ್ಷಣಿಕ ವಿದ್ಯಾರ್ಹತೆ:  ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಬಿ ವೃಂದದ  ಸಹಾಯಕ ಇಂಜಿನಿಯರ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ  B.E in Civil / Environmental ಪದವಿ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ: ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಬಿ ವೃಂದದ  ಸಹಾಯಕ ಇಂಜಿನಿಯರ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು  ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ  ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕಕ್ಕೆ ಅಧಿಸೂಚನೆ, ಮೊದಲ ಬಾರಿಗೆ ತೃತೀಯ ಲಿಂಗಿಗಳಿಗೂ ಮೀಸಲಾತಿ!

ಅರ್ಜಿ ಶುಲ್ಕ:  ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಬಿ ವೃಂದದ  ಸಹಾಯಕ ಇಂಜಿನಿಯರ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ವರ್ಗಾವಾರ ಅಭ್ಯರ್ಥಿಗಳಿಗೆ ವಿಧಿಸಿರುವ ಅರ್ಜಿ ಶುಲ್ಕದ ಮಾಹಿತಿ ಇಂತಿದೆ.
ಸಾಮಾನ್ಯ ಅಭ್ಯರ್ಥಿಗಳು – ರೂ. 600
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50
ಎಸ್ಸಿ, ಎಸ್ಟಿ, ಪ್ರ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

ಶುಲ್ಕ ಪಾವತಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಫೆಬ್ರವರಿ 28, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 30, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮಾರ್ಚ್ 31, 2022

Bellary Anganawadi Recruitment 2022: ಬಳ್ಳಾರಿಯ ವಿವಿಧ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ವಿಧಾನ: ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಬಿ ವೃಂದದ  ಸಹಾಯಕ ಇಂಜಿನಿಯರ್‌ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕನ್ನಡ ಭಾಷಾ ಪರೀಕ್ಷೆ,  ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಗಳಿಸಿದ ಶೇಕಡಾವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುತ್ತದೆ.

ವೇತನ ವಿವರ: ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಬಿ ವೃಂದದ  ಸಹಾಯಕ ಇಂಜಿನಿಯರ್‌ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 43,100 ರಿಂದ ರೂ. 83,900 ದೊರೆಯಲಿದೆ.

ಅರ್ಜಿ ಸಲ್ಲಿಕೆಯ ವಿಧಾನ :ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್  http://www.kpsc.kar.nic.in/ ಗೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

click me!