ಕೆಪಿಎಸ್‌ಸಿಯಿಂದ ನೇಮಕಾತಿ ಸುಗ್ಗಿ, 247 ಪಿಡಿಒ, 400ಕ್ಕೂ ಹೆಚ್ಚು ಗ್ರೂಪ್ ಸಿ ಹುದ್ದೆ ಅರ್ಜಿ ಆಹ್ವಾನ

By Kannadaprabha News  |  First Published Mar 16, 2024, 12:48 PM IST

ಹಲವು ತಿಂಗಳುಗಳಿಂದ ಅರ್ಜಿ ಸಲ್ಲಿಸಲು ಕಾಯುತ್ತಿದ್ದ ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಸಿಹಿ ಸುದ್ದಿ ನೀಡಿದ್ದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಹಾಗೂ ವಿವಿಧ ಇಲಾಖೆಗಳ ಗ್ರೂಪ್ ಸಿ ಹುದ್ದೆಗಳು ಸೇರಿದಂತೆ ಒಟ್ಟು 734 ಹುದ್ದೆಗಳ ನೇಮಕಾತಿಗೆ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.


 ಬೆಂಗಳೂರು (ಮಾ.16): ಹಲವು ತಿಂಗಳುಗಳಿಂದ ಅರ್ಜಿ ಸಲ್ಲಿಸಲು ಕಾಯುತ್ತಿದ್ದ ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಸಿಹಿ ಸುದ್ದಿ ನೀಡಿದ್ದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಹಾಗೂ ವಿವಿಧ ಇಲಾಖೆಗಳ ಗ್ರೂಪ್ ಸಿ ಹುದ್ದೆಗಳು ಸೇರಿದಂತೆ ಒಟ್ಟು 734 ಹುದ್ದೆಗಳ ನೇಮಕಾತಿಗೆ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

ಸುಮಾರು ಏಳು ವರ್ಷಗಳ ನಂತರ ಪಿಡಿಒ ನೇಮಕಾತಿಗೆ ಚಾಲನೆ ದೊರಕಿದ್ದು, ಕಲ್ಯಾಣ ಕರ್ನಾಟಕದ 97 ಹುದ್ದೆಗಳು ಸೇರಿ ಒಟ್ಟು 247 ಪಿಡಿಒ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾಲಯಗಳ ಯಾವುದೇ ಪದವೀಧರರು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದಾರೆ. ಏ.15ರಿಂದ ಮೇ 15ರ ವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Tap to resize

Latest Videos

undefined

ಚುನಾವಣಾ ಬಾಂಡ್‌: ದೇಣಿಗೆ ಕೊಟ್ಟ ಕಂಪೆನಿಗಳ ವಿರುದ್ಧ ತನಿಖೆ ಆರಂಭ, ತ.ನಾಡಿನ ಲಾಟರಿ ಕಿಂಗ್‌ ಅತಿದೊಡ್ಡ ದೇಣಿಗೆದಾರ!

400ಕ್ಕೂ ಹೆಚ್ಚು ಗ್ರೂಪ್ ಸಿ ಹುದ್ದೆಗಳು: ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಎಂಜಿನಿಯರ್, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಲ್ಲಿ ಕೈಗಾರಿಕಾ ವಿಸ್ತರಣಾಧಿಕಾರಿ, ಪೌರಾಡಳಿತ ನಿರ್ದೇಶನಾಲಯದಲ್ಲಿ ಕಿರಿಯ ಆರೋಗ್ಯ ನಿರೀಕ್ಷಕರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಕಿರಿಯ ಎಂಜಿನಿಯರ್ ಹುದ್ದೆಗಳು ಸೇರಿದಂತೆ 400ಕ್ಕೂ ಹೆಚ್ಚು ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಪ್ರತ್ಯೇಕ ಅಧಿಸೂಚನೆಗಳನ್ನು ಹೊರಡಿಸಲಾಗಿದೆ. ಉಳಿಕೆ ಮೂಲವೃಂದ ಮತ್ತು ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಪ್ರತ್ಯೇಕ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಏಪ್ರಿಲ್ 29ರಿಂದ ಮೇ 28ರವರೆಗೆ ಅರ್ಜಿ ಸಲ್ಲಿಸಬಹುದು.

ಡಿಪ್ಲೋಮಾ ಎಂಜಿನಿಯರಿಂಗ್, ಸಿವಿಲ್ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವೀಧರರು ಹಾಗೂ ಇನ್ನಿತರ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಕೆಪಿಎಸ್‌ಸಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

 

click me!