ಕರ್ನಾಟಕ ಲೋಕಸೇವಾ ಆಯೋಗವು ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ 2ನೇ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಪ್ರಕಟಿಸಿದೆ. 134 ಹುದ್ದೆಗಳಿಗೆ 11 ಇಲಾಖೆಗಳಿಂದ ಸ್ವೀಕೃತವಾದ ಪ್ರಸ್ತಾವನೆಗಳ ಆಧಾರದ ಮೇಲೆ ಈ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ.
ಬೆಂಗಳೂರು (ಮಾ.25): ರಾಜ್ಯ ಸರ್ಕಾರ ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದದ ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ 2ನೇ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟ ಮಾಡಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ತಿಳಿಸಿದ್ದಾರೆ.
ಕರ್ನಾಟಕ ಲೋಕಸೇವಾ ಅಧಿಸೂಚಿಸಿರುವ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದದ-1122 ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು 2023 ಜನವರಿ 09 ರಂದು ಹಾಗೂ ಪರಿಷ್ಕೃತ ಅಂತಿಮ ಆಯ್ಕೆಪಟ್ಟಿಯನ್ನು 2023ರ ಮಾ.14 ರಂದು ಮತ್ತು ಹೆಚ್ಚುವರಿ ಪಟ್ಟಿಯನ್ನು 2023ರ ಮೇ 5ರಂದು ಹಾಗೂ 2024 ಜೂ.11ರಂದು ಮೊದಲ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ.
ಇದನ್ನೂ ಓದಿ: ಬೇಸಿಗೆಯಲ್ಲಿ ಕಡಿಮೆ ಬಜೆಟ್‌ನಲ್ಲಿ ಲಕ್ಷ ಲಕ್ಷ ಸಂಪಾದಿಸೋ ಬೆಸ್ಟ್ ಬಿಸಿನೆಸ್ ಐಡಿಯಾ: ಈ ಉದ್ಯಮಕ್ಕೆ ಭಾರೀ ಡಿಮ್ಯಾಂಡ್!
ಪ್ರಸ್ತುತ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಗಾಗಿ 11 ಇಲಾಖೆಗಳಿಂದ ಸ್ವೀಕೃತವಾದ ಪ್ರಸ್ತಾವನೆಯ ಕಾಲಾನುಕ್ರಮದನುಸಾರ 134 ಹುದ್ದೆಗಳ 2ನೇ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಹಾಗೂ ಕಟ್ಆೆಫ್ ಅಂಕಗಳ ಪಟ್ಟಿಯನ್ನು ಸಿದ್ಧಪಡಿಸಿ 2025ರ ಮಾ.25 ರಂದು ಆಯೋಗದ ವೆಬ್ ಸೈಟ್ http://kpsc.kar.nic.in ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.