ಕೆಪಿಎಸ್‌ಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಮತ್ತು ಹೈ-ಕ ವೃಂದದಲ್ಲಿನ 247 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ.
ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಮತ್ತು ಹೈ-ಕ ವೃಂದದಲ್ಲಿನ 247 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಏಪ್ರಿಲ್ 15ರಿಂದ ಆನ್‌ಲೈನ್ ಮೂಲಕ ಅರ್ಜಿ https://kpsc.kar.nic.in/ ಸಲ್ಲಿಸಬಹುದು.
ಹುದ್ದೆಯ ವಿವರ
ಪಂಚಾಯತ್ ಅಭಿವೃದ್ಧಿ ಅಧಿಕಾರಿ : 247 ಹುದ್ದೆ
undefined
1. ಉಳಿಕೆ ಮೂಲ ವೃಂದ : 150 ಹುದ್ದೆ
2. ಹೈದರಾಬಾದ್-ರ‍್ನಾಟಕ ವೃಂದ : 97 ಹುದ್ದೆ
ಪ್ರಮುಖ ದಿನಾಂಕಗಳು
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 15-04-2024
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-05-2024
ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ: ರೂ. 600
ವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ: ರೂ. 300
ಮಾಜಿ ಸೈನಿಕರಿಗೆ: ರೂ.50
ಎಸ್ ಸಿ/ ಎಸ್ ಟಿ/ ಪ್ರವರ್ಗ -1, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: ಶುಲ್ಕವಿಲ್ಲ
ವಯಸ್ಸಿನ ಮಿತಿ (15-05-2024 ರಂತೆ) :
ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ: 35 ವರ್ಷಗಳು
ವೇತನ ಶ್ರೇಣಿ: ಮಾಸಿಕ ರೂ. 37900 - 70850
ಶೈಕ್ಷಣಿಕ ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.
ಆಯ್ಕೆ ವಿಧಾನ: ಈ ಮೇಲ್ಕಂಡ ಹುದ್ದೆಗಳನ್ನು ಕರ್ನಾಟಕ ನಾಗರಿಕ ಸೇವೆಗಳ ನಿಯಮಗಳನ್ವಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಸ್ಮರ್ಧಾತ್ಮಕ ಪರೀಕ್ಷೆಯ ಮಾಹಿತಿ: ಪರೀಕ್ಷೆಯು ಸಾಮಾನ್ಯ ಪತ್ರಿಕೆ ಮತ್ತು ನಿರ್ಧಿಷ್ಟ ಪತ್ರಿಕೆಯ 100 ಅಂಕಗಳ
ಎರಡು ಪತ್ರಿಕೆಗಳನ್ನು ಒಳಗೊಂಡಿದ್ದು, ವಸ್ತುನಿಷ್ಠ ಬಹು ಆಯ್ಕೆಯ ಮಾದರಿಯಲ್ಲಿ ಇದ್ದು, ಎರಡು ಗಂಟೆಯ ಅವಧಿಯಲ್ಲಿ
ನಡೆಸಲಾಗುತ್ತದೆ. ತಪ್ಪು ಉತ್ತರಕ್ಕೆ ನಾಲ್ಲನೇ ಒಂದು ಋಣಾತ್ಮಕ ಅಂಕಗಳನ್ನು ಕಡಿತಗೊಳಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ : https://kpsc.kar.nic.in/