247 ಪಿಡಿಒಗಳು, 327 ಗ್ರೂಪ್‌ ಬಿ ಹುದ್ದೆಗೆ ಕೆಪಿಎಸ್‌ಸಿ ಅರ್ಜಿ ಆಹ್ವಾನ

Published : Apr 16, 2024, 06:46 AM IST
247 ಪಿಡಿಒಗಳು, 327 ಗ್ರೂಪ್‌ ಬಿ ಹುದ್ದೆಗೆ ಕೆಪಿಎಸ್‌ಸಿ ಅರ್ಜಿ ಆಹ್ವಾನ

ಸಾರಾಂಶ

ಕಲ್ಯಾಣ ಕರ್ನಾಟಕ ಭಾಗಕ್ಕೆ 97 ಪಿಡಿಒ ಹುದ್ದೆಗಳು ಹಾಗೂ ಉಳಿಕೆ ಮೂಲ ವೃಂದದಲ್ಲಿ 150 ಪಿಡಿಒ ಹುದ್ದೆಗಳಿಗೆ ಕೆಪಿಎಸ್‌ಸಿಯಿಂದ ನೇಮಕಾತಿ ನಡೆಸಲಾಗುತ್ತಿದೆ. ಅರ್ಜಿ ಸಲ್ಲಿಸಲು ಮೇ 15 ಕಡೆಯ ದಿನಾಂಕವಾಗಿದೆ.

ಬೆಂಗಳೂರು(ಏ.16):  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 247 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳು ಹಾಗೂ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 327 ಗ್ರೂಪ್-ಬಿ ಹುದ್ದೆಗಳು ಸೇರಿ ಒಟ್ಟು 574 ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿಯಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.

ಕಲ್ಯಾಣ ಕರ್ನಾಟಕ ಭಾಗಕ್ಕೆ 97 ಪಿಡಿಒ ಹುದ್ದೆಗಳು ಹಾಗೂ ಉಳಿಕೆ ಮೂಲ ವೃಂದದಲ್ಲಿ 150 ಪಿಡಿಒ ಹುದ್ದೆಗಳಿಗೆ ಕೆಪಿಎಸ್‌ಸಿಯಿಂದ ನೇಮಕಾತಿ ನಡೆಸಲಾಗುತ್ತಿದೆ. ಅರ್ಜಿ ಸಲ್ಲಿಸಲು ಮೇ 15 ಕಡೆಯ ದಿನಾಂಕವಾಗಿದೆ.

ಸ್ಟಾಫ್ ಸೆಲೆಕ್ಷನ್ ಕಮಿಷನ್‌ ಇಂಜಿನಿಯರ್ ಹುದ್ದೆ, ಏಪ್ರಿಲ್‌ 18 ಅರ್ಜಿ ಸಲ್ಲಿಸಲು ಕೊನೆ ದಿನ

ಅಲ್ಲದೇ, ಬಿಬಿಎಂಪಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಂತರ್ಜಲ ನಿರ್ದೇಶನಾಲಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 327 ಗ್ರೂಪ್-ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಮೇ 14 ಕಡೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗೆ ಕೆಪಿಎಸ್‌ಸಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

PREV
Read more Articles on
click me!

Recommended Stories

ಮಂಗಳೂರು: 'ಡಿಕೆಶಿ ಮುಂದಿನ ಸಿಎಂ’ ಘೋಷಣೆ ಕೂಗಿದ ಐವನ್, ಮಿಥುನ್‌ಗೆ ನೋಟಿಸ್?
ಸೋಶಿಯಲ್ ಮೀಡಿಯಾದಿಂದ ದೂರವಿದ್ದು 10 ಸರ್ಕಾರಿ ನೌಕರಿ ಪಡೆದು ಸ್ಫೂರ್ತಿಯಾದ ಸಾಧಕ!